ಶೀಘ್ರದಲ್ಲೇ ರೈತರ ಖಾತೆಗೆ ಹಣ, ಆದ್ರೆ ಇವರಿಗಿಲ್ಲ ಯೋಜನೆ ಫಲಾನುಭವಿಯಾಗೋ ಭಾಗ್ಯ ಕಿಸಾನ್ ಸಮ್ಮಾನ್ ನಿಧಿ 10ನೇ ಕಂತಿನ ಹಣಕ್ಕಾಗಿ ನಿರೀಕ್ಷಿಸುತ್ತಿರೋ ರೈತರಿಗೆ ಶುಭಸುದ್ದಿ. ಶೀಘ್ರದಲ್ಲೇ ರೈತರ ಖಾತೆಗೆ ಹಣ ಜಮೆಯಾಗಲಿದೆ. ನವದೆಹಲಿ (ಡಿ.9):ದೇಶದ ರೈತರಿಗೆ ಕೇಂದ್ರ ಸರ್ಕಾರ ( ) ಶುಭ ಸುದ್ದಿ ನೀಡಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ( ) ಯೋಜನೆಯ 10ನೇ ಕಂತಿನ ಹಣವು ಶೀಘ್ರದಲ್ಲೇ ರೈತರ() ಬ್ಯಾಂಕ್ ಖಾತೆಗೆ ( ) ಜಮೆಯಾಗಲಿದೆ. ಡಿಸೆಂಬರ್ 15 ಹಾಗೂ 25 ರ ನಡುವೆ ಯಾವ ದಿನ ಬೇಕಿದ್ದರೂ ಈ ಹಣ ಖಾತೆಗೆ ಬರಬಹುದು ಎಂದು ಮೂಲಗಳು ತಿಳಿಸಿವೆ. ಈ ಯೋಜನೆ ಮುಖಾಂತರ ಸರ್ಕಾರ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ ಒಟ್ಟು 6000ರೂ. ಆರ್ಥಿಕ ಸಹಾಯ ನೀಡುತ್ತದೆ. ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ 2000ರೂ. ಅನ್ನು ಸರ್ಕಾರ ಜಮೆ ಮಾಡುತ್ತದೆ. ಈ ರೀತಿ ಇಲ್ಲಿಯ ತನಕ ಸರ್ಕಾರ 9n ಕಂತುಗಳಲ್ಲಿ ರೈತರ ಖಾತೆಗಳಿಗೆ ಹಣ ಜಮೆ ಮಾಡಿದೆ. ಈ ತಿಂಗಳು ಹತ್ತನೇ ಕಂತಿನ ಹಣವನ್ನು ಜಮೆ ಮಾಡಬೇಕಿದೆ. ಒಂದು ವೇಳೆ ನೀವು ರೈತರಾಗಿದ್ದು, ಇನ್ನೂ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಸೇರ್ಪಡೆಗೊಂಡಿಲ್ಲ ಎಂದಾದ್ರೆ ಇಂದೇ ಹೆಸರು ನೋಂದಾಯಿಸಿ. 10ನೇ ಕಂತಿನ ಫಲಾನುವಿ ಪಟ್ಟಿ ಪರಿಶೀಲಿಸೋದು ಹೇಗೆ?-ಮೊದಲಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ://../ ಭೇಟಿ ನೀಡಿ.-ಈಗ ಮುಖಪುಟದಲ್ಲಿ ' 'ಎಂಬ ಆಯ್ಕೆ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.-ಇಲ್ಲಿ ಮೇಲೆ ಕ್ಲಿಕ್ ಮಾಡಿದ್ರೆ ಹೊಸ ಪುಟ ತೆರೆದುಕೊಳ್ಳುತ್ತದೆ.-ಈ ಪುಟದಲ್ಲಿ ನಿಮ್ಮ ರಾಜ್ಯ, ಜಿಲ್ಲೆ, ತಾಲೂಕು ಹಾಗೂ ಗ್ರಾಮದ ಮಾಹಿತಿ ಭರ್ತಿ ಮಾಡಿ.-ಆ ಬಳಿಕ ಆಯ್ಕೆ ಮೇಲೆ ಕ್ಲಿಕಿಸಿ. ಈಗ ನಿಮಗೆ ಫಲಾನುಭವಿಗಳ ಪಟ್ಟಿ ಸಿಗುತ್ತದೆ. ಇದ್ರಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಪರಿಶೀಲಿಸಿ. :ವಾಣಿಜ್ಯ ವಾಹನ ಉತ್ಪಾದನೆ ಉದ್ಯಮದಲ್ಲಿ 7,500ಕೋಟಿ ರೂ. ಹೂಡಿಕೆಗೆ ನಿರ್ಧಾರ? ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಸೇರ್ಪಡೆಗೊಳ್ಳೋದು ಹೇಗೆ?- ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಅಧಿಕೃತ ವೆಬ್ ಸೈಟ್ .... ಭೇಟಿ ನೀಡಿ.-ಮುಖಪುಟದಲ್ಲಿ ಕಾಣಿಸೋ ' 'ಎಂಬ ಆಯ್ಕೆ ಮೇಲೆ ಕ್ಲಿಕಿಸಿ.-ಈಗ ' 'ಮೇಲೆ ಕ್ಲಿಕ್ ಮಾಡಿ.-ಈಗ ನೋಂದಣಿ ಅರ್ಜಿ ತೆರೆದುಕೊಳ್ಳುತ್ತದೆ. ಇದ್ರಲ್ಲಿ ಕೇಳಿರೋ ಎಲ್ಲ ಮಾಹಿತಿಗಳನ್ನು ಭರ್ತಿ ಮಾಡಿ.-ಬಳಿಕ ಆಯ್ಕೆ ಮೇಲೆ ಕ್ಲಿಕ್ ಮಾಡಿ. :ಐಪಿಒ, ಸರ್ಕಾರಿ ಬಾಂಡ್ ಹೂಡಿಕೆಗೆ ಯುಪಿಐ ವಹಿವಾಟು ಮಿತಿ 5ಲಕ್ಷ ರೂ.ಗೆ ಏರಿಕೆ ಈ ರೈತರಿಗೆ ಪ್ರಯೋಜನ ಸಿಗಲ್ಲ-ಒಂದು ಕುಟುಂಬದ ಯಾವುದೇ ಸದಸ್ಯ ಆದಾಯ ತೆರಿಗೆ ಪಾವತಿಸುತ್ತಿದ್ರೆ ಅಂಥ ಕುಟುಂಬದ ರೈತನಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಫಲಾನುಭವಿಯಾಗಲು ಸಾಧ್ಯವಿಲ್ಲ.-ಯಾರ ಬಳಿ ಕೃಷಿಯೋಗ್ಯ ಭೂಮಿಯಿಲ್ಲವೋ ಅಂಥವರು ಕೂಡ ಈ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಿಲ್ಲ.-ಒಂದು ವೇಳೆ ಕೃಷಿ ಭೂಮಿ ನಿಮ್ಮ ಹೆಸರಿನಲ್ಲಿ ಇಲ್ಲದಿದ್ರೆ ಅಂದ್ರೆ ನಿಮ್ಮ ತಾತಾ ಅಥವಾ ಅಪ್ಪನ ಹೆಸರಿನಲ್ಲಿದ್ರೆ ನೀವು ಈ ಯೋಜನೆ ವ್ಯಾಪ್ತಿಗೆ ಒಳಪಡೋದಿಲ್ಲ.-ಒಂದು ವೇಳೆ ನೀವು ಕೃಷಿ ಭೂಮಿ ಹೊಂದಿದ್ದು, ಸರ್ಕಾರಿ ನೌಕರಿಯಲ್ಲಿದ್ರೆ ನಿಮಗೆ ಈ ಯೋಜನೆ ಲಾಭ ಸಿಗೋದಿಲ್ಲ.-ನೋಂದಾಯಿತ ವೈದ್ಯ, ಇಂಜಿನಿಯರ್, ನ್ಯಾಯವಾದಿ ಹಾಗೂ ಸಿಎ ಅಂಥ ಹುದ್ದೆಯಲ್ಲಿರೋ ವ್ಯಕ್ತಿ ಹೆಸರಿನಲ್ಲಿ ಕೃಷಿ ಭೂಮಿ ಇದ್ದರೂ ಆತ ಈ ಯೋಜನೆ ಫಲಾನುಭವಿಯಾಗಲು ಸಾಧ್ಯವಿಲ್ಲ.-ಯಾವುದೇ ರೈತನಿಗೆ ಮಾಸಿಕ 10 ಸಾವಿರ ರೂ. ಪಿಂಚಣಿ ದೊರೆಯುತ್ತಿದ್ರೆ, ಅಂಥವರು ಕೂಡ ಈ ಯೋಜನೆ ಫಲಾನುಭವಿಯಾಗಲು ಸಾಧ್ಯವಿಲ್ಲ.