2022 ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು ಇಂತಿವೆ * ಕರ್ನಾಟಕ ಬಜೆಟ್ 2022-23* ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ* ಬೊಮ್ಮಾಯಿ ಘೋಷಿಸಿದ ಹೊಸ ಯೋಜನೆಗಳು ಬೆಂಗಳೂರು, (ಮಾ.04):ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು( ) ತಮ್ಮ ಚೊಚ್ಚಲ ಬಜೆಟ್ ಅನ್ನು ಇಂದು(ಮಾ.04) ಮಂಡಿಸಿದ್ದಾರೆ. 2,653,720 165 ಕೋಟಿ ರೂ. ಬಜೆಟ್​ ಮಂಡನೆ ಮಾಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರವನ್ನು ಹೊಂದಿದ್ದು, ಹಲವಾರು ಹೊಸ ಯೋಜನೆಗಳನ್ನು ( ) ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಬಜೆಟ್‌ನಲ್ಲಿ ( 2022) ಘೋಷಣೆ ಮಾಡಿದ್ದಾರೆ. ಅವು ಈ ಕೆಳಗಿನಂತಿವೆ. 2022 : ತೆರಿಗೆ ಬರೆ ಇಲ್ಲ, ವಾಣಿಜ್ಯ ತೆರಿಗೆ ಹೆಚ್ಚಳ ಪ್ರಸ್ತಾಪವೂ ಇಲ್ಲ! ಬೊಮ್ಮಾಯಿ ಘೋಷಣೆ ಮಾಡಿದ ಹೊಸ ಯೋಜನೆಗಳು* ನೇಕಾರರ ಮಕ್ಕಳಿಗೆ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ ಯೋಜನೆ* ಯೆಲ್ಲೋ ಬೋರ್ಡ್ ಚಾಲಕರ ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾನಿಧಿ ಯೋಜನೆ, ಆರೋಗ್ಯ ಸೌಲಭ್ಯಕ್ಕೆ ವಿಶೇಷ ಯೋಜನೆ* ಗೋಶಾಲೆಗಳಲ್ಲಿನ ಗೋವುಗಳನ್ನು ಸಾರ್ವಜನಿಕರು, ಖಾಸಗಿ ಸಂಸ್ಥೆ ದತ್ತು ಪಡೆಯುವುದನ್ನು ಪ್ರೋತ್ಸಾಹಿಸಲು ಪುಣ್ಯಕೋಟಿ ದತ್ತು ಯೋಜನೆ* ಮೀನುಗಾರರಿಗಾಗಿ ಮತ್ಸ್ಯ ಸಿರಿ ಯೋಜನೆ* ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಖ್ಯಮಂತ್ರಿ ವಿದ್ಯಾರ್ಥಿ ಮಾರ್ಗದರ್ಶಿನಿ ಎಂಬ ಹೊಸ ಯೋಜನೆ* ಯಾತ್ರಾಸ್ಥಳ ಶ್ರೀಶೈಲದಲ್ಲಿ 85 ಕೋಟಿ ರೂ ವೆಚ್ಚದಲ್ಲಿ ಯಾತ್ರಿ ನಿವಾಸ ಸಂಕೀರ್ಣ ನಿರ್ಮಾಣ* ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ಸ್ಥಾಪನೆ* ರೈತರಿಗೆ ರಿಯಾಯಿತಿ ದರದಲ್ಲಿ 24 ಸಾವಿರ ಕೋಟಿ ರೂ. ಸಾಲ* ಬಳ್ಳಾರಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ.* ಬೆಳಗಾವಿಯಲ್ಲಿ ನೂತನ ಕೃಷಿ ಕಾಲೇಜು ನಿರ್ಮಾಣ* ಹಾವೇರಿಯ ಹಿರೆಕೆರೋರಿನಲ್ಲಿ ಗೋವಿನ ಜೋಳ ಸಂಶೋಧನಾ ಸಂಸ್ಥೆ ಸ್ಥಾಪನೆ* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ* ಕಟ್ಟಡ ಕಾರ್ಮಿಕರಿಗಾಗಿ 100 ಹೈಟೆಕ್ ಸಂಚಾರಿ ಕ್ಲಿನಿಕ್ ಆರಂಭ* ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆ ಆರಂಭ* ತುಂಗಭದ್ರಾ ಜಲಾಶಯ ಭರ್ತಿಯಾದ ಬಳಿಕ ಹೊರ ಹೋಗುವ ನೀರನ್ನು ಸಂಗ್ರಹ ಮಾಡಲು ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ * ಅಸಾಂಕ್ರಾಮಿಕ ರೋಗಳ ಪತ್ತೆಗಾಗಿ ನಮ್ಮ ಕ್ಲಿನಿಕ್ ನಿರ್ಮಾಣ, ಬೆಂಗಳೂರು ನಗರದಲ್ಲಿ ಎಲ್ಲಾ ವಾರ್ಡ್‌ಗಳಲ್ಲಿ ಈ ಕ್ಲಿನಿಕ್ ನಿರ್ಮಾಣ* ರಾಮನಗರದ ಅರ್ಚಕರಹಳ್ಳಿಯಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆರಂಭ* ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಆರಂಭ* ಮುಂದಿನ ಎರಡು ವರ್ಷದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿಗಳ ಮೂಲಕ ನೀರಿನ ಸಂಪರ್ಕ* ರಾಜ್ಯದಲ್ಲಿ ರೇಷ್ಮೆ ಬೆಳೆಗಾರರಿಗೆ ಅತ್ಯಾಧುನಿಕ ಮಾರುಕಟ್ಟೆ ಸೌಲಭ್ಯ* ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜನೆ* ಯಾಣದಲ್ಲಿ ರೋಪ್‌ ವೇ ನಿರ್ಮಾಣಕ್ಕೆ ಕ್ರಮ* ಮೈಸೂರು ವಿಮಾನ ನಿಲ್ದಾಣ ರನ್‌ ವೇ ವಿಸ್ತರಣೆ* ದೇಸಿ ಕ್ರೀಡೆ ನಿರ್ಮಾಣ ಉತ್ತೇಜನಕ್ಕೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ರೀಡಾ ಅಂಕಣ ನಿರ್ಮಾಣ '* ರಾಯಚೂರಿನಲ್ಲಿ ಗ್ರೀನ್‌ ಗ್ರೀನ್‌ ಫೀಲ್ಡ್‌ ವಿಮಾನ ನಿಲ್ದಾಣ ನಿರ್ಮಾಣ