: ಹೀಗಿದೆ ಇಂದಿನ ಚಿನ್ನ- ಬೆಳ್ಳಿ ದರ! ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ದೊಡ್ಡದಿದೆ. ಜತೆಗೆ ಚಿನ್ನದ ಮೇಲಿನ ವ್ಯಾಮೋಹವೂ ಹಲವರಿಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿನಿತ್ಯ ಏರುಪೇರಾಗುತ್ತದೆ. ಪ್ರತಿನಿತ್ಯದ ಬೆಲೆ ನೋಡಿಯೇ ಜನ ಹೂಡಿಕೆ ಮಾಡುತ್ತಾರೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ? ಬೆಂಗಳೂರು(ಏ.26): ಕೊರೋನಾ ಬಳಿಕ ಏರಿಕೆ ಹಾದಿ ಹಿಡಿದು, ದಾಖಲೆ ಸೃಷ್ಟಿಸಿದ್ದ ಚಿನ್ನದ ದರ ಪ್ರಕರಣಳು ಕುಸಿತಗೊಂಡಾಗ ಕೊಂಚ ಇಳಿಕೆ ಕಂಡಿತ್ತು. ಆದರೆ ರಷ್ಯಾ ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಮತ್ತೆ ಏರಿಕೆ ಕಂಡಿತ್ತು. ಇದು ಚಿನ್ನ ಕೊಳ್ಳಲು ತಯಾರಾದವರಿಗೆ ಶಾಕ್ ಕೊಟ್ಟಿತ್ತು. ಇದಾದ ಬಳಿಕ ಏರಿಕೆಗೆ ಕೊಂಚ ಬ್ರೇಕ್ ಬಿದ್ದಿದೆಯಾದರೂ ಚುಇನ್ನ, ಬೆಳ್ಳಿ ದರ ಮಾತ್ರ ಇಳಿಕೆಯಾಗಿಲ್ಲ. ಇನ್ನು ಬೆಂಗಳೂರಿನಲ್ಲಿ ಇಂದು ಚಿನ್ನ ದರ ಎಷ್ಟಿದೆ? ದೇಶದ ಪ್ರಮುಖ ನಗರಗಳಲ್ಲಿ ದರ ಹೇಗಿದೆ? ಇಲ್ಲಿದೆ ವಿವರ ಒಂದು ಗ್ರಾಂ (1GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,89824 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,343 ಎಂಟು ಗ್ರಾಂ (8GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,18424 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 42,744 ಹತ್ತು ಗ್ರಾಂ (10GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,98024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,430 ನೂರು ಗ್ರಾಂ (100GM) 22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,89,80024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,34,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,980 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ.49,665, ರೂ. 48,980, ರೂ. 48,980 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 48,980 ರೂ. ಆಗಿದೆ. ಇಂದಿನ ಬೆಳ್ಳಿ ದರ ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 708, ರೂ. 7,080 ಹಾಗೂ ರೂ. 70,800 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 70,800 ಆಗಿದ್ದರೆ ದೆಹಲಿಯಲ್ಲಿ 65,700 ಮುಂಬೈನಲ್ಲಿ 65,700 ಹಾಗೂ ಕೋಲ್ಕತ್ತದಲ್ಲೂ ರೂ. 65,700 ಗಳಾಗಿದೆ.