:ಕೊರೋನಾ ಭೀತಿ ನಡುವೆ ಇಂಧನ ದರ ಪರಿಶೀಲಿಸಲು ಮರೆತಿದ್ದೀರಾ? ಇಂದಿನ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ *ನವೆಂಬರ್ 4ರಂದು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ*ಸುಮಾರು ಎರಡೂವರೆ ತಿಂಗಳಿಂದ ರಾಜ್ಯದಲ್ಲಿ ಇಂಧನ ದರ ಬದಲಾಗಿಲ್ಲ*ಕೊರೋನಾ ಪ್ರಕರಣಗಳ ಹೆಚ್ಚಳದಿಂದ ತಗ್ಗಿದ ಇಂಧನ ಬೇಡಿಕೆ ಬೆಂಗಳೂರು (ಜ.17):ದೆಹಲಿ () ಹಾಗೂ ಜಾರ್ಖಂಡ್ () ರಾಜ್ಯಗಳನ್ನು ಹೊರತುಪಡಿಸಿದ್ರೆ ದೇಶಾದ್ಯಂತ ಪೆಟ್ರೋಲ್ () ಹಾಗೂ ಡೀಸೆಲ್ () ಬೆಲೆಯಲ್ಲಿ() ಕಳೆದ ಎರಡೂವರೆ ತಿಂಗಳಿಂದ ಯಾವುದೇ ಬದಲಾವಣೆಯಾಗಿಲ್ಲ. ನವೆಂಬರ್ 4ರಂದು ಕೇಂದ್ರ ಸರ್ಕಾರ ( ) ಇಂಧನ () ಮೇಲಿನ ಅಬಕಾರಿ ಸುಂಕ ( ) ಕಡಿತಗೊಳಿಸಿದ ಬಳಿಕ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿತ್ತು. ಆದ್ರೆ ಆ ಬಳಿಕ ಇಂಧನ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಒಮಿಕ್ರಾನ್ ()ಹಾಗೂ ಕೋವಿಡ್ -19(-19)ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಇದು ಮುಂದಿನ ದಿನಗಳಲ್ಲಿ ಇಂಧನ () ದರದ () ಮೇಲೆ ಪರಿಣಾಮ ಬೀರೋ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜ.17) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ? ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?*ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ()ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ.*ಹುಬ್ಬಳ್ಳಿಯಲ್ಲಿ () ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ.*ಮಂಗಳೂರಿನಲ್ಲಿ()ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ.*ಮೈಸೂರಿನಲ್ಲಿ()ಪೆಟ್ರೋಲ್ ದರ ಲೀಟರ್ ಗೆ 100.08ರೂ.ಇದೆ. ಡೀಸೆಲ್ ದರ ಇಂದು ಲೀಟರ್ ಗೆ 84.56ರೂ. ಇದೆ.*ಕಲಬುರಗಿಯಲ್ಲಿ() ಪೆಟ್ರೋಲ್ ದರ ಲೀಟರ್ ಗೆ 100.04ರೂ. ಹಾಗೂ ಡೀಸೆಲ್ ಗೆ 85.45ರೂ. ಇದೆ. : ವಾರಸುದಾರರ ಕೈತಪ್ಪುವ ವಿಮೆ, ಠೇವಣಿ ಹಣ, ಏನು ಮಾಡಬೇಕು.? ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್() ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. - ಐಟಿ-ಬಿಟಿಯಲ್ಲಿ ದೇಶದಲ್ಲೇ ಕರ್ನಾಟಕ ಪ್ರಥಮ ಸ್ಥಾನ ಇಲ್ಲಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ () ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.