ಮತ್ತೆ ಏರಿಕೆಯಾದ ಬೆಳ್ಳಿ ದರ, ಯಥಾಸ್ಥಿತಿ ಕಾಯ್ದುಕೊಂಡ ಬಂಗಾರ: ನಿಮ್ಮ ನಗರಗಳಲ್ಲಿ ಇಂದಿನ ಬೆಲೆ ವಿವರ ಹೀಗಿದೆ.. ದೇಶದ ಹಣದುಬ್ಬರ ಹೆಚ್ಚಾಗಿದ್ದು, ಈಗ ಶುಭ ಸಮಾರಂಭಗಳು ಹೆಚ್ಚಾದಂತೆ ಬೆಳ್ಳಿ ದರ ಹೆಚ್ಚಾಗುತ್ತಿರುವುದು ಆಭರಣ ಪ್ರಿಯರಿಗೆ ನಿರಾಸೆ ತಂದಿದೆ. ಬಂಗಾರದ ದರ ಸಹ ನಿನ್ನೆ ಏರಿಕೆಯಾಗಿದ್ದು, ಈ ಹಿನ್ನೆಲೆ ಬಂಗಾರದ ಮೇಲೆ ಹೂಡಿಕೆ ಮಾಡುವವರು ಸಹ ಸ್ವಲ್ಪ ಮುಂದೂಡಿಕೆ ಮಾಡುತ್ತಿದ್ದಾರೆ. ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ನಿನ್ನೆಯಷ್ಟೇ ಏರಿಕೆಯಾಗಿದ್ದ ಬಂಗಾರದ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಅಂದರೆ, ಬೆಂಗಳೂರು ಸೇರಿ ದೇಶದಲ್ಲಿ ಬಂಗಾರದ ದರ ನಿನ್ನೆಯಷ್ಟೇ ಇದೆ. ಇನ್ನೊಂದೆಡೆ, ಬೆಳ್ಳಿ ದರ ಬೆಂಗಳೂರು ಸೇರಿ ದೇಶದಲ್ಲಿ ಮತ್ತಷ್ಟು ಏರಿಕೆಯಾಗಿದ್ದು, ಈ ಹಿನ್ನೆಲೆ ಬೆಳ್ಳಿ ಆಭರಣಗಳನ್ನು ಖರೀದಿಸಲು ಪ್ಲ್ಯಾನ್‌ ಮಾಡುತ್ತಿದ್ದವರಿಗೆ ಈಗ ಆಭರಣ ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಶ್ರಾವಣ ಮಾಸದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವ ಹಿನ್ನೆಲೆ ಈ ಏರಿಕೆಯಾಗುತ್ತಿರಬಹುದೆಂದೂ ಹೇಳಲಾಗಿದೆ. ಇದರಿಂದ ಆಭರಣ ಮಾಡಿಸುವವರ ಜೇಬಿಗೆ ಹೊರೆ ಹೆಚ್ಚಾಗಿದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್‌ ಮಾಡುತ್ತಿದ್ದೀರಾ..? ಹಾಗಾದರೆ, ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. ಒಂದು ಗ್ರಾಂ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,72524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,154 ರಾಜ್ಯದ 13 ಜಿಲ್ಲೆಗಳಲ್ಲಿ ಇಳಿಕೆಯಾದ ಪೆಟ್ರೋಲ್‌ ದರ; ನಿಮ್ಮ ನಗರಗಳಲ್ಲಿ ಇಂದಿನ ಪೆಟ್ರೋಲ್‌, ಡೀಸೆಲ್‌ ಬೆಲೆ ವಿವರ ಇಲ್ಲಿದೆ.. ಎಂಟು ಗ್ರಾಂ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,80024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,232 ಹತ್ತು ಗ್ರಾಂ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,25024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,540 ನೂರು ಗ್ರಾಂ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,72,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,15,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,250 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,150, ರೂ. 47,200, ರೂ. 47,200 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,350 ರೂ. ಆಗಿದೆ. ಇಂದಿನ ಬೆಳ್ಳಿ ದರಇನ್ನೊಂದೆಡೆ, ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಆಗಾಗ ಬೆಲೆಯಲ್ಲಿ ಎರಿಳಿತ ಉಂಟಾಗುತ್ತಿರುತ್ತದೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶದಲ್ಲಿ ಬೆಳ್ಳಿ ದರ ಏರಿಕೆಯಾದಂತೆ, ರಾಜ್ಯ ರಾಜಧಾನಿಯಲ್ಲಿ ಸಹ ಬೆಲೆ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 637, ರೂ. 6,370 ಹಾಗೂ ರೂ. 63,700 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 63,700 ಆಗಿದ್ದರೆ, ದೆಹಲಿಯಲ್ಲಿ ರೂ. 58,400, ಮುಂಬೈನಲ್ಲಿ ರೂ. 58,400 ಹಾಗೂ ಕೋಲ್ಕತ್ತದಲ್ಲೂ ರೂ. 58,400 ಗಳಾಗಿದೆ.