ಇಳಿದ ಚಿನ್ನ, ಬೆಳ್ಳಿ ದರ: ನಿಮ್ಮ ನಗರಗಳಲ್ಲಿ ಇಂದಿನ ಬೆಲೆ ವಿವರ ಹೀಗಿದೆ.. ಬಂಗಾರ ದರ ಹೆಚ್ಚಾದರೆ ಆಭರಣ ಖರೀದಿಸಲು ಹಲವು ಹಿಂದೇಟು ಹಾಕುತ್ತಾರೆ, ಅಲ್ಲದೆ, ಬಂಗಾರದ ಮೇಲೆ ಹೂಡಿಕೆ ಮಾಡುವವರು ಸಹ ಹಿಂದೆಮುಂದೆ ನೋಡುತ್ತಾರೆ. ಹಾಗಾದರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಇಲ್ಲಿದೆ ನೋಡಿ.. ಬೆಂಗಳೂರು(ಆ.12):ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಬಂಗಾರ, ಬೆಳ್ಳಿ ದರವೂ ಹೆಚ್ಚಾಗಿತ್ತು. ನಂತರ ಅಲ್ಪ ಇಳಿಕೆಯಾದರೂ ಈ ವಾರ ಮತ್ತೆ ಚಿನ್ನದ ದರ ಹೆಚ್ಚಾಗುತ್ತಿದೆ. ಆದರೆ, ದೇಶದಲ್ಲಿಂದು ಬೆಳ್ಳಿ ದರ ಇಳಿಕೆಯಾಗಿದ್ದು, ಆದರೆ ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಶ್ರಾವಣ ಮಾಸ ಹಿನ್ನೆಲೆ ಶುಭ ಸಮಾರಂಭಗಳು ಹೆಚ್ಚು ನಡೆಯುತ್ತಿರುತ್ತದೆ. ಈ ಹಿನ್ನೆಲೆ ಆಭರಣ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ. ಶುಭ ಸಮಾರಂಭಗಳು ಇದೆ ಎಂದರೆ ಬಂಗಾರ, ಬೆಳ್ಳಿ ದರ ಎಷ್ಟೇ ಇದ್ದರೂ ಖರೀದಿ ಮಾಡಲೇಬೇಕಾಗುತ್ತದೆ. ಇದೇ ರೀತಿ ನಿಮಗೂ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರಏರಿಕೆಯಾಗಿದ್ದು, ಇಂದಿನ ಬೆಲೆ ವಿವರ ಇಲ್ಲಿದೆ.. ಒಂದು ಗ್ರಾಂ ಚಿನ್ನ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,77524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,209 ಎಂಟು ಗ್ರಾಂ ಚಿನ್ನ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,20024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,672 ಹತ್ತು ಗ್ರಾಂ ಚಿನ್ನ (10GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,75024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,090 ನೂರು ಗ್ರಾಂ ಚಿನ್ನ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,77,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,20,900 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,800 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,900, ರೂ. 47,750, ರೂ. 47,750 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,900 ರೂ. ಆಗಿದೆ. ಇಂದಿನ ಬೆಳ್ಳಿ ದರ ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ವ್ಯತ್ಯಾಸವಾದಂತೆ ಚಿನ್ನ, ಬೆಳ್ಳಿ ದರದಲ್ಲೂ ಏರಿಕೆ ಇಳಿಕೆ ಉಂಟಾಗುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್‌ ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಇಳಿಕೆ ಕಂಡಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 644, ರೂ. 6,440 ಹಾಗೂ ರೂ. 64,400 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,400 ಆಗಿದ್ದರೆ, ಮುಂಬೈನಲ್ಲಿ ರೂ. 58,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 58,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲೂ ಇಂದಿನ ಬೆಳ್ಳಿ ದರ ರೂ. 58,500 ಆಗಿದೆ.