ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ: ಪ್ರವೇಶ ಪತ್ರ ಲಭ್ಯ, ವಸ್ತ್ರಸಂಹಿತೆ ಕಡ್ಡಾಯ * ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ* ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ನಿಗದಿ* ಮಾರ್ಚ್ 12ರಿಂದ 16ರವರೆಗೆ ನಡೆಯಲಿರುವ ಪರೀಕ್ಷೆಗಳು ಬೆಂಗಳೂರು, (ಫೆ.26):ಕರ್ನಾಟಕದಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ( ) ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಗತ್ಯವಿರುವ ಪ್ರವೇಶ ಪತ್ರವನ್ನು ( ) ಫೆ.28ರಿಂದ ://... ಜಾಲತಾಣದಲ್ಲಿ ಡೌನ್-ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ. ಜತೆಗೆ, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನೂ ನಿಗದಿಪಡಿಸಿದ್ದು, ನಿಷೇಧಿತ ವಸ್ತುಗಳ ಪಟ್ಟಿಯನ್ನೂ ತಿಳಿಸಲಾಗಿದೆ. ಈ ಪರೀಕ್ಷೆಯು ಮಾರ್ಚ್ 12ರಿಂದ 16ರವರೆಗೆ ನಡೆಯಲಿದೆ. 2022: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕ ಪ್ರಕಟ ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ. ಆದರೆ, ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು (ಮೊಬೈಲ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರ), ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು (ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ, ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್, ಟೋಪಿ, ಕ್ಯಾಮರಾ, ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಿಗದಿತ ವಸ್ತ್ರ ಸಂಹಿತೆ ಕಡ್ಡಾಯಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೋವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನೆಲೆಯಲ್ಲಿ ಅರೆಪಾರದರ್ಶಕ ಸರ್ಜಿಕಲ್ ಮಾಸ್ಕ್ (ಎನ್-95 ಮತ್ತು ಇತರ ಬಗೆಯ ಮಾಸ್ಕ್ ನಿಷಿದ್ಧ) ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆಯೇ, ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ. ಪುರುಷರಾಗಲಿ, ಮಹಿಳೆಯರಾಗಲಿ ತುಂಬುದೋಳಿನ ಉಡುಪು, ಶೂ, ಆಭರಣ (ಪದಕ, ಮೂಗುಬೊಟ್ಟು, ಕಿವಿಯೋಲೆ, ನೆಕ್ಲೇಸ್, ಬ್ರೇಸ್ಲೆಟ್) ಮತ್ತು ಆಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳಿಗೆ ಯಾವುದೇ ಬ್ರ್ಯಾಂಡ್ ನ ಹೆಸರಿಲ್ಲದ ಸಾದಾ ಬಾಟಲಿಯಲ್ಲಿ ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ. ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ(6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ ಕಲ್ಪಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು-2022 ಅನ್ನು ಪ್ರಕಟಿಸಿದ್ದ ಕರಡು ಅಧಿಸೂಚನೆಗಳಿಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಪರಿಗಣಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಎಸ್ ಶಿವಕುಮಾರ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾಾರೆ. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಇತರೆ ಹಿಂದುಳಿದ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ 47 ವರ್ಷದವರಿಗೆ, ಹಿಂದುಳಿದ ವರ್ಗದ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 45 ವರ್ಷ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 42 ವರ್ಷದವರೆಗೂ ಅವಕಾಶ ನೀಡಿದೆ. ಪ್ರತಿ ಪ್ರವರ್ಗದಲ್ಲಿ ಶೇ.1ರಷ್ಟು ಹುದ್ದೆಗಳನ್ನು ತೃತೀಯ ಲಿಂಗಿಗಳಿಂದ ಭರ್ತಿಗೆ ಅವಕಾಶ ನೀಡಿದೆ.