ಸರ್ಕಾರದ ಯುವನಿಧಿ ಯೋಜನೆ ಮಾನದಂಡ ಪ್ರಕಟ: ಯಾರಿಗೆಲ್ಲ 3 ಸಾವಿರ ರೂ. ಸಿಗುತ್ತೆ ರಾಜ್ಯ ಸರ್ಕಾರದಿಂದ ಯುವನಿಧಿ ಯೋಜನೆಯಡಿ ರಾಜ್ಯಾದ್ಯಂತ ಯುವಕರಿಗೆ ನೀಡಲಾಗುತ್ತಿರುವ 3 ಸಾವಿರ ರೂ. ನಿರುದ್ಯೋಗ ಭತ್ಯೆಯನ್ನು ಪಡೆಯಲು ಕೆಲವು ಮಾನದಂಡಗಳನ್ನು ಪ್ರಕಟ ಮಾಡಲಾಗಿದೆ. ಬೆಂಗಳೂರು (ಜೂ.03):ರಾಜ್ಯ ಸರ್ಕಾರದಿಂದ ಯುವನಿಧಿ ಯೋಜನೆಯಡಿ ರಾಜ್ಯಾದ್ಯಂತ ಯುವಕರಿಗೆ ನೀಡಲಾಗುತ್ತಿರುವ 3 ಸಾವಿರ ರೂ. ನಿರುದ್ಯೋಗ ಭತ್ಯೆಯನ್ನು ಪಡೆಯಲು ಕೆಲವು ಮಾನದಂಡಗಳನ್ನು ಪ್ರಕಟ ಮಾಡಲಾಗಿದೆ. ಯಾರೆಲ್ಲಾ ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಏನೇನು ಮಾನದಂಡಗಳು ಇರಬೇಕು ಎಂದು ತಿಳಿಸಲಾಗಿದೆ. ಸರ್ಕಾರಿ ಆದೇಶದಲ್ಲಿ ರಾಜ್ಯದಲ್ಲಿ 2022-23 ರಲ್ಲಿ ತೇರ್ಗಡೆಯಾದ ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ ಹಾಗೂ ಡಿಪ್ಲೋಮಾ ಹೊಂದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ ರಂತೆ ನಿರುದ್ಯೋಗ ಭತ್ಯೆ ನೀಡುವ "ಯುವ ನಿಧಿ ಯೋಜನೆ" ( ) ಯನ್ನು ಜಾರಿಗೊಳಿಸಲು ಸರ್ಕಾರವು ತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಕೆಎಸ್ಆರ್‌ಟಿಸಿ ನಡಿಬೇಕಲ್ಲ, ಗಂಡಸ್ರು ಟಿಕೆಟ್ ತಕೊಳ್ರಪ್ಪ: ಡಿಕೆಶಿವಕುಮಾರ್ ಮನವಿ ಪದವಿ ಮುಗಿದು 6 ತಿಂಗಳಾದಲ್ಲಿ ಮಾತ್ರ ಭತ್ಯೆ:2023ರ ವರ್ಷದಲ್ಲಿ ತೇರ್ಗಡೆಯಾಗಿ, ತೇರ್ಗಡೆಯಾದ ದಿನಾಂಕದಿಂದ 180 ದಿನಗಳು ಕಳೆದರೂ ಉದ್ಯೋಗ ಲಭಿಸದ ಪದವೀಧರ ನಿರುದ್ಯೋಗಿಗಳಿಗೆ (ವೃತ್ತಿಪರ ಕೋರ್ಸ್‌ಗಳು ಸೇರಿದಂತೆ) ಪ್ರತಿ ತಿಂಗಳು ರೂ.3000/- (ಮೂರು ಸಾವಿರ ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆ ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ.1500/- (ಒಂದು ಸಾವಿರದ ಐದುನೂರು ರೂ.ಗಳು ಮಾತ್ರ) ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗುವ ಎರಡು ವರ್ಷಗಳ ಅವಧಿಗೆ ನೀಡಲು "ಯುವ ನಿಧಿ ಯೋಜನೆ” ( ) ಯನ್ನು ಈ ಕೆಳಕಂಡ ಷರತ್ತಿಗೊಳಪಟ್ಟು ಅನುಷ್ಟಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಷರತ್ತು ಮತ್ತು ನಿಬಂಧನೆಗಳು:1. ಪದವಿ / ಡಿಪ್ಲೋಮಾ ಮುಗಿಸಿ 6 ತಿಂಗಳಾದರೂ ಉದ್ಯೋಗ ಲಭಿಸದೇ ಇರುವ ಕನ್ನಡಿಗರಿಗೆ ( ) ಮಾತ್ರ ಈ ಯೋಜನೆಯು ಅನ್ವಯವಾಗುತ್ತದೆ.2. ಈ ಸೌಲಭ್ಯವು ಎರಡು ವರ್ಷಗಳ ಅವಧಿಗೆ ಮಾತ್ರು ಅನ್ವಯಿಸುತ್ತದೆ. ಎರಡು ವರ್ಷಗಳ ಅವಧಿಯೊಳಗೆ ಉದ್ಯೋಗ ದೊರೆತಲ್ಲಿ ಫಲಾನುಭವಿಗೆ ಈ ಯೋಜನೆಯ ಸೌಲಭ್ಯವನ್ನು ಸ್ವಗಿತಗೊಳಿಸಲಾಗುವುದು.3. ಭತ್ಯೆಯನ್ನು ಫಲಾನುಭವಿಗಳಿಗೆ ನೇರ ವರ್ಗಾವಣೆ ( ) ಮೂಲಕ ಒದಗಿಸಲು ಉದ್ದೇಶಿಸಲಾಗಿದ್ದು, ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬೇಕು.4. ನಿರುದ್ಯೋಗ ಸ್ಥಿತಿಯ ಬಗ್ಗೆ ಸ್ವತಂತ್ರ ಪರಿಶೀಲನೆ ಇರಬೇಕು ಉದ್ಯೋಗ ಪಡೆದ ನಂತರ ತಪ್ಪು ಘೋಷಣೆ ಅಥವಾ ಘೋಷಿಸಲು ವಿಫಲವಾದರೆ ದಂಡ ವಿಧಿಸಲಾಗುವುದು. : ಬೆಂಗಳೂರಿನ ಮೂರು ಪ್ರಮುಖ ರೈಲುಗಳು ಕ್ಯಾನ್ಸಲ್ ಯೋಜನೆಗೆ ಅರ್ಹರಾಗದೇ ಇರುವವರು:1. ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಭ್ಯಾಸ ಮುಂದುವರೆಸುವವರು.2, ಶಿಶಿಕ್ಷು () ವೇತನವನ್ನು ಪಡೆಯುತ್ತಿರುವವರು.3. ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.4, ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.