ಮದುವೆ, ಶುಭ ಸಮಾರಂಭದ ಖುಷಿಯಲ್ಲಿರುವವರಿಗೆ ಶಾಕ್‌: ಬಂಗಾರದ ದರದಲ್ಲಿ ಭಾರಿ ಏರಿಕೆ ಚಿನ್ನದ ದರದಲ್ಲಿ ಒಂದೇ ದಿನ ಭಾರಿ ಏರಿಕೆಯಾಗಿದೆ. ಒಂದೇ ದಿನ ಗ್ರಾಮ್‌ಗೆ 150 ರೂಗಳ ಏರಿಕೆ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 55400 ಗೆ ಏರಿಕೆ ಆಗಿದ್ದು, ಮದುವೆ ಸಂಭ್ರಮದಲ್ಲಿರುವವರ ಖುಷಿಗೆ ಇದು ತಣ್ಣೀರೆರಚಿದೆ. ಚಿನ್ನದ ದರದಲ್ಲಿ ಒಂದೇ ದಿನ ಭಾರಿ ಏರಿಕೆಯಾಗಿದೆ. ಒಂದೇ ದಿನ ಗ್ರಾಮ್‌ಗೆ 150 ರೂಗಳ ಏರಿಕೆ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 55400 ಗೆ ಏರಿಕೆ ಆಗಿದ್ದು, ಮದುವೆ ಸಂಭ್ರಮದಲ್ಲಿರುವವರ ಖುಷಿಗೆ ಇದು ತಣ್ಣೀರೆರಚಿದೆ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇಸ್ರೇಲ್‌ ಪ್ಯಾಲೇಸ್ತೀನ್ ಯುದ್ಧ ಆರಂಭಕ್ಕೂ ಮೊದಲು ಇಳಿಕೆಯಾಗುತ್ತಾ ಸಾಗಿದ್ದ ಚಿನ್ನ, ಯುದ್ಧ ಆರಂಭವಾದ ನಂತರ ಪ್ರತಿದಿನವೂ ಏರಿಕೆಯಾಗುತ್ತಲೇ ಸಾಗಿದೆ.. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ... ಒಂದು ಗ್ರಾಂ ಚಿನ್ನ (1GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 554024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,044 ಎಂಟು ಗ್ರಾಂ ಚಿನ್ನ (8GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 44,32024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 48,352 ಹತ್ತು ಗ್ರಾಂ ಚಿನ್ನ (10GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 55,40024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 60,440 ನೂರು ಗ್ರಾಂ ಚಿನ್ನ (100GM)22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,54,00024 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,04,400 ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 55,400 ಆಗಿದ್ದರೆ ಚೆನ್ನೈ 55,550, ಮುಂಬೈ 55,400 ಹಾಗೂ ಕೋಲ್ಕತ್ತಾದಲ್ಲಿ 55,400 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 55,550 ರೂ. ಆಗಿದೆ. ಇಂದಿನ ಬೆಳ್ಳಿ ದರಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್ಹಾಗೆಯೇ ಬೆಂಗಳೂರಲ್ಲಿ 10 , 100 , 1000 (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 715 ರೂ. 7150 ಹಾಗೂ ರೂ. 71500 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,000 ಆಗಿದ್ದರೆ, ಮುಂಬೈನಲ್ಲಿ ರೂ. 74,100 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 74,100 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 74, 100 ಆಗಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.