2022: ತವರು ಜಿಲ್ಲೆ ಹಾವೇರಿಗೆ ಬಂಪರ್ ಕೊಡುಗೆಗಳನ್ನ ಕೊಟ್ಟ ಬೊಮ್ಮಾಯಿ * ಬೊಮ್ಮಾಯಿ ಚೊಚ್ಚಲ ಬಜೆಟ್‌ನಲ್ಲಿ ವಿವಿಧ ಜಿಲ್ಲೆಗಳಿಗೂ ವಿವಿಧ ಭರಪೂರ ಕೊಡುಗೆ* ತವರು ಜಿಲ್ಲೆ ಹಾವೇರಿಗೆ ಬಂಪರ್ ಕಾರ್ಯಕ್ರಮಗಳನ್ನ ನೀಡಿದ ಬೊಮ್ಮಾಯಿ* ಹಾವೇರಿ ಜಿಲ್ಲೆಗೆ ಒಟ್ಟು 15 ಕಾರ್ಯಕ್ರಮಗಳ ಘೋಷಣೆ ಬೆಂಗಳೂರು/ಹಾವೇರಿ, (ಮಾ.04):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ( ) ಅವರು ಇಂದು (ಶುಕ್ರವಾರ) 2022-23ನೇ ಸಾಲಿನ ಕರ್ನಾಟಕ ಬಜೆಟ್‌ ( 2022-23) ಮಂಡಿಸಿದರು. ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್‌ನಲ್ಲಿ ವಿವಿಧ ಜಿಲ್ಲೆಗಳಿಗೂ ವಿವಿಧ ಭರಪೂರ ಕೊಡುಗೆಗಳನ್ನು ನೀಡುವುದರ ಜೊತೆಗೆ ತಮ್ಮ ತವರು ಜಿಲ್ಲೆ ಹಾವೇರಿಗೆ ಬಂಪರ್ ಕಾರ್ಯಕ್ರಮಗಳನ್ನ ಘೋಷಿಸಿದ್ದಾರೆ. 2022 : ತೆರಿಗೆ ಬರೆ ಇಲ್ಲ, ವಾಣಿಜ್ಯ ತೆರಿಗೆ ಹೆಚ್ಚಳ ಪ್ರಸ್ತಾಪವೂ ಇಲ್ಲ! ಹೌದು..ಹಾವೇರಿ ಜಿಲ್ಲೆಗೆ ( )ವಿವಿಧ ವಲಯಗಳಲ್ಲಿ ಒಟ್ಟು 15 ಕಾರ್ಯಕ್ರಮಗಳ ಘೋಷಣೆ ಮಾಡಿದ್ದಾರೆ. ಮುಂದಿನ ಚುನಾವಣೆ ದೃಷ್ಟಿ ಇಟ್ಟುಕೊಂಡು ಜಿಲ್ಲೆಗೆ ಬಂಪರ್ ಕೊಡುಗೆ ಘೋಷಿಸಿದ್ದಾರೆ ಎನ್ನಲಾಗುತ್ತಿದೆ. ಹಾಗಾದ್ರೆ ಹಾವೇರಿ ಜಿಲ್ಲೆಗೆ ಏನೆಲ್ಲಾ ಕೊಟ್ಟಿದ್ದಾರೆ> ಅವು ಈ ಕೆಳಗನಂತಿವೆ ನೋಡಿ ಹಾವೇರಿ ಜಿಲ್ಲೆಗೆ ಸಿಕ್ಕ ಕೊಡುಗೆಗಳು* ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ* ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ* ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ* ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಹೆಸರಿನ ಸಂಚಾರಿ ಕ್ಲಿನಿಕ್* ಶಿಗ್ಗಾಂವಿ ತಾಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ* ಸವಣೂರು ತಾಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ* ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಚಯ ಸ್ಥಾಪನೆ* ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ* ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ* ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ* ರಾಣೆಬೆನ್ನೂರಿನಲ್ಲಿ ನೂತನ‌ ಜವಳಿ ಪಾರ್ಕ್* ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ 20 ಕೋಟಿ ರೂ. ನಿಗದಿ* ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನಕ್ಕಾಗಿ 2 ಕೋಟಿ ರೂ.* ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರಕ್ಕೆ 28 ಕೋಟಿ ರೂ.ವಿವಿಧ ಜಿಲ್ಲೆಗಳಿಗೆ ಸಿಕ್ಕಿದ್ದೇನು?* ಹಾವೇರಿಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೇರಿ ಸ್ಥಾಪನೆ* ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ* ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು* ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜು* ಹಿರೇಕೇರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ* ಧಾರವಾಡ ಕೃಷಿ ವಿವಿಯಲ್ಲಿ ಡಾ.ಎಸ್.ವಿ. ಪಾಟೀಲ ಕೃಷಿ, ಸಂಶೋಧನೆ ಮತ್ತು ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ* ಮೆಣಸು ಮತ್ತು ಸಾಂಬಾರು ಪದಾರ್ಥಗಳ ಗುಣಮಟ್ಟ ಹೆಚ್ಚಿಸಲು ಬ್ಯಾಡಗಿಯಲ್ಲಿ ಸಂಶೋಧನಾ ಕೇಂದ್ರ * ಹಾನಗಲ್‌ನಲ್ಲಿ ಮಾವು ಸಂಸ್ಕರಣಾ ಘಟಕ* ರೇಷ್ಮೆ ದ್ವಿತಳಿ ಮೊಟ್ಟಿ ಉತ್ಪಾದಿಸಿ ಶೈತ್ಯೀಕರಿಸಲು ಮದ್ದೂರು, ರಾಣೆಬೆನ್ನೂರು ಮತ್ತು ದೇವನಹಳ್ಳಿಯಲ್ಲಿ 15 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಶೈತ್ಯಾಗಾರಗಳ ನಿರ್ಮಾಣ* ಹಾವೇರಿಯಲ್ಲಿ 30 ಕೋಟಿ ವೆಚ್ಚದಲ್ಲಿ ಹೈಟೆಕ್ ರೇಶ್ಮೆಗೂಡು ಮಾರುಕಟ್ಟೆ* ಕಾಳಿ ನದಿಯಿಂದ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಯೋಜನೆ* ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆ.ಸಿ. ವ್ಯಾಲಿ ಎರಡನೆ ಹಂತವನ್ನು 445 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ* ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ವಿನೂತನ ವಿಶ್ವವಿದ್ಯಾಲಯಗಳು* ರಾಯಚೂರು ವಿಶ್ವವಿದ್ಯಾಲಯದಲ್ಲಿ ಪ್ರಯೋಗಾಲಯ ಸ್ಥಾಪಿಸಲು 15 ಕೊಟಿ ರೂ.* ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕು ಅಸ್ಪತ್ರೆಯನ್ನು 250 ಹಾಸಿಗೆಗಳ ಅಸ್ಪತ್ರೆಯಾಗಿ ಮೇಲ್ದರ್ಜೆಗೆ* ಹಾವೇರಿ ಜಿಲ್ಲೆ ಸವಣೂರಿನಲ್ಲಿ ಹೊಸ ಅಯುರ್ವೇದ ಕಾಲೇಜು * ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಅಯುಷ್ ವಿಭಾಗ * ಚಿತ್ರದುರ್ಗದಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು* ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಟ್ರಾಮಾ ಕೇರ್ ಕೇಂದ್ರ. ಅರಂಭದಲ್ಲಿ 10 ಕೋಟಿ ರೂ. ಹಂಚಿಕೆ* ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯಗಳು* ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ನಿಲಯಗಳ ಸಮುಚ್ಛಯ