ಆಭರಣ ಪ್ರಿಯರೇ ಇಲ್ನೋಡಿ: ನಿಮ್ಮ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಹೀಗಿದೆ ನೋಡಿ.. ನೀವು ಬಂಗಾರ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದ್ರೆ ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಇಲ್ಲಿದೆ ನೋಡಿ.. ಶ್ರಾವಣ ಮಾಸದಲ್ಲಿ ಶುಭ ಸಮಾರಂಭಗಳು ಸಾಮಾನ್ಯವಾಗಿ ಹೆಚ್ಚಿರುತ್ತದೆ. ಸಾಲು ಸಾಲು ಹಬ್ಬಗಳೂ ಇರುತ್ತೆ. ಈ ಹಿನ್ನೆಲೆ ಆಭರಣ ಅಂಗಡಿಗಳಲ್ಲಿ ವ್ಯಾಪಾರ ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ. ಇನ್ನು, ಶುಭ ಸಮಾರಂಭಗಳಿಗಂತೂ ಬೆಲೆ ಎಷ್ಟೇ ಇದ್ದರೂ ಖರೀದಿಸಲೇಬೇಕಾಗಿದೆ. ನೀವೂ ಸಹ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರ ಯಥಾಸ್ಥಿತಿ ಕಾಣಿಸಿಕೊಂಡಿದ್ದು, ನಿನ್ನೆಯಷ್ಟೇ ಇದೆ. ದಕ್ಷಿಣ ಕನ್ನಡದಲ್ಲಿ ಇಳಿಕೆಯಾದ ಪೆಟ್ರೋಲ್‌, ಡೀಸೆಲ್‌ ದರ: ನಿಮ್ಮ ನಗರಗಳಲ್ಲಿ ಇಂದಿನ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,76024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,193 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,08024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,544 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,60024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,930 ನೂರು ಗ್ರಾಂ ಚಿನ್ನ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,76,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,19,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,600 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,500, ರೂ. 47,550, ರೂ. 47,550 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,700 ರೂ. ಆಗಿದೆ. ಈ ಎಲ್ಲ ನಗರಗಳಲ್ಲಿ ನಿನ್ನೆ ಸಹ ಇಷ್ಟೇ ದರ ಇತ್ತು. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ವ್ಯತ್ಯಾಸವಾದಂತೆ ಚಿನ್ನ, ಬೆಳ್ಳಿ ದರದಲ್ಲೂ ಏರಿಕೆ ಇಳಿಕೆ ಉಂಟಾಗುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಅದೇ ರೀತಿ ರಾಜ್ಯ ರಾಜಧಾನಿಯಲ್ಲಿ ಸಹ ಬೆಳ್ಳಿ ದರದಲ್ಲಿ ಬದಲಾಣೆಯಾಗಿಲ್ಲ.. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 630, ರೂ. 6,300 ಹಾಗೂ ರೂ. 63,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,000 ಆಗಿದ್ದರೆ, ಮುಂಬೈನಲ್ಲಿ ರೂ. 57,400 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 57,400 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲೂ ಇಂದಿನ ಬೆಳ್ಳಿ ದರ ರೂ. 57,400 ಆಗಿದೆ.