2022: ಖಾಲಿ ಇರುವ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಇಂಡಿಯನ್‌ ಬ್ಯಾಂಕ್‌ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಂದಾಗಿದ್ದು, 202 ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಮಾರ್ಚ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಬೆಂಗಳೂರು (ಫೆ.25):ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ ( ), 2022ನೇ ಸಾಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 202 ಭದ್ರತಾ ಸಿಬ್ಬಂದಿ ( )​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾರ್ಚ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​ . ಗೆ ಭೇಟಿ ನೀಡಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಇಂಡಿಯನ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಭದ್ರತಾ ಸಿಬ್ಬಂದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 10 ನೇ ತರಗತಿ ಪಾಸಾಗಿರಬೇಕು. ಅಥವಾ ಕಡ್ಡಾಯವಾಗಿ ಮಾಜಿ ಸೈನಿಕರಾಗಿರಬೇಕು. ಜೊತೆಗೆ ಅಲ್ಲದೆ, ಅಭ್ಯರ್ಥಿಯು ಸ್ಥಳೀಯ ಆಡುಭಾಷೆಯಲ್ಲಿ ಮಾತನಾಡಲು, ಓದಲು ಮತ್ತು ಬರೆಯಲು ಸಮರ್ಥರಾಗಿರಬೇಕು. ವಯೋಮಿತಿ:ಇಂಡಿಯನ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 26 ವರ್ಷವಾಗಿರಬೇಕು ಮತ್ತು ಗರಿಷ್ಠ 29 ವರ್ಷವಾಗಿರಬೇಕು. 2022: ಮೈಸೂರು ಜಿಲ್ಲೆಯಾದ್ಯಂತ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಆಯ್ಕೆ ಪ್ರಕ್ರಿಯೆ:ಇಂಡಿಯನ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ , ಆನ್‌ಲೈನ್ ಪರೀಕ್ಷೆ , ಭಾಷಾ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಇಂಡಿಯನ್‌ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 14500 ರೂ ನಿಂದ 28,000 ರೂ ವರೆಗೆ ವೇತನ ದೊರೆಯಲಿದೆ. 2022: ಮೈಸೂರಿನಲ್ಲಿರುವ ವಾಕ್‌ ಮತ್ತು ಶ್ರವಣ ಸಂಸ್ಥೆಯಲ್ಲಿ ಉದ್ಯೋಗವಕಾಶ 15 ಸಾವಿರ ಶಿಕ್ಷಕರ ನೇಮಕಕ್ಕೆ ಅಧಿಸೂಚನೆ, ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೂ ಮೀಸಲಾತಿ!:ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ(6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ ಕಲ್ಪಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) (ವಿಶೇಷ) ನಿಯಮಗಳು-2022 ಅನ್ನು ಪ್ರಕಟಿಸಿದ್ದ ಕರಡು ಅಧಿಸೂಚನೆಗಳಿಗೆ ಸಲ್ಲಿಕೆಯಾಗಿದ್ದ ಆಕ್ಷೇಪಣೆಗಳನ್ನು ಪರಿಗಣಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಎಸ್ ಶಿವಕುಮಾರ್ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಪರಿಶಿಷ್ಟ ಜಾತಿ, ಪಂಗಡ, ಪ್ರವರ್ಗ-1 ಮತ್ತು ಇತರೆ ಹಿಂದುಳಿದ ವರ್ಗದ ಅಂಗವಿಕಲ ಅಭ್ಯರ್ಥಿಗಳಿಗೆ 47 ವರ್ಷದವರಿಗೆ, ಹಿಂದುಳಿದ ವರ್ಗದ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 45 ವರ್ಷ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 42 ವರ್ಷದವರೆಗೂ ಅವಕಾಶ ನೀಡಿದೆ. ಪ್ರತಿ ಪ್ರವರ್ಗದಲ್ಲಿ ಶೇ.1ರಷ್ಟು ಹುದ್ದೆಗಳನ್ನು ತೃತೀಯ ಲಿಂಗಿಗಳಿಂದ ಭರ್ತಿಗೆ ಅವಕಾಶ ನೀಡಿದೆ. ಮಾನದಂಡಗಳು:ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ(ಸಿಇಟಿ)ಯಲ್ಲಿ ಶೇ.50ರಷ್ಟು ಅಂಕ, ಟಿಇಟಿ ಯಲ್ಲಿ ಶೇ.20, ಪದವಿಯಲ್ಲಿ ಶೇ.20ರಷ್ಟು ಅಂಕ ಮತ್ತು ಬಿ.ಇಡಿ ಯಲ್ಲಿ ಶೇ.10ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ನಾಲ್ಕು ವರ್ಷಗಳ ಬಿ.ಇಡಿ ಪಡೆದಿದ್ದರೆ, ಸ್ಪರ್ಧಾತ್ಮಕ ಪರೀಕ್ಷೆ (ಸಿಇಟಿ) ಯಲ್ಲಿ ಶೇ.50ರಷ್ಟು ಅಂಕ, ಟಿಇಟಿ ಯಲ್ಲಿ ಶೇ.20 ಮತ್ತು ಬಿ.ಇಡಿ ಯಲ್ಲಿ ಶೇ.30ರಷ್ಟು ಅಂಕಗಳನ್ನು ಪರಿಗಣಿಸಲಾಗುತ್ತದೆ. ಅಂಕಗಳ ಪರಿಗಣನೆ ವೇಳೆ ಇಬ್ಬರಿಗಿಂತ ಹೆಚ್ಚಿನ ವ್ಯಕ್ತಿಗಳ ಒಂದೇ ಪ್ರಮಾಣದ ಅಂಕಗಳನ್ನು ಪಡೆದರೆ ಅಭ್ಯರ್ಥಿಗಳ ವಯಸ್ಸಿನ ಆಧಾರದ ಮೇಲೆ, ಅಂದರೆ ಹಿರಿಯ ವಯಸ್ಸಿನವರನ್ನು ಆಯ್ಕೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.