: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್‌: ಮತ್ತೆ ಹೆಚ್ಚಾದ ಬಂಗಾರ, ಬೆಳ್ಳಿ ದರ ಬಂಗಾರ, ಬೆಳ್ಳಿ ದರ ಹೆಚ್ಚಾದ ಕಾರಣ, ಬಂಗಾರದ ಮೇಲೆ ಹೂಡಿಕೆ ಮಾಡುವವರು ಹಿಂದೇಟು ಹಾಕುತ್ತಿದ್ದಾರೆ. ನೀವು ಸಹ ಬಂಗಾರ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಇಲ್ಲಿದೆ ನೋಡಿ.. ಶ್ರಾವಣ ಮಾಸ ಹಿನ್ನೆಲೆ ಶುಭ ಸಮಾರಂಭಗಳು ಹೆಚ್ಚು ನಡೆಯುತ್ತಿರುತ್ತದೆ. ಈ ಹಿನ್ನೆಲೆ ಆ ಆಭರಣ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ. ಶುಭ ಸಮಾರಂಭಗಳು ಇದೆ ಎಂದರೆ ಬಂಗಾರ, ಬೆಳ್ಳಿ ದರ ಎಷ್ಟೇ ಇದ್ದರೂ ಖರೀದಿ ಮಾಡಲೇಬೇಕಾಗುತ್ತದೆ. ಸಾಲು ಸಾಲು ಹಬ್ಬಗಳಿರುವುದರಿಂದ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ.ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಏರಿಕೆಯಾಗಿದ್ದು, ಇಂದಿನ ಬೆಲೆ ವಿವರ ಇಲ್ಲಿದೆ..ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,80024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,236 ಉತ್ತರ ಕನ್ನಡದಲ್ಲಿ 2 ರೂ. ಏರಿಕೆಯಾದ ಪೆಟ್ರೋಲ್‌ ದರ: ನಿಮ್ಮ ನಗರಗಳಲ್ಲಿ ಇಂದಿನ ಇಂಧನ ಬೆಲೆ ವಿವರ ಹೀಗಿದೆ.. ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,40024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,888 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,360 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,80,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,23,600 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,000 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,800, ರೂ. 47,950, ರೂ. 47,950 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,100 ರೂ. ಆಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ವ್ಯತ್ಯಾಸವಾದಂತೆ ಚಿನ್ನ, ಬೆಳ್ಳಿ ದರದಲ್ಲೂ ಏರಿಕೆ ಇಳಿಕೆ ಉಂಟಾಗುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಏರಿಕೆ ಕಂಡಿದ್ದು, ಅದೇ ರೀತಿ ರಾಜ್ಯ ರಾಜಧಾನಿಯಲ್ಲಿ ಸಹ ಬೆಳ್ಳಿ ದರ ಹೆಚ್ಚಾಗಿದೆ.. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 645, ರೂ. 6,450 ಹಾಗೂ ರೂ. 64,500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,500 ಆಗಿದ್ದರೆ, ಮುಂಬೈನಲ್ಲಿ ರೂ. 59,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 59,000 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲೂ ಇಂದಿನ ಬೆಳ್ಳಿ ದರ ರೂ. 59,000 ಆಗಿದೆ.