2022 : ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ಖಾಲಿ ಇರುವ 100 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಮುಂದಾಗಿದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​​ 24 ಕೊನೆಯ ದಿನವಾಗಿದೆ. ಬೆಂಗಳೂರು(ಮಾ.5):ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ( ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 100 ಸಹಾಯಕ ವ್ಯವಸ್ಥಾಪಕ ( ) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​​ 24 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಬ್ಯಾಂಕ್ ನ ಅಧಿಕೃತ ವೆಬ್‌ತಾಣ .. ಗೆ ಭೇಟಿ ನೀಡಬಹುದು. ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ 100 ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ವರ್ಗಾನುಸಾರ ವಿಂಗಡಣೆ ಮಾಡಲಾಗಿದ್ದು ಮಾಹಿತಿ ಇಂತಿದೆ.-16ST-7OBC-24EWS-10ಸಾಮಾನ್ಯ-43HI-1OC-1VI-2MD/-1 ಶೈಕ್ಷಣಿಕ ವಿದ್ಯಾರ್ಹತೆ:ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಾನೂನು , ಇಂಜಿನಿಯರಿಂಗ್, ವಾಣಿಜ್ಯ, ಅರ್ಥಶಾಸ್ತ್ರದಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪಡೆದಿರಬೇಕು. ಮಾತ್ರವಲ್ಲ ಶೇ.60ರಷ್ಟು ಅಂಕಗಳನ್ನು ಪಡೆದಿರಬೇಕು. / ಅಭ್ಯರ್ಥಿಗಳು ಶೇ.55 ಅಂಕಗಳನ್ನು ಪಡೆದಿರಬೇಕು. ವಯೋಮಿತಿ:ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 21 ರಿಂದ 28 ವರ್ಷದ ಒಳಗಿರಬೇಕು. ಅರ್ಜಿ ಶುಲ್ಕ:ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ // ಅಭ್ಯರ್ಥಿಗಳಿಗೆ 175 ರೂ ಅರ್ಜಿ ಶುಲ್ಕ ಮತ್ತು ಇತರ ಎಲ್ಲಾ ವರ್ಗದವರು 1100 ರೂ ಅರ್ಜಿ ಶುಲ್ಕ ಪಾವತಿಸಬೇಕು. ಆಯ್ಕೆ ಪ್ರಕ್ರಿಯೆ:ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ:ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 70,000 ರೂ ವೇತನ ನೀಡಲಾಗುತ್ತದೆ. ಉದ್ಯೋಗದ ಸ್ಥಳ:ಭಾರತದ ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಲ್ಲಿ ಖಾಲಿ ಇರುವ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ.