: ಆಭರಣ ಪ್ರಿಯರೇ ಇಲ್ನೋಡಿ: ಯಥಾಸ್ಥಿತಿ ಕಾಯ್ದುಕೊಂಡ ಬಂಗಾರದ ದರ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಇಂದು ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರ ಅಲ್ಪ ಇಳಿಕೆಯಾಗಿದೆ. ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿಯ ದರದ ವಿವರ ಹೀಗಿದೆ. ಕೋವಿಡ್ - 19 ಸಮಯದಲ್ಲಿ ಚಿನ್ನ, ಬೆಳ್ಳಿ ದರ ತೀವ್ರ ಇಳಿಕೆಯಾಗಿತ್ತು. ಆದರೆ, ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಬಂಗಾರ, ಬೆಳ್ಳಿ ದರವೂ ರಾಕೆಟ್‌ನಂತೆ ಗಗನಕ್ಕೆ ಚಿಮ್ಮಿತು. ಸದ್ಯ, ಆ ಪ್ರಮಾಣದ ಬೆಲೆ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಆಗಾಗ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. ಒಂದು ಗ್ರಾಂ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,116 ಇದನ್ನೂ ಓದಿ:ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್‌ ಡೀಸೆಲ್‌ ಬೆಲೆ ವಿವರ ಎಂಟು ಗ್ರಾಂ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,52024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,928 ಹತ್ತು ಗ್ರಾಂ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,90024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,160 ನೂರು ಗ್ರಾಂ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,11,600 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,950 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,200, ರೂ. 46,900, ರೂ. 46,900 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,900 ರೂ. ಆಗಿದೆ. ಇಂದಿನ ಬೆಳ್ಳಿ ದರನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 611, ರೂ. 6,110 ಹಾಗೂ ರೂ. 61,100 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 61,100 ಆಗಿದ್ದರೆ, ದೆಹಲಿಯಲ್ಲಿ 54,900, ಮುಂಬೈನಲ್ಲಿ 54,900 ಹಾಗೂ ಕೋಲ್ಕತ್ತದಲ್ಲೂ ರೂ. 54,900 ಗಳಾಗಿದೆ.