ಅಗ್ನಿಶಾಮಕಕ್ಕೆ ಈ ವರ್ಷ 2000 ಜನ ನೇಮಕ: ಗೃಹ ಸಚಿವ ಜ್ಞಾನೇಂದ್ರ * ಬೆಂಗಳೂರಲ್ಲಿ ಹೊಸ ಅಗ್ನಿಶಾಮಕ ಕಟ್ಟಡ ಉದ್ಘಾಟಿಸಿದ ಗೃಹ ಸಚಿವ ಆರಗ* ರಾಜ್ಯದ ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧ* ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ವಿಶೇಷ ಆದತ್ಯೆ ಬೆಂಗಳೂರು(ಜೂ.30):ರಾಜ್ಯದಲ್ಲಿ ಪ್ರಸಕ್ತ ವರ್ಷ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗೆ ಇಲಾಖೆಗೆ 2 ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬುಧವಾರ ಜಯನಗರದಲ್ಲಿ ಅಗ್ನಿಶಾಮಕ ದಳ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಜನತೆಯ ಪ್ರಾಣ ಹಾಗೂ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದರು.ಅಗ್ನಿಶಾಮಕ ಇಲಾಖೆಗೆ ಅತ್ಯಾಧುನಿಕ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ವಿಶೇಷ ಆದತ್ಯೆ ನೀಡುತ್ತದೆ. ಪ್ರಸಕ್ತ ವರ್ಷ ಅಗ್ನಿಶಾಮಕ ದಳಕ್ಕೆ ಹೊಸದಾಗಿ ಎರಡು ಸಾವಿರ ಸಿಬ್ಬಂದಿಯನ್ನು ನೇಮಕ ಮಾಡಲಾಗುತ್ತದೆ. ಇಲಾಖೆಗೆ ಹೆಚ್ಚಿನ ಅನುದಾನವನ್ನು ಸರ್ಕಾರ ಒದಗಿಸಲಿದೆ ಎಂದು ತಿಳಿಸಿದರು. ಮುಂದಿನ 3 ವರ್ಷದಲ್ಲಿ 5,300 ಪೌರಕಾರ್ಮಿಕರ ನೇಮಕ: ಎಂಟಿಬಿ ಕಾರ್ಯಕ್ರಮದಲ್ಲಿ ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ, ರಾಜ್ಯ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೆ.ವಿ.ಶರತ್‌ ಚಂದ್ರ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ ಅಮರ್‌ ಕುಮಾರ್‌ ಪಾಂಡೆ ಹಾಗೂ ಎಡಿಜಿಪಿ ಹರಿಶೇಖರನ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.