: ನಿಮ್ಮ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಹೀಗಿದೆ ನೋಡಿ.. ಪ್ರತಿದಿನ ಸಾಮಾನ್ಯವಾಗಿ ಬಂಗಾರ, ಬೆಳ್ಳಿ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವು ಆಭರಣ ಖರೀದಿಗೆ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಶ್ರಾವಣ ಮಾಸ ಮುಗಿದಿದ್ದು, ಆದರೂ ಸದ್ಯ ಸಾಲು ಸಾಲು ಹಬ್ಬಗಳು ಮುಂದಿದೆ. ಇತ್ತೀಚೆಗೆ ಚಿನ್ನ(), ಬೆಳ್ಳಿ () ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಆದರೂ, ಇಂದು ಬಂಗಾರ, ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಶುಭ ಸಮಾರಂಭಗಳು ಇದ್ದರಂತೂ ಆಭರನ ಖರೀದಿ ವಹಿವಾಟು ಜೋರಾಗಿರುತ್ತದೆ. ಜೇಬಿಗೆ ಹೊರೆ ಎನಿಸಿದರೂ ಆಭರಣಗಳ ಖರೀದಿ ಇದ್ದೇ ಇರುತ್ತದೆ. ನೀವೂ ಸಹ, ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ, ಇಂದು ಬೆಂಗಳೂರಿನಲ್ಲಿ () ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ನಿನ್ನೆಯಷ್ಟೇ ಇದ್ದು, ಬೆಲೆ ವಿವರ ಇಲ್ಲಿದೆ..ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,73524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,165 ಇದನ್ನು ಓದಿ:, : ಚಿಕ್ಕಮಗಳೂರಲ್ಲಿ ಇಳಿಕೆ, ಚಿತ್ರದುರ್ಗದಲ್ಲಿ ಹೆಚ್ಚಾದ ಡೀಸೆಲ್‌ ದರ ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,88024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,320 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,35024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,650 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,73,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,16,500 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,350 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,050, ರೂ. 47,300, ರೂ. 47,300 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,450 ರೂ. ಆಗಿದೆ. ನಿನ್ನೆಯ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಸಹ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರ ನಿನ್ನೆಯಷ್ಟೇ ಇದ್ದು. ಅದೇ ರೀತಿ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 607, ರೂ. 6,070 ಹಾಗೂ ರೂ. 60,700 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 60,700 ಆಗಿದ್ದರೆ, ಮುಂಬೈನಲ್ಲಿ ರೂ. 54,800 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 54,800 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 54,800 ಆಗಿದೆ.