: ಆಭರಣ ಪ್ರಿಯರಿಗೆ ಸಂತಸದ ಸುದ್ದಿ: ಬಂಗಾರ, ಬೆಳ್ಳಿ ದರದಲ್ಲಿ ಇಳಿಕೆ ಹೆಣ್ಮಕ್ಕಳಿಗೆ ಚಿನ್ನವೆಂದರೆ ಅಚ್ಚುಮೆಚ್ಚು. ಈ ಹಿನ್ನೆಲೆ ನಿಮಗಿಂದು ಶುಭ ಸುದ್ದಿ ಇದೆ. ಏಕೆಂದರೆ, ದೇಶದಲ್ಲಿಂದು ಬಂಗಾರ, ಬೆಳ್ಳಿ ದರ ಇಳಿಕೆಯಾಗಿದೆ. ಶುಭ ಕಾರ್ಯಗಳನ್ನಿಟ್ಟುಕೊಂಡವರು ಸಹ ಆರಾಮಗಿ ಚಿನ್ನ ಖರೀದಿಸಬಹುದಾಗಿದ್ದು, ಇತ್ತ ಹೂಡಿಕೆಗಾಗಿ ಚಿನ್ನ ಖರೀದಿಸ ಹೊರಟವರು ಸಹ ಬಂಗಾರ ಕೊಳ್ಳಬಹುದು. ಸದ್ಯದಲ್ಲೇ ಆಭರಣ ಕೊಂಡುಕೊಳ್ಳುವ ಪ್ಲ್ಯಾನ್‌ ಮಾಡಿದ್ದರೆ ಇಂದೇ ಆಭರಣ ಅಂಗಡಿಗೆ ಹೋಗಿ ಖರೀದಿಸಿ. ಇದರಿಂದ ನಿಮ್ಮ ಜೇಬಿಗೆ ಬೀಳುವ ಹೊರೆ ಕಡಿಮೆಯಾಗುತ್ತದೆ. ಏಕೆಂದರೆ ದೇಶದಲ್ಲಿಂದು ಚಿನ್ನದ ಬೆಲೆಯಲ್ಲಿ ( ) ಇಳಿಕೆಯಾಗಿದೆ. ಬೆಳ್ಳಿ ಬೆಲೆ ಸಹ ಕಡಿಮೆಯಾಗಿದೆ. ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. ಒಂದು ಗ್ರಾಂ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,65824 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,078 ಎಂಟು ಗ್ರಾಂ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,26424 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,624 ಹತ್ತು ಗ್ರಾಂ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,58024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,780 ನೂರು ಗ್ರಾಂ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,65,80024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,07,800 ಇದನ್ನೂ ಓದಿ: - : ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ಡೀಸೆಲ್‌ ಬೆಲೆ ಇಲ್ಲಿದೆ ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,580 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,280, ರೂ. 46,580, ರೂ. 46,580 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,580 ರೂ. ಆಗಿದೆ. ಇಂದಿನ ಬೆಳ್ಳಿ ದರನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 608, ರೂ. 6,080 ಹಾಗೂ ರೂ. 60,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 60,800 ಆಗಿದ್ದರೆ, ದೆಹಲಿಯಲ್ಲಿ 54,500, ಮುಂಬೈನಲ್ಲಿ 54,500 ಹಾಗೂ ಕೋಲ್ಕತ್ತದಲ್ಲೂ ರೂ. 54,500 ಗಳಾಗಿದೆ.