ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಟ ಮಟ್ಟಕ್ಕೆ ಏರಿಕೆ: 10 ಗ್ರಾಂಗೆ 65000 ರೂಪಾಯಿ ಕಳೆದ ಕೆಲ ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ಬೆಲೆ ಮಂಗಳವಾರ ದೆಹಲಿಯ ಮಾರುಕಟ್ಟೆಯಲ್ಲಿ ಪ್ರತಿ 10 ಗ್ರಾಂಗೆ 800 ರು. ಏರಿಕೆ ಕಾಣುವ ಮೂಲಕ 65000 ರು. ತಲುಪಿದೆ. ಇದು ಚಿನ್ನದ ಸಾರ್ವಕಾಲಿಕ ಗರಿಷ್ಠ ದರವಾಗಿದೆ ನವದೆಹಲಿ: ಕಳೆದ ಕೆಲ ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ಬೆಲೆ ಮಂಗಳವಾರ ದೆಹಲಿಯ ಮಾರುಕಟ್ಟೆಯಲ್ಲಿ ಪ್ರತಿ 10 ಗ್ರಾಂಗೆ 800 ರು. ಏರಿಕೆ ಕಾಣುವ ಮೂಲಕ 65000 ರು. ತಲುಪಿದೆ. ಇದು ಚಿನ್ನದ ಸಾರ್ವಕಾಲಿಕ ಗರಿಷ್ಠ ದರವಾಗಿದೆ.ಉಳಿದಂತೆ ಮುಂಬೈ ಮತ್ತು ಕೋಲ್ಕತ್ತಾದಲ್ಲಿ 24 ಕ್ಯಾರೆಟ್‌ ಚಿನ್ನದ ಬೆಲೆ 64,850 ರು. ಇದ್ದರೆ ಚೆನ್ನೈನಲ್ಲಿ 65,620 ರು.ಗೆ ಏರಿದೆ. ಇನ್ನೊಂದೆಡೆ ಬೆಳ್ಳಿ ಬೆಲೆ ಕೂಡಾ ಕೆಜಿಗೆ 900 ರು. ಏರಿಕೆ ಕಂಡು 74900 ರು.ಗೆ ತಲುಪಿದೆ. ಅಮೆರಿಕದಲ್ಲಿ ವಾಣಿಜ್ಯ, ನಿರ್ಮಾಣ ವಲಯದಲ್ಲಿ ಹೂಡಿಕೆ ಕಡಿಮೆಯಾಗಿರುವುದು, ಕೇಂದ್ರೀಯ ಬ್ಯಾಂಕ್‌ ಶೀಘ್ರವೇ ಬಡ್ಡಿದರ ಕಡಿತ ಮಾಡುವ ಸುಳಿವು, ಹಣದುಬ್ಬರದ ಆತಂಕ ಕಡಿಮೆಯಾಗಿರುವುದು ಚಿನ್ನದ ಬೆಲೆ ಮೇಲೇರಿಕೆಗೆ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ... ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 597024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,513 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,76024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,104 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 59,70024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 65,130 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,97, 00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,51,300 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 59,700 ಆಗಿದ್ದರೆ ಚೆನ್ನೈ 60,400, ಮುಂಬೈ 59,700 ಹಾಗೂ ಕೋಲ್ಕತ್ತಾದಲ್ಲಿ 59,700 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 59,850 ರೂ. ಆಗಿದೆ. ಇಂದಿನ ಬೆಳ್ಳಿ ದರಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ಹಾಗೆಯೇ ಬೆಂಗಳೂರಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 727.50 ರೂ. 7275 ಹಾಗೂ ರೂ. 72,750 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 78,000 ಆಗಿದ್ದರೆ, ಮುಂಬೈನಲ್ಲಿ ರೂ. 74,500 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 74,500 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 74,500 ಆಗಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.