: ದೇಶದಲ್ಲಿಇಂಧನ ದರ ಸ್ಥಿರ; ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಒಮಿಕ್ರಾನ್ ಭೀತಿ, ಹಣದುಬ್ಬರದಲ್ಲಿ ಏರಿಕೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೇರಿಕೆಗೆ ಕಾರಣವಾಗಬಹುದೆಂಬ ಅನುಮಾನದ ನಡುವೆಯೇ ಇಂದು ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರು (ಡಿ.20):ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ( ) ಏರಿಳಿತ ಕಂಡುಬಂದರೂ ದೆಹಲಿ ಹೊರತುಪಡಿಸಿ ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 4ರ ಬಳಿಕ ಪೆಟ್ರೋಲ್ () ಹಾಗೂ ಡೀಸೆಲ್ () ಬೆಲೆಯಲ್ಲಿ () ಯಾವುದೇ ಬದಲಾವಣೆಯಾಗಿಲ್ಲ. ಒಮಿಕ್ರಾನ್ ಮತ್ತೆ ಇಂಧನ ದರ ಏರಿಕೆಗೆ ಕಾರಣವಾಗಬಹುದು ಎಂಬ ಭಯದ ನಡುವೆಯೂ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ವ್ಯತ್ಯಯವಾಗದಿರೋದು ವಾಹನಸವಾರರಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ನೀಡಿದೆ. ದೇಶದಲ್ಲಿ ಚಿಲ್ಲರೆ ಹಾಗೂ ಸಗಟು ಹಣದುಬ್ಬರಲ್ಲಿ ಏರಿಕೆ ಕಂಡುಬಂದಿರೋ ಹಿನ್ನೆಲೆಯಲ್ಲಿ ಇಂಧನ ದರದಲ್ಲೂ ಏರಿಕೆಯಾಗಬಹುದೇ ಎಂಬ ಅನುಮಾನವಂತೂ ಇದ್ದೇಇದೆ. ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಬಕಾರಿ ಸುಂಕ ಸೇರಿದಂತೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ವಿಧಿಸೋ ತೆರಿಗೆಗಳಲ್ಲಿ ಯಾವುದೇ ಬದಲಾವಣೆ ಮಾಡದಿರೋದು ಕೂಡ ಬೆಲೆ ಸ್ಥಿರತೆಗೆ ಕಾರಣವಾಗಿದೆ. ಇಂದು (ಡಿ.20) ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗ ಡೀಸೆಲ್ ಬೆಲೆ ಎಷ್ಟಿದೆ? ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ()ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ ()ಪೆಟ್ರೋಲ್ ಬೆಲೆ 100.30ರೂ. ಹಾಗೂ ಡೀಸೆಲ್ ಬೆಲೆ 84.78 ರೂ.ಇದೆ. ಮಂಗಳೂರಿನಲ್ಲಿ () ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ ()ಪೆಟ್ರೋಲ್ ದರ ಲೀಟರ್ ಗೆ 100.08ರೂ. ಇದೆ. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 84.56ರೂ.ಇದೆ. ನಿನ್ನೆ ಕಲಬುರಗಿಯಲ್ಲಿ() ಪೆಟ್ರೋಲ್ ಬೆಲೆ ಲೀಟರ್ ಗೆ 101.04ರೂ. ಇದೆ. ನಿನ್ನೆ 100.38ರೂ. ಇತ್ತು. ಇಂದು 0.10ರೂ. ಇಳಿಕೆಯಾಗಿ 100.28ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 84.85ರೂ. ಇತ್ತು. ಇಂದು 84.77ರೂ. ಇದೆ. ಅಂದ್ರೆ 0.08ರೂ. ಇಳಿಕೆಯಾಗಿದೆ. ಟಿಕ್‌ಟಾಕ್ ವೈರಲ್ ಫುಡ್ ವಿಡಿಯೋ ಇದೀಗ ಆರ್ಡರ್ ಮಾಡಲು ಸಾಧ್ಯ! ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್() ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. : ಸೋಮವಾರ ದೇಶಾದ್ಯಂತ ಕೈಗಾರಿಕೆಗಳು ಬಂದ್‌: 35 ಸಾವಿರ ಕೋಟಿ ನಷ್ಟ ಸಾಧ್ಯತೆ! ಇಲ್ಲಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ () ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. "