: ಇಂಧನ ದರದ ಮೇಲೆ ಪರಿಣಾಮ ಬೀರದ ಕೋವಿಡ್ -19; ರಾಜ್ಯದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ಆದ್ರೆ ಇದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.ಇಂದು ಕೂಡ ಇಂಧನ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರು (ಜ.12):ದೇಶದಲ್ಲಿ ಕೋವಿಡ್ -19(-19) ಪ್ರಕರಣಗಳ ಪ್ರಮಾಣ ಹೆಚ್ಚುತ್ತಿದ್ದು, ಕರ್ನಾಟಕ () ಸೇರಿದಂತೆ ಕೆಲವು ರಾಜ್ಯಗಳಲ್ಲಿ ವೀಕೆಂಡ್ ()ಹಾಗೂ ನೈಟ್ ಕರ್ಫ್ಯೂ ಗಳನ್ನು ( )ಹೇರಲಾಗಿದೆ. ಆದ್ರೆ ಇದ್ಯಾವುದೂ ಪೆಟ್ರೋಲ್ () ಹಾಗೂ ಡೀಸೆಲ್ () ಬೆಲೆ () ಮೇಲೆ ಪರಿಣಾಮ ಬೀರಿಲ್ಲ. ಆದ್ರೆ ಇಂಧನ () ಬೇಡಿಕೆ ಮೇಲೆ ಸ್ವಲ್ಪ ಮಟ್ಟಿಗೆ ಪರಿಣಾಮ ಬೀರಿರೋದಂತೂ ನಿಜ. ವೀಕೆಂಡ್ ಗಳಲ್ಲಿ ಜನರ ಓಡಾಟದ ಮೇಲೆ ನಿರ್ಬಂಧ ವಿಧಿಸಿರೋ ಕಾರಣ ವಾಹನಸವಾರರು ರಸ್ತೆಗಳಿಯೋದಿಲ್ಲ. ಇದ್ರಿಂದ ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ () ತಗ್ಗೋದು ಸಹಜ. ಇದು ಇಂಧನ ಬೆಲೆ ಮೇಲೆ ಮುಂದಿನ ದಿನಗಳಲ್ಲಿ ಪರಿಣಾಮ ಬೀರೋ ಸಾಧ್ಯತೆಯೂ ಇದೆ. ನವೆಂಬರ್ 4ರಂದು ಕೇಂದ್ರ ಸರ್ಕಾರ ( ) ಇಂಧನ () ಮೇಲಿನ ಅಬಕಾರಿ ಸುಂಕ ( )ಕಡಿತಗೊಳಿಸಿದ ಬಳಿಕ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿತ್ತು. ಅದಾದ ನಂತರ ಡಿಸೆಂಬರ್ ನಲ್ಲಿ ದೆಹಲಿ () ಹಾಗೂ ಜಾರ್ಖಂಡ್ ( ) ಸರ್ಕಾರಗಳು ಪೆಟ್ರೋಲ್ ಮೇಲಿನ ವ್ಯಾಟ್ () ಕಡಿತಗೊಳಿಸೋ ಮೂಲಕ ಬೆಲೆಯಲ್ಲಿ ಇಳಿಕೆ ಮಾಡಿದ್ದವು. ಉಳಿದಂತೆ ದೇಶಾದ್ಯಂತ ಕಳೆದ ಎರಡೂ ತಿಂಗಳಿಗೂ ಅಧಿಕ ಸಮಯದಿಂದ ಇಂಧನ ದರ ಸ್ಥಿರವಾಗಿದೆ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಜ.12) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ? ರಾಜ್ಯದ ಪ್ರಮುಖ ನಗರಗಳಲ್ಲಿ ಹೀಗಿದೆ ಇಂಧನ ದರ*ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ() ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ.*ಹುಬ್ಬಳ್ಳಿಯಲ್ಲಿ () ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ.*ಮಂಗಳೂರಿನಲ್ಲಿ ()ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ.*ಮೈಸೂರಿನಲ್ಲಿ () ಪೆಟ್ರೋಲ್ ದರ ಲೀಟರ್ ಗೆ 100.08ರೂ.ಇದೆ. ನಿನ್ನೆ 100.22ರೂ. ಇತ್ತು. ಡೀಸೆಲ್ ದರ ಇಂದು ಲೀಟರ್ ಗೆ 84. 56ರೂ. ಇದೆ. ನಿನ್ನೆ 84.68ರೂ. ಇತ್ತು.*ಕಲಬುರಗಿಯಲ್ಲಿ() ಪೆಟ್ರೋಲ್ ದರ ಲೀಟರ್ ಗೆ 100.28ರೂ. ಹಾಗೂ ಡೀಸೆಲ್ ಗೆ 84.77ರೂ. ಇದೆ. : ಈ ಮೂಲಗಳಿಂದ ಹಣ ಗಳಿಸಿದರೆ ಸಿಗುತ್ತೆ ತೆರಿಗೆ ವಿನಾಯಿತಿ! ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್() ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. : ಮಾರ್ಚ್ 15ರವರೆಗೆ ಗಡುವು ವಿಸ್ತರಿಸಿದ ಕೇಂದ್ರ ಸರ್ಕಾರ! ಇಲ್ಲಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ () ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. "