: ಇಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಹೇಗಿದೆ ನೋಡಿ.. ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ.. ಇಂದು ಬೆಂಗಳೂರಿನಲ್ಲಿ () ಬಂಗಾರ (), ಬೆಳ್ಳಿ () ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ () ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ.. ಇಂದು ದೇಶದಲ್ಲಿ () ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಅದೇ ರೀತಿ, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ.. ಇದನ್ನು ಓದಿ: : ಮಂಗಳವಾರ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ.. ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,87524 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,409 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,272 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 58,75024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 64,090 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,87,50024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,40,900 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 58,750 ಆಗಿದ್ದು ನಿನ್ನೆಗಿಂತ ಬೆಲೆ ಹೆಚ್ಚಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 59,200, ರೂ. 58,750 ಹಾಗೂ 58,750 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಮಂಗಳವಾರ 58,900 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನ ಬೆಳ್ಳಿ ದರಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 765, ರೂ. 7,650 ಹಾಗೂ ರೂ. 76,500 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,300 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 78,600 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 78,900 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 78,900 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.