- : ಬಳ್ಳಾರಿ, ಕೊಡಗಿನಲ್ಲಿ ಪೆಟ್ರೋಲ್‌ ಡಿಸೇಲ್‌ ಬೆಲೆ ಏರಿಕೆ: ನಿಮ್ಮ ಜಿಲ್ಲೆಯಲ್ಲಿ ದರ ಹೇಗಿದೆ ನೋಡಿ : ಉಕ್ರೇನ್‌ ಮತ್ತು ರಷ್ಯಾ ಯುದ್ಧದಿಂದ ಅಂತಾರಾಷ್ಟ್ರೀಯ ಕಚ್ಚಾತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಭಾರತದಲ್ಲಿ ಇಂಧನ ಬೆಲೆ ಗಗನಕ್ಕೇರಿದೆ. ಇಂದು, ಏಪ್ರಿಲ್ 23, ಶನಿವಾರದಂದು ಸತತ 17ನೇ ದಿನವೂ ಪೆಟ್ರೋಲ್ ಹಾಗೂ ಡಿಸೇಲ್‌ ಬೆಲೆ ಸ್ಥಿರವಾಗಿದೆ. ಇಂದಿನ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಕರ್ನಾಟಕದ ಯಾವ ಜಿಲ್ಲೆಯಲ್ಲಿ ಎಷ್ಟಿದೆ ಎಂಬ ಪಟ್ಟಿ ಇಲ್ಲಿದೆ. ಒಂದೆಡೆ ಅಂತಾರಾಷ್ಟ್ರೀಯ ಕಚ್ಚಾತೈಲ ( ) ಬೆಲೆ ಗಗನಕ್ಕೇರಿದೆ. ಇತ್ತ ಭಾರತದಲ್ಲಿ ಮಧ್ಯಮವರ್ಗದ ಜನರಿಗೆ ಪೆಟ್ರೋಲ್‌ - ಡೀಸೆಲ್‌ ( – ) ಖರೀದಿ ಮಾಡುವುದೂ ಕಷ್ಟ ಎನ್ನುವ ಕಾಲ ಸನ್ನಿಹಿತವಾಗಿದೆ. ಪೆಟ್ರೋಲ್‌ ಬೆಲೆ 100ರ ಗಡಿದಾಟಿ 110 ರೂಪಾಯಿಗಳನ್ನೂ ಮುಟ್ಟಿದೆ. ಡೀಸೆಲ್‌ ದರ ಕೂಡ ಇನ್ನೇನು ರೂ. 100 ಮುಟ್ಟಲು ಸಿದ್ಧವಾಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಹೆಚ್ಚಿದಂತೆಲ್ಲಾ ಎಲ್ಲಾ ವಸ್ತುಗಳ ಬೆಲೆಯೂ ಏರಿಕೆಯಾಗುತ್ತವೆ. ಇದರಿಂದ ಸಾಮಾನ್ಯ ಬಡ ಮತ್ತು ಮಧ್ಯಮವರ್ಗದ ಜನರ ಜೀವನ ದುಸ್ಥರವಾಗುತ್ತದೆ. ಇಂದು, ಏಪ್ರಿಲ್ 23, ಶನಿವಾರದಂದು ಸತತ 17ನೇ ದಿನವೂ ಪೆಟ್ರೋಲ್ ಹಾಗೂ ಡಿಸೇಲ್‌ ಬೆಲೆ ಸ್ಥಿರವಾಗಿದೆ. ಬಳ್ಳಾರಿ, ಕೊಡಗು ಸೇರಿದಂತೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲೆ ಪೆಟ್ರೋಲ್‌ ಡಿಸೇಲ್‌ ಬೆಲೆಯಲ್ಲಿ ಕೊಂಚ ಬದಲಾವಣೆಯಾಗಿದೆ. ವಾಹನ ಇಂಧನದ ಬೆಲೆಗಳು ಹಲವಾರು ತಿಂಗಳುಗಳಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿವೆ ಮತ್ತು ದೇಶಾದ್ಯಂತ ದಾಖಲೆಯ ಹಣದುಬ್ಬರದ ನಡುವೆ ಕಾರ್ಯನಿರ್ವಹಿಸುತ್ತಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅನೇಕ ಅಂಶಗಳನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಇವುಗಳಲ್ಲಿ ಕೆಲವು ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳಲ್ಲಿ ದೈನಂದಿನ ಬದಲಾವಣೆಗಳು ಮತ್ತು ವಿದೇಶಿ ವಿನಿಮಯ ಏರಿಳಿತಗಳು ಮತ್ತು ವಿವಿಧ ರಾಜ್ಯಗಳಲ್ಲಿ ವಿಭಿನ್ನ ತೆರಿಗೆ ದರಗಳನ್ನು ಒಳಗೊಂಡಿವೆ. ದೇಶದಾದ್ಯಂತ ಇಂಧನ ಬೆಲೆಗಳು ಬದಲಾಗುತ್ತಿರುವುದಕ್ಕೆ ಸಾರಿಗೆ ವೆಚ್ಚವೂ ಒಂದು ಪ್ರಮುಖ ಕಾರಣ. ನಮ್ಮ ರಾಜ್ಯದ ಪ್ರತೀ ಜಿಲ್ಲೆಯ ಪೆಟ್ರೋಲ್‌ - ಡೀಸೆಲ್‌ ಇಂದಿನ ದರ ಈ ಕೆಳಗಿದೆ. ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಪೆಟ್ರೋಲ್ ದರಗಳು: ಕರ್ನಾಟಕದ ಜಿಲ್ಲೆಗಳಲ್ಲಿ ಇಂದಿನ ಡೀಸೆಲ್ ದರಗಳು ಇದನ್ನೂ ಓದಿ:ಬೆಳ್ಳಿ ದರ ಕುಸಿತ, ಚಿನ್ನ ಸ್ಥಿರ: ಇಂದಿನ ಬೆಲೆ ಎಷ್ಟು? ಇಲ್ಲಿದೆ ಮಾಹಿತಿ