: ಯಥಾಸ್ಥಿತಿ ಕಾಯ್ದುಕೊಂಡ ಬಂಗಾರದ ಬೆಲೆ ಹಳದಿ ಲೋಹ ಚಿನ್ನ ಮತ್ತು ಬೆಳ್ಳಿ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರನ್ನು ನಿರಾಸೆಗೊಳಿಸಿದೆ. ಶುಭ ಕಾರ್ಯ ನಡೆಸಲು ಉದ್ದೇಶಿಸುವವರು ಸಾಲ ಸೋಲ ಮಾಡಿ ಬೇರೆ ವಿಧಿ ಇಲ್ಲದೇ ಚಿನ್ನ ಖರೀದಿಸುತ್ತಿದ್ದರೆ, ಇತ್ತ ಹೂಡಿಕೆಗಾಗಿ ಚಿನ್ನ ಖರೀದಿಸ ಹೊರಟವರು ತಮ್ಮ ಯೋಜನೆಯನ್ನು ಮುಂದಕ್ಕೆ ಹಾಕುತ್ತಿದ್ದಾರೆ. ಆದರೀಗ ಕೆಲ ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಬೆಂಗಳೂರು(ಜು.17):ಮಹಾಮಾರಿ ಕೋವಿಡ್ ಬಳಿಕ ಏರಿಕೆ ಕಂಡು ದಾಖಲೆ ಸೃಷ್ಟಿಸಿದ್ದ ಚಿನ್ನದ ದರ . ಕುಸಿತಗೊಂಡಾಗ ಕೊಂಚವೇ ಇಳಿಕೆ ಕಂಡಿತ್ತು. ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಹಾದಿ ಹಿಡಿದಿತ್ತು. ಇದು ಚಿನ್ನ ಕೊಳ್ಳಲು ಮುಂದಾದವರಿಗೆ ಶಾಕ್ ಕೊಟ್ಟಿತ್ತು. ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚಿನ್ನ, ಬೆಳ್ಳಿ ದರ ಮಾತ್ರ ಗಣನೀಯ ಇಳಿಕೆ ಕಂಡಿಲ್ಲ. ಹಾಗಾದ್ರೆ ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ? ಇಲ್ಲಿದೆ ವಿವರ. ಒಂದು ಗ್ರಾಂ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,66024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,084 ಎಂಟು ಗ್ರಾಂ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,28024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 40,672 ಹತ್ತು ಗ್ರಾಂ (10GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,60024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,840 ನೂರು ಗ್ರಾಂ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,66,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,08,400 - : ಬೆಳಗಾವಿಯಲ್ಲಿ ಪೆಟ್ರೋಲ್‌ ದರ ಇಳಿಕೆ, ಮಂಡ್ಯದಲ್ಲಿ ಏರಿಕೆ, ಜಿಲ್ಲೆಗಳ ಇಂಧನ ಬೆಲೆ ಇಲ್ಲಿದೆ ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 46,700 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 46,270, ರೂ. 46,660, ರೂ. 46,660 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 46,500 ರೂ. ಆಗಿದೆ. ಇಂದಿನ ಬೆಳ್ಳಿ ದರ:ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ ಇಂದು, ದೇಶದಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 566, ರೂ. 5,660 ಹಾಗೂ ರೂ. 56,600 ಗಳಾಗಿವೆ. ಇನ್ನುಳಿದಂತೆ ಬೆಂಗಳೂರಿನಲ್ಲಿ 100 ಬೆಳ್ಳಿ ಬೆಲೆ 6,70 ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 60,400 ಆಗಿದ್ದರೆ ದೆಹಲಿಯಲ್ಲಿ 55,000 ಮುಂಬೈನಲ್ಲಿ 55,000 ಹಾಗೂ ಕೋಲ್ಕತ್ತದಲ್ಲೂ ರೂ. 55,000 ಗಳಾಗಿದೆ.