: ವೀಕೆಂಡ್‌ನಲ್ಲಿ ಆಭರಣ ತಗೊಳ್ಳೋ ಪ್ಲ್ಯಾನ್‌ ಇದ್ಯಾ..? ಇಂದಿನ ಬಂಗಾರ, ಬೆಳ್ಳಿ ದರ ಹೀಗಿದೆ.. ಹೆಣ್ಮಕ್ಕಳಿಗೆ ಚಿನ್ನವೆಂದರೆ ಅಚ್ಚುಮೆಚ್ಚು ಆದರೀಗ ಚಿನ್ನದ ದರ ಏರಿಕೆಯಾಗುತ್ತಿದ್ದು, ಚಿನ್ನ ಪ್ರಿಯರನ್ನು ನಿರಾಸೆಗೊಳಿಸಿದೆ. ಶುಭ ಕಾರ್ಯಗಳನ್ನಿಟ್ಟುಕೊಂಡವರು ಬೇರೆ ದಾರಿ ಇಲ್ಲದೇ ಚಿನ್ನ ಖರೀದಿಸುತ್ತಿದ್ದರೆ, ಇತ್ತ ಹೂಡಿಕೆಗಾಗಿ ಚಿನ್ನ ಖರೀದಿಸ ಹೊರಟವರು ತಮ್ಮ ಯೋಜನೆಯನ್ನು ಮುಂದಕ್ಕೆ ದೂಡುತ್ತಿದ್ದಾರೆ. ಕೋವಿಡ್ - 19 ಸಮಯದಲ್ಲಿ ಇಳಿಕೆಯಲ್ಲಿದ್ದ ಚಿನ್ನ, ಬೆಳ್ಳಿ ದರ ರಷ್ಯಾ - ಉಕ್ರೇನ್‌ ಯುದ್ಧ ಆರಂಭವಾಗುತ್ತಿದ್ದಂತೆ ಮತ್ತೆ ಏರಿಕೆ ಕಂಡಿತ್ತು. ಇದು ಚಿನ್ನ ಕೊಳ್ಳಲು ತಯಾರಾದವರಿಗೆ ಶಾಕ್ ಕೊಟ್ಟಿತ್ತು. ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಆಗಾಗ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ..? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ..? ಇಲ್ಲಿದೆ ವಿವರ. ಒಂದು ಗ್ರಾಂ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,116 ಎಂಟು ಗ್ರಾಂ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,52024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,928 ಹತ್ತು ಗ್ರಾಂ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,90024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,160 ನೂರು ಗ್ರಾಂ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,69,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,11,600 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,950 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,960, ರೂ. 46,900, ರೂ. 46,900 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,900 ರೂ. ಆಗಿದೆ. ಇಂದಿನ ಬೆಳ್ಳಿ ದರನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೇ ಇರುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 612, ರೂ. 6,120 ಹಾಗೂ ರೂ. 61,200 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 61,200 ಆಗಿದ್ದರೆ, ದೆಹಲಿಯಲ್ಲಿ 55,100, ಮುಂಬೈನಲ್ಲಿ 55,100 ಹಾಗೂ ಕೋಲ್ಕತ್ತದಲ್ಲೂ ರೂ. 55,100 ಗಳಾಗಿದೆ.