ಬಹುನಿರೀಕ್ಷಿತ 7ನೇ ವೇತನ ಆಯೋಗ ಇಂದು ಘೋಷಣೆ ಬೆಂಗಳೂರು: ಏಳನೇ ವೇತನ ಆಯೋಗ ರಚಿಸಬೇಕೆಂಬ ಸರ್ಕಾರಿ ನೌಕರರ ಬಹಳ ದಿನಗಳ ಬೇಡಿಕೆಯಂತೆ ರಾಜ್ಯ ಸರ್ಕಾರ ಇಂದು ಆಯೋಗ ರಚಿಸಿ ಆದೇಶ ಹೊರಡಿಸುವ ಸಾಧ್ಯತೆ ಇದೆ.ವೇತನ ಆಯೋಗ ರಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆಯೇ ಪ್ರಕಟಿಸಿದ್ದರು. ಈಗ ಆಯೋಗ ರಚಿಸುವ ಸಂಬಂಧ ಮುಖ್ಯಮಂತ್ರಿಗಳು ಭಾನುವಾರ ಸಭೆ ನಡೆಸಿ ಅಂತಿಮಗೊಳಿಸಿದ್ದು, ಇಂದು ಅಧಿಕೃತವಾಗಿ ಘೋಷಿಸುವ ಸಂಭವವಿದೆ. ನೂತನ ವೇತನ ಆಯೋಗದ ಶಿಫಾರಸಿನಿಂದ 13.5 ಲಕ್ಷ ಮಂದಿಗೆ ಅನುಕೂಲವಾಗಲಿದೆ. 6 ಲಕ್ಷ ಸರ್ಕಾರಿ ನೌಕರರು ( ), ನಿಗಮ-ಮಂಡಳಿ, ಪ್ರಾಧಿಕಾರಿಗಳ 3 ಲಕ್ಷ ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತರಿಗೆ 7ನೇ ವೇತನ ಆಯೋಗ ಅನ್ವಯವಾಗಲಿದ್ದು, ವರ್ಷಕ್ಕೆ ಸರ್ಕಾರವು ( ) ಹೆಚ್ಚುವರಿಯಾಗಿ ಸುಮಾರು 12,500 ಕೋಟಿ ರು. ವೆಚ್ಚ ಮಾಡಬೇಕಾದ ನಿರೀಕ್ಷೆ ಇದೆ.ಇದೇ ಮೊದಲ ಬಾರಿಗೆ ಐದು ವರ್ಷದೊಳಗೇ ಮತ್ತೊಂದು ವೇತನ ಆಯೋಗ ( ) ರಚನೆಯಾಗುತ್ತಿರುವುದು ಐತಿಹಾಸಿಕವಾಗಿದೆ. ಆಯೋಗದಿಂದ ಶೇ.40ರಷ್ಟು ವೇತನ ಹೆಚ್ಚಳವಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ .ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ 1-7-2022ರಿಂದ ಅನ್ವಯವಾಗುವಂತೆ ಕಾಲ್ಪನಿಕ ಸೌಲಭ್ಯ, 1-1-2023ರಿಂದ ಆರ್ಥಿಕವಾಗಿ ಸೌಲಭ್ಯ ನೀಡಬೇಕು, ಶೇ.40ರಷ್ಟುವೇತನ ಹೆಚ್ಚಳ ಮಾಡಬೇಕು ಎಂದು ಸರ್ಕಾರಿ ನೌಕರರು ಬೇಡಿಕೆ ಮಂಡಿಸಿದ್ದಾರೆ. ಬಸವರಾಜ ಬೊಮ್ಮಾಯಿ ( ) ಅವರು ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್‌ನಲ್ಲಿ () 7ನೇ ವೇತನ ಆಯೋಗದ (7th ) ಶಿಫಾರಸುಗಳ ಅನುಷ್ಠಾನಕ್ಕಾಗಿ ಹಣ ಮೀಸಲಿಡುವ ಸಾಧ್ಯತೆ ಇದೆ. ಸರ್ಕಾರಿ ಉದ್ಯೋಗಿಗಳೇ ಗಮನಿಸಿ, 7ನೇ ವೇತನ ಆಯೋಗದಡಿಯಲ್ಲಿ ದೊರೆತ ಸಂಬಳ ಬಾಕಿಗಿದೆ ತೆರಿಗೆ ಪರಿಹಾರ