2022: ಕರ್ನಾಟಕದ ಅಭಿವೃದ್ಧಿಗಾಗಿ ಯಾವ ಇಲಾಖೆಗೆ ಎಷ್ಟು ಅನುದಾನ? * ಕರ್ನಾಟಕ ಬಜೆಟ್ 2022-23* ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್* ಯಾವ ಇಲಾಖೆಗೆ ಎಷ್ಟು ಅನುದಾನ? ಬೆಂಗಳೂರು, (ಮಾ.04): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೊದಲ ಬಾರಿಗೆ ಇಂದು (ಮಾರ್ಚ್ 4) ವಿಧಾನಸೌಧದಲ್ಲಿ ಕರ್ನಾಟಕ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ. 2,53,165 ಕೋಟಿ ಗಾತ್ರದ ಬಜೆಟ್ ಮಂಡಿಸುತ್ತಿರುವ ಸಿಎಂ ಬೊಮ್ಮಾಯಿ ಅವರು ವಿವಿಧ ಇಲಾಖೆಗಳ ಅಭಿವೃದ್ಧಿ ಅನುದಾನ ಹಂಚಿಕೆ ಮಾಡಿದ್ದಾರೆ. 2022 : ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್‌, ಕ್ಷಣ ಕ್ಷಣದ ಅಪ್ಡೇಟ್ಸ್ ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ. ಸಮಗ್ರ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ದುರ್ಬಲ ವರ್ಗದ ರಕ್ಷಣೆ ಮತ್ತು ಏಳಿಗೆ , ಶಿಕ್ಷಣ, ಉದ್ಯೋಗ, ಆರೋಗ್ಯ ಹಾಗೂ ಸಬಲೀಕರಣ ಕಾರ್ಯಕ್ರಮ, ಹಿಂದುಳಿದ ಪ್ರದೇಶಗಳನ್ನು ವೈಜ್ಞಾನಿಕವಾಗಿ ಗುರುತಿಸಿ ಅಭಿವೃದ್ಧಿಗೆ ಸಂಘಟಿತ ಕಾರ್ಯಕ್ರಮ, ಕೃಷಿ, ಕೈಗಾರಿಕೆ ಹಾಗೂ ಸೇವಾ ವಲಯ – ಪಾಲುದಾರಿಕೆಯೊಂದಿಗೆ ಅಭಿವೃದ್ಧಿ ಹಾಗೂ ನವಭಾರತಕ್ಕಾಗಿ ನವ ಕರ್ನಾಟಕ ಹೊಸ ಚಿಂತನೆ, ಹೊಸ ಚೈತನ್ಯದ ಜತ ಹೊಸ ಮುನ್ನೋಟ ಎಂಬ ನೆಲೆಯಲ್ಲಿ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್ ಇದೆ.ಇನ್ನು ಯಾವ ಇಲಾಖೆಗೆ ಎಷ್ಟು ಎನ್ನುವ ಮಾಹಿತಿ ಈ ಕೆಳಗಿನಂತಿದೆ ನೋಡಿ.. ಯಾವ ಇಲಾಖೆಗೆ ಎಷ್ಟು ಅನುದಾನ? * ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ 8,457 ಕೋಟಿ ರೂ. ಅನುದಾನ* ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಗೆ 13,982 ಕೋಟಿ ರೂ.* ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಗೆ 17,325 ಕೋಟಿ ರೂ.* ಇಂಧನ ಇಲಾಖೆಗೆ 12,655 ಕೋಟಿ ರೂಪಾಯಿ ಅನುದಾನ* * ಕಂದಾಯ ಇಲಾಖೆಗೆ 16,388 ಕೋಟಿ ರೂಪಾಯಿ ಅನುದಾನ* ಆಹಾರ ಇಲಾಖೆಗೆ 2,288 ಕೋಟಿ ರೂಪಾಯಿ ಅನುದಾನ,* ವಸತಿ ಇಲಾಖೆಗೆ 3,594 ಕೋಟಿ ರೂಪಾಯಿ ಅನುದಾನ* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,713 ಕೋಟಿ ಅನುದಾನ,* ಸಮಾಜ ಕಲ್ಯಾಣ ಇಲಾಖೆಗೆ 9,389 ಕೋಟಿ ಅನುದಾನ* ಲೋಕೋಪಯೋಗಿ ಇಲಾಖೆಗೆ 10,447 ಕೋಟಿ ರೂ.* ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 11,222 ಕೋಟಿ ರೂ.* ಜಲ ಸಂಪನ್ಮೂಲ ಇಲಾಖೆಗೆ 20,601 ಕೋಟಿ ಅನುದಾನ* ಶಿಕ್ಷಣ ಇಲಾಖೆಗೆ 31,980 ಕೋಟಿ ರೂಪಾಯಿ ಅನುದಾನ.* ನಗರಾಭಿವೃದ್ಧಿ ಇಲಾಖೆಗೆ 16,076 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ.