2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಎಸ್‌ಬಿಐ ನೇಮಕಾತಿ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಖಾಲಿ ಇರುವ 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬೆಂಗಳೂರು(ಮಾ.10):ಭಾರತೀಯ ಸ್ಟೇಟ್ ಬ್ಯಾಂಕ್ ( ) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ( ) ಹುದ್ದೆಗಳು ಖಾಲಿ ಇದ್ದು, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು .. ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಒಟ್ಟು 4 ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳ ಮಾಹಿತಿ ಇಂತಿದೆ:ಮುಖ್ಯ ಮಾಹಿತಿ ಅಧಿಕಾರಿ( ​) - 1 ಹುದ್ದೆಮುಖ್ಯ ತಂತ್ರಜ್ಞಾನ ಅಧಿಕಾರಿ ( ) - 1 ಹುದ್ದೆಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ ( ) - 1 ಹುದ್ದೆಉಪ ಮುಖ್ಯ ತಂತ್ರಜ್ಞಾನ ಅಧಿಕಾರಿ ( ) - 1 ಹುದ್ದೆ ಶೈಕ್ಷಣಿಕ ವಿದ್ಯಾರ್ಹತೆ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಯಾವುದೇ ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು. ಉಪ/ಮುಖ್ಯ ಮಾಹಿತಿ ಅಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು. ಆಗಿದ್ದರೆ ಆದ್ಯತೆ ಇದೆ. ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಯು ಸಾಫ್ಟ್‌ವೇರ್ ಎಂಜಿನಿಯರಿಂಗ್ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾಡಿರಬೇಕು. ಆಗಿದ್ದರೆ ಆದ್ಯತೆ ಇದೆ. 2022: ರಾಜ್ಯ ಹೈಕೋರ್ಟ್ ನಲ್ಲಿ ಸ್ಟೆನೋಗ್ರಾಫರ್ ಹುದ್ದೆಗೆ ನೇಮಕಾತಿ ಅರ್ಜಿ ಶುಲ್ಕ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ/ಒಬಿಸಿ/ ಅಭ್ಯರ್ಥಿಗಳಿಗೆ 750 ರೂ. ಅರ್ಜಿ ಶುಲ್ಕ ಮತ್ತು // ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ವಯೋಮಿತಿ :ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಹುದ್ದೆಗೆ ಅನುಸಾರವಾಗಿ ವಿಂಗಡಿಸಲಾಗಿದೆ. ಉಪ/ಮುಖ್ಯ ಮಾಹಿತಿ ಅಧಿಕಾರಿ ಹುದ್ದೆಗೆ ಗರಿಷ್ಠ 55 ವರ್ಷ ನಿಗದಿಯಾಗಿದೆ. ಉಪ/ಮುಖ್ಯ ತಂತ್ರಜ್ಞಾನ ಅಧಿಕಾರಿ ಹುದ್ದೆಗಳಿಗೆ ಗರಿಷ್ಠ 45 ವರ್ಷ ನಿಗದಿಯಾಗಿದೆ. ಆಯ್ಕೆ ಪ್ರಕ್ರಿಯೆ:ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 2022: ಕೋಲಾರ ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ