2022; ಗಣೇಶ ಕೂರಿಸಲು ಹತ್ತು ಹಲವು ನಿಬಂಧನೆ ಸಿದ್ಧಪಡಿಸಿದ ಪೊಲೀಸ್ ಗಣೇಶ ಕೂರಿಸಲು ಏನೆಲ್ಲಾ ರೂಲ್ಸ್ ಪಾಲೋ ಮಾಡಬೇಕು ಎಂದು ಪೊಲೀಸ್ ಇಲಾಖೆಯಿಂದ ಹತ್ತಾರು ನಿಬಂಧನೆಗಳು ಸಿದ್ದವಾಗಿದೆ. ಆಯೋಜಕರು ಪೊಲೀಸರ ಸೂಚನೆಗಳನ್ನ ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಗಣೇಶ ಕೂರಿಸಲು ಏನೆಲ್ಲಾ ರೂಲ್ಸ್ ಪಾಲೋ ಮಾಡಬೇಕು ಎಂದು ಪೊಲೀಸ್ ಇಲಾಖೆಯಿಂದ ಹತ್ತಾರು ನಿಬಂಧನೆಗಳು ಸಿದ್ದವಾಗಿದೆ. ಆಯೋಜಕರು ಪೊಲೀಸರ ಸೂಚನೆಗಳನ್ನ ಕಟ್ಟುನಿಟ್ಟಾಗಿ ಪಾಲಿಸಲೇಬೇಕು. ಧ್ವನಿವರ್ಧಕಗಳನ್ನು ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಗಣೇಶ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗಾಗಿ ಬಲವಂತವಾಗಿ ಹಾಗೂ ಕಾನೂನು ಬಾಹಿರವಾಗಿ ವಂತಿಗೆಯನ್ನು ಸಂಗ್ರಹಿಸುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಂಭ್ರಮ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಜಾಗೃತೆ ವಹಿಸಬೇಕೆಂದು ಎಚ್ಚರಿಕೆ ನೀಡಲಾಗಿದೆ. ಧ್ವನಿವರ್ಧಕಗಳ ಬಳಕೆಗೆ ನೀಡಿರುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ವಿಸರ್ಜನೆ ಮೆರವಣಿಗೆ ರಾತ್ರಿ 10 ರ ಒಳಗೆ ಮುಗಿಯುವಂತೆ ಆಯೋಜಕರು ನೋಡಿಕೊಳ್ಳಬೇಕು. ಮೆರವಣಿಗೆ ಸಮಯದಲ್ಲಿ ವಿದ್ಯುತ್ ವೈರ್‌ಗಳು, ಮರದ ಕೊಂಬೆಗಳ ಬಗ್ಗೆ ಗಮನಹರಿಸಬೇಕು. ಮೆರವಣಿಗೆ ಅಗತ್ಯವಾದ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಹೀಗೆ ಹತ್ತು ಹಲವು ನಿಬಂಧನೆಗಳನ್ನ ಪೊಲೀಸರು ಸಿದ್ದಪಡಿಸಿದ್ದಾರೆ. ಹಾಗಾದ್ರೆ ಆ ನಿಬಂಧನೆಗಳು ಯಾವುದು ನೀವೇ ನೋಡಿ. : ಗಣಪತಿ ಬಪ್ಪನ ದೊಡ್ಡ ಕಿವಿಯಲ್ಲಿದೆ ಜೀವನ ರಹಸ್ಯ ಹುಬ್ಬಳ್ಳಿ: ಗಣೇಶ ಹಬ್ಬಕ್ಕೆ ಡಿಜೆ ಹಾಕಂಗಿಲ್ಲಾ, ಬಾಡಿಗೆಗೆ ಕೊಡಂಗಿಲ್ಲ: ಖಾಕಿ ನೋಟಿಸ್‌