: ಬೆಂಗಳೂರಿನಲ್ಲಿ ಯಥಾಸ್ಥಿತಿ ಕಾಯ್ದುಕೊಂಡ ಪೆಟ್ರೋಲ್ , ಡೀಸೆಲ್ ದರ ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಕಳೆದ ಕೆಲವು ದಿನಗಳಿಂದ ಯಾವುದೇ ಬದಲಾವಣೆಯಾಗಿಲ್ಲ. ರಾಜ್ಯದ ಇತರ ಪ್ರಮುಖ ನಗರಗಳಲ್ಲಿ ಕೂಡ ಇಂದು (ಡಿ.3) ಇಂಧನ ದರದಲ್ಲಿ ಗಮನಾರ್ಹ ಬದಲಾವಣೆಯಾಗಿಲ್ಲ. ಬೆಂಗಳೂರು (ಡಿ.3):ಬೆಂಗಳೂರಿನಲ್ಲಿ ಪೆಟ್ರೋಲ್ () ಹಾಗೂ ಡೀಸೆಲ್ () ಬೆಲೆ ಇಂದು (ಡಿ.3) ಕೂಡ ಯಥಾಸ್ಥಿತಿ ಕಾಯ್ದುಕೊಂಡಿದೆ. ರಾಜ್ಯದ ಇತರ ಪ್ರಮುಖ ನಗರಗಳಲ್ಲಿ ಕೂಡ ಇಂಧನ ದರದಲ್ಲಿ ಗಮನಾರ್ಹ ಬದಲಾವಣೆಯಾಗಿಲ್ಲ. ದೆಹಲಿ () ಹೊರತುಪಡಿಸಿ ದೇಶದ ಪ್ರಮುಖ ಮಹಾನಗರಗಳಲ್ಲಿ ಸತತ 29 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಡಿಸೆಂಬರ್ ತಿಂಗಳ ಮೊದಲ ದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಮಾಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ದೆಹಲಿ ಹೊರತುಪಡಿಸಿ ದೇಶದ ಬೇರೆ ಯಾವ ನಗರಗಳಲ್ಲಿಯೂ ಪೆಟ್ರೋಲ್ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ಕಳೆದ ತಿಂಗಳು ನಿರಂತರ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ದೀಪಾವಳಿ ಸಮಯದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕಾರಣ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡು, ಕೆಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ರಾಜ್ಯದ ಪ್ರಮುಖ ನಗರಗಳ () ಇಂದಿನ (ಡಿ.3) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮಾಹಿತಿ ಇಲ್ಲಿದೆ. ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ?ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ() ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ. ಕಳೆದ 10 ದಿನಗಳಿಂದ ಸ್ವಲ್ಪವೂ ಬದಲಾವಣೆಯಾಗದೆ ಸ್ಥಿರತೆ ಕಾಯ್ದುಕೊಂಡಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ () ಪೆಟ್ರೋಲ್ ಬೆಲೆ 100.40ರೂ. ಹಾಗೂ ಡೀಸೆಲ್ ಬೆಲೆ 84.88 ರೂ.ಇದೆ. ಪೆಟ್ರೋಲ್ ದರ ನಿನ್ನೆಗಿಂತ ಇಂದು 0.09 ರೂ. ಏರಿಕೆಯಾಗಿದೆ. ಡೀಸೆಲ್ ಬೆಲೆಯಲ್ಲಿ 0.09 ರೂ. ಏರಿಕೆಯಾಗಿದೆ. ಮಂಗಳೂರಿನಲ್ಲಿ () ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದ್ದರೆ, ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ () ಪೆಟ್ರೋಲ್ ಗೆ 100.08ರೂ. ಹಾಗೂ ಡೀಸೆಲ್ ಗೆ 84.56ರೂ. ಇದೆ. ಪೆಟ್ರೋಲ್ ದರದಲ್ಲಿ ನಿನ್ನೆಗಿಂತ 0.33ರೂ. ಹಾಗೂ ಡೀಸೆಲ್ ಬೆಲೆಯಲ್ಲಿ 0.30ರೂ. ಇಳಿಕೆಯಾಗಿದೆ. ಬಿಸಿಲ ನಗರಿ ಕಲಬುರಗಿಯಲ್ಲಿ () ಪೆಟ್ರೋಲ್ ಗೆ 101.05ರೂ. ಹಾಗೂ ಡೀಸೆಲ್ ಗೆ 85.46ರೂ.ಇದೆ. ಕಚ್ಚಾವಸ್ತುಗಳ ದರ ಏರಿಕೆ : ಸಿಮೆಂಟ್‌ ಬೆಲೆ ಹೆಚ್ಚಳ! ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್() ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಹಿಂದೆ ಬಿದ್ದ ಮಾರುತಿ, ಹುಂಡೈ, ಮುಂದೆ ಹೋದ ಟಾಟಾ ಇಲ್ಲಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ () ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. "