2022: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 27 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನವಾಗಿದೆ. ಬೆಂಗಳೂರು(ಫೆ.25):ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ( ) ಅಗತ್ಯವಿರುವ ಜವಾನ ( ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 27 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನವಾಗಿದೆ. ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಮಾರ್ಚ್ 25 ಆಗಿದೆ. ಹೆಚ್ಚಿನ ಮಾಹಿತಿಗೆ ://.../- ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ಅರ್ಹತೆ :ಶಿವಮೊಗ್ಗ () ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ವಯೋಮಿತಿ:ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ. 2022: ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ ವೇತನ:ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 17,000 ರಿಂದ ರೂ. 28,950 ವೇತನ ಪಡೆಯಲಿದ್ದಾರೆ. ಆಯ್ಕೆ ವಿಧಾನ:ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ. 2022: ಖಾಲಿ ಇರುವ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಕೆ ವಿಧಾನ :ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಶುಲ್ಕ:ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ರೂ. 200, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಶುಲ್ಕ ಪಾವತಿ ವಿಧಾನ:ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.