:ಕೊರೋನಾ ಭೀತಿಗೆ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ತಗ್ಗಿದ್ರೂ ಬೆಲೆ ಸ್ಥಿರ ರಾಜ್ಯದಲ್ಲಿ ಕೊರೋನಾ ಪ್ರಕರಗಳ ಸಂಖ್ಯೆ ದಿನೇದಿನೆ ಹೆಚ್ಚುತ್ತಿದ್ದು, ವಾಹನಸವಾರರು ದೂರ ಪ್ರಯಾಣವನ್ನು ಮುಂದೂಡುತ್ತಿದ್ದಾರೆ. ಹೀಗಾಗಿ ಸಹಜವಾಗಿಯೇ ಪೆಟ್ರೋಲ್ ಹಾಗೂ ಡೀಸೆಲ್ ಬೇಡಿಕೆ ತಗ್ಗಿದ್ದು, ಬೆಲೆ ಮೇಲೆ ಮಾತ್ರ ಯಾವುದೇ ಪರಿಣಾಮ ಬೀರಿಲ್ಲ. ಬೆಂಗಳೂರು (ಜ.14):ರಾಜ್ಯದಲ್ಲಿ ಕೋವಿಡ್ -19(-19)ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ವೀಕೆಂಡ್ () ಹಾಗೂ ನೈಟ್ ಕರ್ಫ್ಯೂ ಗಳನ್ನು ( ) ಹೇರಿದೆ. ಆದ್ರೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಮಾತ್ರ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಎರಡು ತಿಂಗಳಿಗೂ ಅಧಿಕ ಸಮಯದಿಂದ ರಾಜ್ಯದಲ್ಲಿ ಇಂಧನ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ನವೆಂಬರ್ 4ರಂದು ಕೇಂದ್ರ ಸರ್ಕಾರ ( ) ಇಂಧನ () ಮೇಲಿನ ಅಬಕಾರಿ ಸುಂಕ ( )ಕಡಿತಗೊಳಿಸಿದ ಬಳಿಕ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿತ್ತು. ಶುಕ್ರವಾರವಾದ ಇಂದು (ಜ.14) ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರವಾಗಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜ.14) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೀಗಿದೆ. " ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?*ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ()ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ.*ಹುಬ್ಬಳ್ಳಿಯಲ್ಲಿ () ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ.*ಮಂಗಳೂರಿನಲ್ಲಿ()ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ.*ಮೈಸೂರಿನಲ್ಲಿ()ಪೆಟ್ರೋಲ್ ದರ ಲೀಟರ್ ಗೆ 100.22ರೂ.ಇದೆ. ನಿನ್ನೆ 100.33ರೂ. ಇತ್ತು. ಡೀಸೆಲ್ ದರ ಇಂದು ಲೀಟರ್ ಗೆ 84. 68ರೂ. ಇದೆ. ನಿನ್ನೆ 84.78ರೂ. ಇತ್ತು.*ಕಲಬುರಗಿಯಲ್ಲಿ() ಪೆಟ್ರೋಲ್ ದರ ಲೀಟರ್ ಗೆ 100.28ರೂ. ಹಾಗೂ ಡೀಸೆಲ್ ಗೆ 84.77ರೂ. ಇದೆ. 2022: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಮರುಬಂಡವಾಳೀಕರಣಕ್ಕೆ ಹಣ ಮೀಸಲಿಡೋ ಸಾಧ್ಯತೆ ಕಡಿಮೆ: ವರದಿ ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್() ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 2022 :ಕೈಗಾರಿಕಾ ವಲಯಕ್ಕೆ ಸಂಬಂಧಿಸಿ ವಿತ್ತ ಸಚಿವರಿಗೆ 12 ಸಲಹೆ ನೀಡಿದ ಇಲ್ಲಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ () ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. "