ಆಭರಣ ಪ್ರಿಯರಿಗೆ ಶುಭ ಸುದ್ದಿ: ಇಳಿಕೆಯಾದ ಬೆಳ್ಳಿ ದರ; ನಿಮ್ಮ ನಗರಗಳಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಹೀಗಿದೆ.. ಶುಭ ಸಮಾರಂಭಗಳು ಈಗ ಹೆಚ್ಚಿರುವುದರಿಂದ ಆಭರಣ ಖರೀದಿ ಸಹಜವಾಗಿ ಹೆಚ್ಚಾಗಿರುತ್ತದೆ. ಈ ಹಿನ್ನೆಲೆ ಇಂದಿನ ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ದರ ಹೇಗಿದೆ ನೋಡಿ.. ಶ್ರಾವಣ ಮಾಸ ಆರಂಭವಾಗಿರುವುದರಿಂದ ಶುಭ ಸಮಾರಂಭಗಳು ಹೆಚ್ಚುತ್ತಿವೆ. ಇದರ ಜತೆಗೆ ದೇಶದಲ್ಲಿ ಬಂಗಾರ, ಬೆಳ್ಳಿ ದರವೂ ಗಗನಕ್ಕೇರುತ್ತಿದೆ. ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಬಂಗಾರ, ಬೆಳ್ಳಿ ದರವೂ ಹೆಚ್ಚಾಗಿತ್ತು. ನಂತರ ಅಲ್ಪ ಇಳಿಕೆಯಾದರೂ ಈ ವಾರ ಮತ್ತೆ ಚಿನ್ನದ ದರ ಹೆಚ್ಚಾಗುತ್ತಿದೆ. ಆದರೆ, ಇಂದು ಆಭರಣ ಪ್ರಿಯರಿಗೆ ಶುಭ ಸುದ್ದಿ. ಚಿನ್ನದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ ಇಳಿಕೆಯಾಗಿದೆ. ಇದೇ ರೀತಿ ನಿಮಗೂ ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇನ್ನು, ಇಂದಿನ ಬೆಲೆ ವಿವರ ಇಲ್ಲಿದೆ.. ಬಳ್ಳಾರಿ, ಬೀದರ್‌ನಲ್ಲಿ ಇಳಿಕೆಯಾದ ಇಂಧನ ದರ: ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಹೀಗಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,74024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,165 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,88024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,320 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,35024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,650 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,73,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,16,500 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,400 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,600, ರೂ. 47,350, ರೂ. 47,350 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,550 ರೂ. ಆಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ವ್ಯತ್ಯಾಸವಾದಂತೆ ಚಿನ್ನ, ಬೆಳ್ಳಿ ದರದಲ್ಲೂ ಏರಿಕೆ ಇಳಿಕೆ ಉಂಟಾಗುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರದಲ್ಲಿ ಇಂದು ಇಳಿಕೆಯಾದಂತೆ, ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸಹ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 640, ರೂ. 6,400 ಹಾಗೂ ರೂ. 64,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 64,000 ಆಗಿದ್ದರೆ, ಮುಂಬೈನಲ್ಲಿ ರೂ. 58,600 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 58,600 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲೂ ಇಂದಿನ ಬೆಳ್ಳಿ ದರ ರೂ. 58,600 ಆಗಿದೆ.