ಮತ್ತಷ್ಟು ಗಗನಕ್ಕೇರಿದ ಬಂಗಾರದ ಬೆಲೆ, ಇಳಿಕೆಯಾದ ಬೆಳ್ಳಿ ದರ: ; ನಿಮ್ಮ ನಗರಗಳಲ್ಲಿ ಇಂದಿನ ಬೆಲೆ ವಿವರ ಹೀಗಿದೆ.. ಬಂಗಾರ ದರ ಹೆಚ್ಚಾದರೆ ಆಭರಣ ಖರೀದಿಸಲು ಹಲವು ಹಿಂದೇಟು ಹಾಕುತ್ತಾರೆ, ಅಲ್ಲದೆ, ಬಂಗಾರದ ಮೇಲೆ ಹೂಡಿಕೆ ಮಾಡುವವರು ಸಹ ಹಿಂದೆಮುಂದೆ ನೋಡುತ್ತಾರೆ. ಹಾಗಾದರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಇಲ್ಲಿದೆ ನೋಡಿ.. ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಬಂಗಾರ, ಬೆಳ್ಳಿ ದರವೂ ಹೆಚ್ಚಾಗಿತ್ತು. ನಂತರ ಅಲ್ಪ ಇಳಿಕೆಯಾದರೂ ಈ ವಾರ ಮತ್ತೆ ಚಿನ್ನದ ದರ ಹೆಚ್ಚಾಗುತ್ತಿದೆ. ಆದರೆ, ದೇಶದಲ್ಲಿಂದು ಬೆಳ್ಳಿ ದರ ಇಳಿಕೆಯಾಗಿದ್ದು, ಆದರೆ ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಶ್ರಾವಣ ಮಾಸ ಹಿನ್ನೆಲೆ ಶುಭ ಸಮಾರಂಭಗಳು ಹೆಚ್ಚು ನಡೆಯುತ್ತಿರುತ್ತದೆ. ಈ ಹಿನ್ನೆಲೆ ಆಭರಣ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ. ಶುಭ ಸಮಾರಂಭಗಳು ಇದೆ ಎಂದರೆ ಬಂಗಾರ, ಬೆಳ್ಳಿ ದರ ಎಷ್ಟೇ ಇದ್ದರೂ ಖರೀದಿ ಮಾಡಲೇಬೇಕಾಗುತ್ತದೆ. ಇದೇ ರೀತಿ ನಿಮಗೂ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರಏರಿಕೆಯಾಗಿದ್ದು, ಇಂದಿನ ಬೆಲೆ ವಿವರ ಇಲ್ಲಿದೆ.. ಉಡುಪಿಯಲ್ಲಿ ಹೆಚ್ಚಾದ ಇಂಧನ ದರ: ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,80124 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,237 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,40824 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,896 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,01024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,370 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,80,10024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,23,700 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,010 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 49,010, ರೂ. 47,960, ರೂ. 47,960 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,110 ರೂ. ಆಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ವ್ಯತ್ಯಾಸವಾದಂತೆ ಚಿನ್ನ, ಬೆಳ್ಳಿ ದರದಲ್ಲೂ ಏರಿಕೆ ಇಳಿಕೆ ಉಂಟಾಗುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಇಳಿಕೆ ಕಂಡಿದ್ದರೂ, ಆದರೆ ರಾಜ್ಯ ರಾಜಧಾನಿಯಲ್ಲಿ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 645, ರೂ. 6,450 ಹಾಗೂ ರೂ. 64,500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,500 ಆಗಿದ್ದರೆ, ಮುಂಬೈನಲ್ಲಿ ರೂ. 58,700 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 58,700 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲೂ ಇಂದಿನ ಬೆಳ್ಳಿ ದರ ರೂ. 58,700 ಆಗಿದೆ.