2022 ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ನೇಮಕಾತಿ ಬ್ಯಾಂಕ್ ಆಫ್ ಬರೋಡಾ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 26 ಕೊನೆಯ ದಿನಾಂಕವಾಗಿದೆ. ಬೆಂಗಳೂರು (ಏ.11):ಬ್ಯಾಂಕ್ ಆಫ್ ಬರೋಡಾ ( ) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 26 ಕೃಷಿ ಮಾರುಕಟ್ಟೆ ಅಧಿಕಾರಿ ( ) ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 26 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ ://../ ಗೆ ಭೇಟಿ ನೀಡಬಹುದು. ಒಟ್ಟು 26 ಹುದ್ದೆಗಳ ಮಾಹಿತಿ ಇಂತಿದೆ:ಪಾಟ್ನಾ: 04ಚೆನ್ನೈ: 03ಮಂಗಳೂರು: 02ನವದೆಹಲಿ: 01ರಾಜ್‌ಕೋಟ್: 02ಚಂಡೀಗಢ: 04ಎರ್ನಾಕುಲಂ: 02ಕೋಲ್ಕತ್ತಾ: 03ಮೀರತ್: 03ಅಹಮದಾಬಾದ್: 02 ಶೈಕ್ಷಣಿಕ ವಿದ್ಯಾರ್ಹತೆ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಕೃಷಿ/ತೋಟಗಾರಿಕೆ/ಪಶುಸಂಗೋಪನೆ/ಪಶುವೈದ್ಯಕೀಯ ವಿಜ್ಞಾನ/ ಡೈರಿ ವಿಜ್ಞಾನ/ ಮೀನುಗಾರಿಕೆ ವಿಜ್ಞಾನ/ ಮೀನುಗಾರಿಕೆ/ ಕೃಷಿಯಲ್ಲಿ ಪದವಿ. ಮಾರ್ಕೆಟಿಂಗ್ ಮತ್ತು ಸಹಕಾರ/ ಸಹಕಾರ ಮತ್ತು ಬ್ಯಾಂಕಿಂಗ್/ ಕೃಷಿ-ಅರಣ್ಯ/ಅರಣ್ಯ/ಕೃಷಿ ಜೈವಿಕ ತಂತ್ರಜ್ಞಾನ/ ಆಹಾರ ವಿಜ್ಞಾನ/ ಕೃಷಿ ವ್ಯವಹಾರ ನಿರ್ವಹಣೆ/ಆಹಾರ ತಂತ್ರಜ್ಞಾನ/ ಡೈರಿ ತಂತ್ರಜ್ಞಾನ/ ಕೃಷಿ ಇಂಜಿನಿಯರಿಂಗ್/ ರೇಷ್ಮೆ ಮತ್ತು 02 ವರ್ಷಗಳ ಪೂರ್ಣ ಸಮಯದ ಸ್ನಾತಕೋತ್ತರ ಪದವಿ ಅಥವಾ / ನಲ್ಲಿ ಡಿಪ್ಲೊಮಾ ಮಾಡಿರಬೇಕು. ಜೊತೆಗೆ 3 ವರ್ಷಗಳ ಅನುಭವ ಹೊಂದಿರಬೇಕು. ಈ ಕಂಪನಿಯಲ್ಲಿ ಬೋನಸ್ ಬೇಕಾದರೆ ದೇಹದ ತೂಕ ಇಳಿಸಿಕೊಳ್ಳಬೇಕು! ವಯೋಮಿತಿ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 25 ರಿಂದ 40 ವರ್ಷದ ಒಳಗಿರಬೇಕು. ಅರ್ಜಿ ಶುಲ್ಕ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ// ಅಭ್ಯರ್ಥಿಗಳು ₹600 ಮತ್ತು // ಮತ್ತು ಮಹಿಳಾ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಬ್ಯಾಂಕ್ ಆಫ್ ಬರೋಡಾದ ಖಾಲಿ ಇರುವ ಕೃಷಿ ಮಾರುಕಟ್ಟೆ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ₹15 ಲಕ್ಷದಿಂದ ₹18ದವರೆಗೆ ವೇತನ ದೊರೆಯಲಿದೆ. 2022: ಅಂಗನವಾಡಿ ಕೇಂದ್ರದ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ 26 ಬ್ರ್ಯಾಂಚ್‌ಗಳಲ್ಲಿ 159 ಹುದ್ದೆಗಳ ಭರ್ತಿಗೆ ನೇಮಕಾತಿ:ಬ್ಯಾಂಕ್ ಆಫ್ ಬರೋಡಾ ( ) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ದೇಶದಾದ್ಯಂತ ಇರುವ 26 ಬ್ರ್ಯಾಂಚ್‌ಗಳಲ್ಲಿ ಅಗತ್ಯ ಶಾಖೆಯ ಸ್ವೀಕೃತಿ ವ್ಯವಸ್ಥಾಪಕ ( ) ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 159 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 14 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ ://../ ಗೆ ಭೇಟಿ ನೀಡಬಹುದು.