ದಸರಾ ಬಹಿಷ್ಕರಿಸಲು ಆನೆ ಮಾವುತ, ಕಾವಡಿಗರ ಸಂಘ ನಿರ್ಧಾರ ಸಾಕಾನೆ ಶಿಬಿರಗಳ ಆನೆ ಮಾವುತರು, ಕಾವಡಿಗರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಬಾರಿ ದಸರಾ ಬಹಿಷ್ಕರಿಸಿ ಪ್ರತಿಭಟಿಸಲು ಆನೆ ಮಾವುತ, ಕಾವಡಿಗರ ಸಂಘ ನಿರ್ಧರಿಸಿದೆ. ಕುಶಾಲನಗರ (ಆ.3) :ಸಾಕಾನೆ ಶಿಬಿರಗಳ ಆನೆ ಮಾವುತರು, ಕಾವಡಿಗರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಈ ಬಾರಿ ದಸರಾ ಬಹಿಷ್ಕರಿಸಿ ಪ್ರತಿಭಟಿಸಲು ಆನೆ ಮಾವುತ, ಕಾವಡಿಗರ ಸಂಘ ನಿರ್ಧರಿಸಿದೆ. ವೇತನ ತಾರತಮ್ಯ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ವರ್ಷಗಳಿಂದ ಮನವಿ ಮಾಡಿದರೂ ಇದುವರೆಗೆ ಈಡೇರದ ಕಾರಣ ಈ ಬಾರಿ ದಸರಾಗೆ ಸಾಕಾನೆಗಳನ್ನು ಕಳುಹಿಸದೆ ಪ್ರತಿಭಟನೆ ಹಮ್ಮಿಕೊಳ್ಳಲು ದುಬಾರೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕುಶಾಲನಗರ ವಲಯ ದುಬಾರೆ ಸಂಘದ ಅಧ್ಯಕ್ಷ ಅಣ್ಣಯ್ಯ ದೊರೆಯಪ್ಪ ತಿಳಿಸಿದ್ದಾರೆ. ಆ. 7ರಂದು ವೀರನಹೊಸ್ಸಳ್ಳಿ()ಯಿಂದ ಮೈಸೂರು ದಸರಾ( )ಗೆ ಗಜ ಪಯಣ ಅರಂಭವಾಗಲಿದೆ. ಆಯಾ ಶಿಬಿರಗಳಲ್ಲಿ ಆನೆಗಳ() ನಿರ್ವಹಣೆ ಹೊರತುಪಡಿಸಿ ಹುಲಿ ಹಿಡಿಯುವುದು, ಕಾಡಾನೆ( ) ಹಿಡಿಯುವುದು ಸೇರಿದಂತೆ ದಸರಾಗೆ ಆನೆಗಳನ್ನು ಕಳುಹಿಸುವ ಕಾರ್ಯ ಬಹಿಷ್ಕರಿಸಿ ಪ್ರತಿಭಟಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಘದ ಪ್ರಮುಖ ಮೇಘರಾಜ್‌ ಮಾಹಿತಿ ನೀಡಿದ್ದಾರೆ. ಈ ಸಲ ಅದ್ಧೂರಿಯಾಗಿ ದಸರಾ ಮಹೋತ್ಸವ: ಸರ್ಕಾರದ ನಿರ್ಧಾರ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ( ) ಲಿಖಿತ ರೂಪದಲ್ಲಿ ಭರವಸೆ ನೀಡಿದಲ್ಲಿ ಮಾತ್ರ ಹೆಚ್ಚುವರಿ ಕೆಲಸ ನಿರ್ವಹಿಸಲಾಗುವುದು ಎಂದಿದ್ದಾರೆ. ಈ ನಡುವೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸಂಘದ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದು ಬೇಡಿಕೆಗಳ ಆದಷ್ಟುಶೀಘ್ರದಲ್ಲಿ ಈಡೇರಿಸುವ ಭರವಸೆ ನೀಡಿರುವುದಾಗಿ ತಿಳಿದು ಬಂದಿದೆ. ದುಬಾರೆ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಸಂಘದ ರಾಜ್ಯ ಅಧ್ಯಕ್ಷ ಗೌಸ್‌ ಖಾನ್‌, ಉಪಾಧ್ಯಕ್ಷ ಜೆ.ಕೆ.ಡೋಬಿ, ಪ್ರಧಾನ ಕಾರ್ಯದರ್ಶಿ ಫರ್ವಿನ್‌ ಪಾಷಾ, ಪ್ರಮುಖರಾದ ಮತ್ತಿಗೋಡಿನ ಜೆ.ಕೆ.ವಸಂತ, ರಾಂಪುರದ ನಾಗೇಶ್‌, ಜೈವಾಲ್‌ ಸೇರಿದಂತೆ ದುಬಾರೆ, ಮತ್ತಿಗೋಡು, ಸಕ್ರೆಬೈಲು, ಕೆ.ಗುಡಿ, ರಾಂಪುರ ಶಿಬಿರಗಳ ಮಾವುತ, ಕಾವಾಡಿಗರು ಪಾಲ್ಗೊಂಡಿದ್ದರು. ಈ ಬಾರಿ ಮೈಸೂರು ದಸರಾ ವೈಭವ ಜೋರು, ಸಭೆಯಲ್ಲಿ ನಿರ್ಧಾರ ಅದ್ದೂರಿಯಾಗಿ ದಸರ ಆಚರಿಸಲು ಸಕಲ ಸಿದ್ಧತೆ: ಕಳೆದ ಎರಡು ವರ್ಷಗಳಿಂದ ಕೋವಿಡ್‌ ಕಾರಣಕ್ಕಾಗಿ ಕಳೆಗುಂದಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆಯು ಈಗಾಗಲೇ ಆರಂಭವಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷವೂ ಸರಳ ಹಾಗೂ ಸಾಂಪ್ರದಾಯಿಕ ದಸರಾ ಮಹೋತ್ಸವ ಆಚರಿಸಲಾಗಿತ್ತು. ಈ ಬಾರಿ ಕೋವಿಡ್‌ ಕರಿನೆರಳು ಮಾಯವಾಗುತ್ತಿರುವ ಹಿನ್ನೆಲೆಯಲ್ಲಿ ಅದ್ಧೂರಿ ದಸರಾ ಮಹೋತ್ಸವ ಆಚರಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಹೀಗಾಗಿ, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ತೆರೆಮರೆಯಲ್ಲಿ ಜಿಲ್ಲಾಡಳಿತವು ಮಾಡಿಕೊಳ್ಳುತ್ತಿದೆ. ದಸರಾ ಸಿದ್ಧತೆಗೆ ಮುನ್ನುಡಿ ಎಂಬಂತೆ ವಿಶ್ವವಿಖ್ಯಾತ ಮೈಸೂರು ಅರಮನೆ ಆವರಣದಲ್ಲಿ, ಉದ್ಯಾನವನದಲ್ಲಿ ಬೆಳೆದಿರುವ ಅನಗತ್ಯ ಕಳೆಗಳನ್ನು ಕಿತ್ತು ಸ್ವಚ್ಛಗೊಳಿಸುವ ಕಾರ್ಯವು ಆರಂಭವಾಗಿದೆ. ಮಹಿಳಾ ಮತ್ತು ಪುರುಷ ಕಾರ್ಮಿಕರು ಅರಮನೆ ಆವರಣದಲ್ಲಿ ಬೆಳೆದಿರುವ ಸಣ್ಣಪುಟ್ಟಗಿಡಗಂಟೆಗಳನ್ನು ಕಿತ್ತು ಸ್ವಚ್ಛಗೊಳಿಸುತ್ತಿದ್ದಾರೆ. ಹೀಗೆ ದಸರಾ ಸಿದ್ಧತೆಯಲ್ಲಿರುವಾಗಲೇ ದಸರಾ ಬಹಿಷ್ಕರಿಸಲು ಆನೆ ಮಾವುತ, ಕಾವಡಿಗರ ಸಂಘ ಮುಂದಾಗಿರುವುದು ಚಿಂತೆಗೀಡು ಮಾಡಿದೆ.