ದೇಶದ ಹಲವೆಡೆ ಇಳಿಕೆಯಾದ ಬೆಳ್ಳಿ ದರ: ನಿಮ್ಮ ನಗರಗಳಲ್ಲಿ ಇಂದಿನ ಚಿನ್ನ, ಬೆಲೆ ವಿವರ ಇಲ್ಲಿದೆ.. ದೇಶದ ಹಣದುಬ್ಬರ ಹೆಚ್ಚಾಗಿದ್ದು, ಶ್ರಾವಣ ಮಾಸವಾದ್ದರಿಂದ ಈಗ ಶುಭ ಸಮಾರಂಭಗಳು ಸಹ ಹೆಚ್ಚಾಗಿದೆ. ಈ ಹಿನ್ನೆಲೆ ನೀವು ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಇಂದಿನ ದರ ವಿವರ ಇಲ್ಲಿದೆ ನೋಡಿ.. ಪ್ರತಿ ದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ಅನ್ನೋದನ್ನು ಚೆಕ್‌ ಮಾಡೋದು ಹಲವರ ಅಭ್ಯಾಸವಾಗಿರುತ್ತದೆ. ಇನ್ನು, ಶ್ರಾವಣ ಮಾಸದಲ್ಲಿ ಶುಭ ಸಮಾರಂಭಗಳು ಸಾಮಾನ್ಯವಾಗಿ ಹೆಚ್ಚಿರುತ್ತದೆ. ಮದುವೆ, ಗೃಹ ಪ್ರವೇಶದಂತಹ ಸಮಾರಂಭಗಳಿಗೆ ಸಾಮಾನ್ಯವಾಗಿ ಬೆಲೆ ಎಷ್ಟೇ ಇದ್ದರೂ ಆಭರಣ ಖರೀದಿಸುವ ಅನಿವಾರ್ಯತೆ ಇದ್ದೇ ಇರುತ್ತದೆ. ಅಲ್ಲದೆ, ನೀವೂ ಸಹ ಇಂದು ಬಂಗಾರ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಇದೆಯಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. ಅಂತಾರಾಷ್ಟ್ರಿಯ ಕಾರಣಗಳು, ಷೇರುಪೇಟೆಯಲ್ಲಿ ಏರಿಕೆ - ಇಳಿಕೆ ಕಾರಣದಿಂದಲೂ ಬಂಗಾರ, ಬೆಳ್ಳಿ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ಇನ್ನು, ಇಂದು ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೀದರ್‌, ಉತ್ತರ ಕನ್ನಡದಲ್ಲಿ ಹೆಚ್ಚಾದ ಇಂಧನ ಬೆಲೆ: ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಇಲ್ಲಿದೆ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,77024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,204 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,16024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,632 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,70024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,040 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,77,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,20,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,700 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,650, ರೂ. 47,650, ರೂ. 47,650 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,800 ರೂ. ಆಗಿದೆ. ಈ ಎಲ್ಲ ನಗರಗಳಲ್ಲಿ ನಿನ್ನೆ ಸಹ ಇಷ್ಟೇ ದರ ಇತ್ತು. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಕಡಿಮೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆ ಚಿನ್ನ, ಬೆಳ್ಳಿ ದರದಲ್ಲೂ ಏರಿಳಿತ ಕಾಣುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರ ಇಳಿಕೆಯಾಗಿದ್ದೆ. ಆದರೆ ರಾಜ್ಯ ರಾಜಧಾನಿಯಲ್ಲಿ ಬೆಳ್ಳಿ ದರದಲ್ಲಿ ಬದಲಾಣೆಯಾಗಿಲ್ಲ.. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 636, ರೂ. 6,360 ಹಾಗೂ ರೂ. 63,600 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,600 ಆಗಿದ್ದರೆ, ಮುಂಬೈನಲ್ಲಿ ರೂ. 57,400 ಹಾಗೂ ಕೋಲ್ಕತ್ತದಲ್ಲೂ ರೂ. 57,400 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 57,400 ಆಗಿದೆ.