: ತಿಂಗಳಿಂದ ಸ್ಥಿರತೆ ಕಾಯ್ದುಕೊಂಡಿರೋ ಇಂಧನ ದರ; ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಸುಮಾರು ಒಂದು ತಿಂಗಳಿಂದ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಗಮನಾರ್ಹ ಏರಿಳಿತ ಕಂಡುಬಂದಿಲ್ಲ. ಇಂದು( ಡಿ.10) ಕೂಡ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರು (ಡಿ.10):ದೆಹಲಿ ಹೊರತುಪಡಿಸಿ ದೇಶದ ಪ್ರಮುಖ ನಗರಗಳಲ್ಲಿ ಒಂದು ತಿಂಗಳಿಗೂ ಅಧಿಕ ಸಮಯದಿಂದ ಪೆಟ್ರೋಲ್ () ಹಾಗೂ ಡೀಸೆಲ್() ದರ() ಸ್ಥಿರತೆ ಕಾಯ್ದುಕೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ () ಇಂದು (ಡಿ.10) ಕೂಡ ಪೆಟ್ರೋಲ್ () ಹಾಗೂ ಡೀಸೆಲ್() ಬೆಲೆಯಲ್ಲಿ ()ಯಾವುದೇ ಬದಲಾವಣೆಯಾಗಿಲ್ಲ. ಕಳೆದ 37 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಅಕ್ಟೋಬರ್ ನಲ್ಲಿ ನಿರಂತರ ಏರಿಕೆ ಕಂಡು ವಾಹನಸವಾರರ ನೆಮ್ಮದಿ ಕೆಡಿಸಿದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕೇಂದ್ರ ಸರ್ಕಾರ( ) ಅಬಕಾರಿ ಸುಂಕ ( ) ಕಡಿತಗೊಳಿಸಿದ ಹಿನ್ನೆಲೆಯಲ್ಲಿ ನವೆಂಬರ್ 4ರಿಂದ ಇಳಿಕೆ ಕಂಡು ಯಥಾಸ್ಥಿತಿ ಕಾಯ್ದುಕೊಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ( ) ಕಚ್ಚಾ ತೈಲದ( )ಬೆಲೆ ಏರಿಕೆಯಾಗಿದ್ರೂ ದೇಶದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ()ಇಂದು (ಡಿ.10) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ? ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ()ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದ್ದು, ಯಥಾಸ್ಥಿತಿ ಕಾಯ್ದುಕೊಂಡಿದೆ. ಹುಬ್ಬಳ್ಳಿಯಲ್ಲಿ ()ಪೆಟ್ರೋಲ್ ಬೆಲೆ 100.30ರೂ. ಹಾಗೂ ಡೀಸೆಲ್ ಬೆಲೆ 84.78 ರೂ.ಇದೆ. ಮಂಗಳೂರಿನಲ್ಲಿ ()ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ()ಪೆಟ್ರೋಲ್ ದರ ಲೀಟರ್ ಗೆ 100.32ರೂ. ಹಾಗೂ ಡೀಸೆಲ್ ದರ ಲೀಟರ್ ಗೆ 84.77ರೂ.ಇದೆ. ಪೆಟ್ರೋಲ್ ಬೆಲೆಯಲ್ಲಿ 0.24ರೂ.ಹಾಗೂ ಡೀಸೆಲ್ ದರದಲ್ಲಿ 0.21 ಏರಿಕೆ ಕಂಡುಬಂದಿದೆ. ಕಲಬುರಗಿಯಲ್ಲಿ()ಪೆಟ್ರೋಲ್ ಗೆ 101.05ರೂ. ಹಾಗೂ ಡೀಸೆಲ್ ಗೆ 85.46ರೂ.ಇದೆ. ಪೆಟ್ರೋಲ್ ಬೆಲೆಯಲ್ಲಿ 0.77ರೂ.ಹಾಗೂ ಡೀಸೆಲ್ ದರದಲ್ಲಿ 0.69ರೂ. ಏರಿಕೆಯಾಗಿದೆ. ₹500 ಯಾವುದು ಅಸಲಿ ಯಾವುದು ನಕಲಿ? ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್() ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇ-ವಹಿವಾಟುಗಳ ಮೇಲಿನ ಶುಲ್ಕ ಪರಿಷ್ಕರಣೆಗೆ ಚಿಂತನೆ ಇಲ್ಲಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ () ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. "