: ಇಂದಿನ ಬಂಗಾರ, ಬೆಳ್ಳಿ ದರ ವಿವರ ಹೀಗಿದೆ.. ಚಿನ್ನ ಹಾಗೂ ಬೆಳ್ಳಿ ಖರೀದಿಸೋರಿಗೆ ಇಂದು ಶುಭದಿನ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಹಾಗಾದ್ರೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ. ಬೆಂಗಳೂರು(ಆ.20):ಯಾವಾಗ ಚಿನ್ನ ಹಾಗೂ ಬೆಳ್ಳಿ ಬೆಲೆ ತಗ್ಗುತ್ತದೋ ಆಗ ಖರೀದಿಸೋದು ಉತ್ತಮ. ಚಿನ್ನದಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಮೋಸವಂತೂ ಆಗೋದಿಲ್ಲ. ಚಿನ್ನ ಹಾಗೂ ಬೆಳ್ಳಿ ಒಡವೆ ಅಥವಾ ವಸ್ತುಗಳು ಕಷ್ಟ ಕಾಲದಲ್ಲಿ ನೆರವಿಗೆ ಬರುತ್ತವೆ ಕೂಡ. ಹಾಗಾಗಿ ಚಿನ್ನ ಹಾಗೂ ಬೆಳ್ಳಿ ಮೇಲಿನ ಹೂಡಿಕೆ ವ್ಯರ್ಥ ಎಂದು ಭಾವಿಸಬೇಡಿ. ಈಗಂತೂ ಚಿನ್ನ ಹಾಗೂ ಬೆಳ್ಳಿ ಎರಡೂ ಇಳಿಕೆಯ ಹಾದಿ ಹಿಡಿದಿವೆ, ಹೀಗಾಗಿ ಖರೀದಿ ಬಗ್ಗೆ ಯೋಚಿಸೋದು ಉತ್ತಮ. ಹಾಗಾದ್ರೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ. ಒಂದು ಗ್ರಾಂ ಚಿನ್ನ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.4,78024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ.5,215 ಎಂಟು ಗ್ರಾಂ ಚಿನ್ನ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,24024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,720 ಹತ್ತು ಗ್ರಾಂ ಚಿನ್ನ (10GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,80024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,150 ನೂರು ಗ್ರಾಂ ಚಿನ್ನ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,78,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,21,500 ಬೆಂಗಳೂರು ಹಾಗೂ ಇತರೆಡೆ ಇಂದಿನ ಚಿನ್ನದ ದರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.47,850 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,300, ರೂ. 47,800, ರೂ.47,900, ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,950 ರೂ. ಆಗಿದೆ. ಬೆಂಗಳೂರು ಹಾಗೂ ಇತರ ನಗರಗಳಲ್ಲಿ ಬೆಳ್ಳಿ ದರ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಒಂದು ಕೆಜಿ ಬೆಳ್ಳಿ ದರ 56,500ರೂ.ಆಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ.555, ರೂ. 5,550 ಹಾಗೂ ರೂ. 56,500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,300 ಆಗಿದ್ದರೆ, ಮುಂಬೈನಲ್ಲಿ ರೂ. 56,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 56,500 ಗಳಾಗಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೂಡ ಇಂದಿನ ಬೆಳ್ಳಿ ದರ ರೂ. 56,500 ಆಗಿದೆ.