:ವಾಹನಕ್ಕೆ ಇಂಧನ ಹಾಕಿಸೋ ಮುನ್ನ ಬೆಲೆ ಚೆಕ್ ಮಾಡ್ಕೊಳ್ಳಿ; ಇಂದು ರಾಜ್ಯದಲ್ಲಿ ಪೆಟ್ರೋಲ್ ದರ ಎಷ್ಟಿದೆ? ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಕಂಡುಬಂದಿಲ್ಲ. ಹಾಗಾದ್ರೆ ರಾಜ್ಯದಲ್ಲಿ ಇಂದು ಇಂಧನ ಬೆಲೆ ಎಷ್ಟಿದೆ? ಬೆಂಗಳೂರು (ಡಿ.17):ಪೆಟ್ರೋಲ್ ()ಹಾಗೂ ಡೀಸೆಲ್ ()ಬೆಲೆ () ಕಳೆದ ಒಂದು ತಿಂಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ದೆಹಲಿ () ಹೊರತುಪಡಿಸಿದ್ರೆ ದೇಶದ ಇತರ ಪ್ರಮುಖ ನಗರಗಳಲ್ಲಿ ಈ ತಿಂಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಅಕ್ಟೋಬರ್ ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿತ್ತು. ಪೆಟ್ರೋಲ್ ದರ 100ರ ಗಡಿ ದಾಟಿತ್ತು. ಇದು ವಾಹನಸವಾರರ ನೆಮ್ಮದಿ ಕೆಡಿಸಿತ್ತು.ನವೆಂಬರ್ 4ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸೋ ಮೂಲಕ ಇಂಧನ ದರದಲ್ಲಿ ಇಳಿಕೆ ಮಾಡಿತು. ಆ ಬಳಿಕ ಅನೇಕ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ()ಕಡಿತಗೊಳಿಸಿದವು ಕೂಡ. ಇದ್ರಿಂದ ಕೆಲವು ರಾಜ್ಯಗಳಲ್ಲಿ ಇಂಧನ ದರದಲ್ಲಿ ಇನ್ನಷ್ಟು ಇಳಿಕೆ ಕಂಡುಬಂದಿದೆ. ಆ ನಂತರದ ದಿನಗಳಲ್ಲಿ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಇಂದು (ಡಿ.17) ಕೂಡ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗ ಡೀಸೆಲ್ ಬೆಲೆ ಸ್ಥಿರವಾಗಿದೆ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು(ಡಿ.17) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ? ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ()ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ ()ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಮಂಗಳೂರಿನಲ್ಲಿ () ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ ()ಪೆಟ್ರೋಲ್ ದರ ಲೀಟರ್ ಗೆ 100.22ರೂ. ಇದೆ. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 84.68ರೂ.ಇದೆ. ಕಲಬುರಗಿಯಲ್ಲಿ() ಪೆಟ್ರೋಲ್ ಬೆಲೆ ಲೀಟರ್ ಗೆ 100.28ರೂ. ಇದೆ. ಡೀಸೆಲ್ ಲೀಟರ್ ಗೆ 84.77ರೂ. ಇದೆ. ಮತ್ತೊಂದು ಉನ್ನತ ಹುದ್ದೆ ಅಲಂಕರಿಸಿದ ಭಾರತೀಯ ನಾರಿ, ಕಷ್ಟಪಟ್ಟು ಮಾಡಿದ್ದು ಸಾರ್ಥಕ! ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್() ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. :ಹೊಸ ವರ್ಷದಲ್ಲಿ ಜೀವ ವಿಮಾ ಪ್ರೀಮಿಯಂ ದುಬಾರಿ? ಇಲ್ಲಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ () ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. "