:ನಿರೀಕ್ಷೆಯಂತೆ ಮತ್ತೆ ರೆಪೋ ದರ ಹೆಚ್ಚಿಸಿದ ಆರ್ ಬಿಐ; ಸಾಲಗಾರರಿಗೆ ಗಾಯದ ಮೇಲೆ ಬರೆ *ರೆಪೋ ದರ ಶೇ.4.40ರಿಂದ ಶೇ.4.90ಕ್ಕೆ ಏರಿಕೆ* 50 ಮೂಲ ಅಂಕಗಳಷ್ಟು ಏರಿಕೆ ಮಾಡಲು ಎಂಪಿಸಿ ಸರ್ವಾನುಮತದ ನಿರ್ಣಯ*ಕಳೆದ ತಿಂಗಳಷ್ಟೇ ರೆಪೋ ದರ ಹೆಚ್ಚಳ ಮಾಡಿದ್ದ ಆರ್ ಬಿಐ ಮುಂಬೈ (ಜೂ.8):ನಿರೀಕ್ಷೆಯಂತೆ ಭಾರತೀಯ ರಿಸರ್ವ್ ಬ್ಯಾಂಕಿನ () ಹಣಕಾಸು ನೀತಿ ಸಮಿತಿ () ಇಂದು ರೆಪೋ ದರವನ್ನು ( ) 50 ಮೂಲ ಅಂಕಗಳಷ್ಟು (50 ) ಹೆಚ್ಚಿಸಿದೆ. ಇದ್ರಿಂದ ರೆಪೋ ದರ ಶೇ.4.40ರಿಂದ ಶೇ.4.90ಕ್ಕೆ ಏರಿಕೆಯಾಗಿದೆ. ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಬುಧವಾರ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರೆಪೋ ದರವನ್ನು 50 ಮೂಲ ಅಂಕಗಳಷ್ಟು ಏರಿಕೆ ಮಾಡಲು ಹಣಕಾಸು ನೀತಿ ಸಮಿತಿ ಸರ್ವಾನುಮತದ ನಿರ್ಣಯ ಕೈಗೊಂಡಿರೋದಾಗಿ ಅವರು ತಿಳಿಸಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಹಾಗೂ ಪೂರೈಕೆ ವ್ಯವಸ್ಥೆಯಲ್ಲಿನ ವ್ಯತ್ಯಯದ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಂಡಿರೋದಾಗಿ ಅವರು ತಿಳಿಸಿದ್ದಾರೆ. ಆರ್‌ಬಿಐನ ಗವರ್ನರ್‌ ಶಕ್ತಿಕಾಂತ್‌ ನೇತೃತ್ವದ ಹಣಕಾಸು ನೀತಿ ಸಮಿತಿಯು ಸೋಮವಾರದಿಂದಲೇ (ಜೂ.6) ಮೂರು ದಿನಗಳ ಸಭೆ ಆರಂಭಿಸಿತ್ತು. :ಇಂದು ಸರ್ವಕಾಲಿಕ ಕುಸಿತ ದಾಖಲಿಸಿದ ಎಲ್ಐಸಿ ಷೇರು; ಹೂಡಿಕೆದಾರರಿಗೆ ನಷ್ಟದ ಮೇಲೆ ನಷ್ಟ ಕಳೆದ ತಿಂಗಳಷ್ಟೇ (ಮೇ 4ರಂದು ) ಆರ್ ಬಿಐ ರೆಪೋ ದರವನ್ನು 40 ಮೂಲ ಅಂಕಗಳಷ್ಟು( ಶೇ.0.40ರಷ್ಟು) ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರಿಗೆ ಶಾಕ್‌ ನೀಡಿತ್ತು. ರೆಪೋ ದರ ಹೆಚ್ಚಳದ ಬೆನ್ನಲ್ಲೇ ಸಾರ್ವಜನಿಕ ಹಾಗೂ ಖಾಸಗಿ ವಲಯದ ಬಹುತೇಕ ಬ್ಯಾಂಕುಗಳು ಈಗಾಗಲೇ ಸಾಲದ ಮೇಲಿನ ಬಡ್ಡಿದರವನ್ನು ಹೆಚ್ಚಳ ಮಾಡಿವೆ. ಈಗ ಮತ್ತೊಮ್ಮೆ ಸಾಲದ ಮೇಲಿನ ಬಡ್ಡಿದರ ಹೆಚ್ಚಳವಾಗಲಿದೆ. ಇದ್ರಿಂದ ಗೃಹ, ವಾಹನ ಸಾಲಗಳ ಮೇಲಿನ ಇಎಂಐ ಕೂಡ ಹೆಚ್ಚಲಿದ್ದು, ಜನಸಾಮಾನ್ಯರ ಜೇಬಿನ ಮೇಲಿನ ಹೊರೆ ಮತ್ತಷ್ಟು ಹೆಚ್ಚಲಿದೆ. ಬಡ್ಡಿದರ ಏರಿಕೆಗೆ ಕಾರಣವೇನು?ರಷ್ಯಾ-ಉಕ್ರೇನ್ ಯುದ್ಧದ ಪರಿಣಾಮ ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಏರಿಕೆಯಾಗಿದೆ ಎಂದು ಆರ್ ಬಿಐ ಗರ್ವನರ್ ತಿಳಿಸಿದ್ದಾರೆ. ಇನ್ನು ದೇಶದಲ್ಲಿ ಚಿಲ್ಲರೆ ಹಣದುಬ್ಬರ ಆರ್ ಬಿಐ ನಿಗದಿಪಡಿಸಿರುವ ಸಹನಾ ಮಟ್ಟವನ್ನು ಮೀರಿದೆ. ಕಳೆದ ಏಪ್ರಿಲ್‌ನಲ್ಲಿ ಅದು ಶೇ.7.79ಕ್ಕೆ ತಲುಪುವ ಮೂಲಕ 8 ವರ್ಷದ ಗರಿಷ್ಠ ಮಟ್ಟಮುಟ್ಟಿತ್ತು. ಕೇಂದ್ರ ಸರ್ಕಾರವು ಆರ್‌ಬಿಐಗೆ ಹಣದುಬ್ಬರ ಪ್ರಮಾಣವನ್ನು ಶೇ.4ರಲ್ಲಿ ಕಾಪಾಡುವಂತೆ ಸೂಚಿಸಿದೆ. ಆದರೂ ಶೇ.2ರಷ್ಟುಏರುಪೇರಿಗೆ ಅವಕಾಶ ಕಲ್ಪಿಸಿದೆ. ಆದರೆ ಇದೀಗ ಆ ಮಿತಿಯೂ ಮೀರಿರುವ ಹಿನ್ನೆಲೆಯಲ್ಲಿ ಆರ್‌ಬಿಐ ನಿಯಂತ್ರಣಕ್ಕೆ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ರೆಪೋ ದರ ಅಂದ್ರೇನು?ವಾಣಿಜ್ಯ ಬ್ಯಾಂಕುಗಳಿಗೆ ( ) ಹಣದ ಕೊರತೆ ಎದುರಾದಾಗ ಅವು ಆರ್ ಬಿಐಯಿಂದ ಪಡೆಯೋ ಸಾಲದ () ಮೇಲೆ ವಿಧಿಸೋ ಬಡ್ಡಿದರವೇ ರೆಪೋ ದರ. ಆರ್ ಬಿಐ ನಿರ್ದಿಷ್ಟ ದರದಲ್ಲಿ ಈ ಬ್ಯಾಂಕುಗಳಿಗೆ ಸಾಲ ನೀಡುತ್ತದೆ.ರೆಪೋ ದರ ದೇಶದಲ್ಲಿನ ಹಣದುಬ್ಬರ ನಿಯಂತ್ರಣಕ್ಕೆ ಆರ್ ಬಿಐ ಬಳಸುವ ಅತೀಮುಖ್ಯ ಸಾಧನವಾಗಿದೆ. ಉದಾಹರಣೆಗೆ ಆರ್ ಬಿಐ ರೆಪೋ ದರ ಇಳಿಕೆ ಮಾಡಿದ್ರೆ ಬ್ಯಾಂಕುಗಳು ಕಡಿಮೆ ಬಡ್ಡಿದರದಲ್ಲಿ ಸಾಲಗಳನ್ನು ನೀಡುತ್ತವೆ. ಇದ್ರಿಂದ ಆರ್ಥಿಕತೆಯಲ್ಲಿ ಹಣದ ಹರಿವು ಹೆಚ್ಚುತ್ತದೆ. ಅದೇ ರೆಪೋ ದರದಲ್ಲಿ ಏರಿಕೆ ಮಾಡಿದ್ರೆ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿದರ ಹೆಚ್ಚಿಸುತ್ತವೆ. ಹೀಗಾಗಿ ಹಣದುಬ್ಬರ ಏರಿಕೆಯಾಗಿರುವ ಸಮಯದಲ್ಲಿ ಆರ್ ಬಿಐ ರೆಪೋ ದರವನ್ನು ಹೆಚ್ಚಿಸುತ್ತದೆ, ಇದ್ರಿಂದ ಸಹಜವಾಗಿ ಬ್ಯಾಂಕುಗಳು ಸಾಲದ ಮೇಲಿನ ಬಡ್ಡಿದರ ಹೆಚ್ಚಿಸುತ್ತವೆ. ಇದ್ರಿಂದ ಆರ್ಥಿಕತೆಗೆ ಹಣದ ಹರಿವು ತಗ್ಗುತ್ತದೆ. ಆ ಮೂಲಕ ಹಣದುಬ್ಬರ ನಿಯಂತ್ರಣಕ್ಕೆ ಬರುತ್ತದೆ. ಸರಳವಾಗಿ ಹೇಳಬೇಕೆಂದ್ರೆ ರೆಪೋ ದರ ಹೆಚ್ಚಳವಾದ್ರೆ ಹಣದುಬ್ಬರ ತಗ್ಗುತ್ತದೆ. ಅದೇ ರೆಪೋ ದರ ಇಳಿಕೆಯಾದ್ರೆ ಹಣದುಬ್ಬರ ಏರಿಕೆಯಾಗುತ್ತದೆ. : ನಿವೃತ್ತಿ ನಂತರದ ಬದುಕಿಗೆ ಯಾವುದು ಬೆಸ್ಟ್? ಇಪಿಎಫ್ ಅಥವಾ ಎನ್ ಪಿಎಸ್? ಸಾಲಗಳ ಬಡ್ಡಿದರ ಹೆಚ್ಚಳರೆಪೋ ದರ ಏರಿಕೆಯಿಂದ ಬ್ಯಾಂಕುಗಳು ಸಾಲಗಳ ಮೇಲಿನ ಬಡ್ಡಿದರವನ್ನು ಹೆಚ್ಚಿಸಲಿವೆ. ಹೀಗಾಗಿ ಗೃಹಸಾಲಗಳು , ವಾಹನಸಾಲಗಳು ಸೇರಿದಂತೆ ಎಲ್ಲ ವಿಧದ ಸಾಲಗಳ ಬಡ್ಡಿದರ ಹೆಚ್ಚಳವಾಗಲಿದೆ. ಈಗಾಗಲೇ ಗೃಹ, ವಾಹನ ಸಾಲಗಳ ಮೇಲಿನ ಬಡ್ಡಿದರವನ್ನು ಬ್ಯಾಂಕುಗಳು ಒಮ್ಮೆ ಹೆಚ್ಚಳ ಮಾಡಿ ಆಗಿದೆ. ಈಗ ಇನ್ನೊಮ್ಮೆ ಹೆಚ್ಚಳ ಮಾಡಲಿದ್ದು, ಸಾಲ ಪಡೆದವರ ಮೇಲಿನ ಹೊರೆ ಹೆಚ್ಚಿದೆ.