2022: ಇಂಜಿನಿಯರಿಂಗ್ ಪದವೀಧರರನ್ನು ಆಹ್ವಾನಿಸಿದ ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ಖಾಲಿ ಇರುವ ವಿವಿಧ ಇಂಜಿನಿಯರ್ ಹುದ್ದೆಗಳು ಸೇರಿ ಒಟ್ಟು 389 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಾರ್ಚ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಫೆ.28):ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ( )​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಸೀನಿಯರ್ ವರ್ಕ್ಸ್ ಇಂಜಿನಿಯರ್, ಭೂವಿಜ್ಞಾನಿ ಸೇರಿ ಒಟ್ಟು 389 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 12 ,2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್‌ ತಾಣ ://.. ಗೆ ಭೇಟಿ ನೀಡಲು ಕೋರಲಾಗಿದೆ. ಒಟ್ಟು 389 ಹುದ್ದೆಗಳ ಮಾಹಿತಿ:ಸೀನಿಯರ್ ವರ್ಕ್ಸ್ ಇಂಜಿನಿಯರ್/ಸಿವಿಲ್ ( / )-23 ಹುದ್ದೆಗಳುವರ್ಕ್ಸ್ ಇಂಜಿನಿಯರ್/ಸಿವಿಲ್ ( / )- 163 ಹುದ್ದೆಗಳುವರ್ಕ್ಸ್ ಇಂಜಿನಿಯರ್/ಸಿವಿಲ್ ( / )- 163 ಹುದ್ದೆಗಳುಸೈಟ್ ಸೂಪರ್‌ವೈಸರ್/ಸಿವಿಲ್ ( / )-01 ಹುದ್ದೆಗಳುವರ್ಕ್ಸ್ ಇಂಜಿನಿಯರ್/ಎಲೆಕ್ಟ್ರಿಕಲ್ ( / ) -09 ಹುದ್ದೆಗಳುಸೀನಿಯರ್ ವರ್ಕ್ಸ್ ಇಂಜಿನಿಯರ್/ಎಸ್ ಟಿ ( / ) -08 ಹುದ್ದೆಗಳುವರ್ಕ್ಸ್ ಇಂಜಿನಿಯರ್/ಎಸ್&ಟಿ ( / & ) -21 ಹುದ್ದೆಗಳುಭೂವಿಜ್ಞಾನಿ () - 01 ಹುದ್ದೆ 2022: ನೌಕಾದಳದ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ ಶೈಕ್ಷಣಿಕ ವಿದ್ಯಾರ್ಹತೆ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿದ ಹುದ್ದೆಗನುಸಾರ ವಿದ್ಯಾರ್ಹತೆ ಪಡೆದಿರಬೇಕು.ವಿವಿಧ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್, ಎಲೆಕ್ಟ್ರಾನಿಕ್, ಎಲೆಕ್ಟ್ರಿಕಲ್, ಎಂಜಿನಿಯರಿಂಗ್​ ನಲ್ಲಿ ಶೇ.60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.ಭೂ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಭೂ ವಿಜ್ಞಾನ ವಿಷಯದಲ್ಲಿ ./ . ಅಥವಾ ಭೂ ವಿಜ್ಞಾನ ಎಂಜಿನಿಯರಿಂಗ್​ ಮಾಡಿರಬೇಕು. ಮಾತ್ರವಲ್ಲ ಶೇ.60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಯೋಮಿತಿ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ಮಿತಿ ನಿಗದಿಪಡಿಸಲಾಗಿದೆ. ಅವರಿಗೆ ಗರಿಷ್ಠ 38 ವರ್ಷ, / ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನೀಡಲಾಗಿದೆ. ಅರ್ಜಿ ಶುಲ್ಕ: ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ ವಿವರ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಸಾರ ವೇತನ ₹25000 ದಿಂದ ₹40,000 ವರೆಗೆ ಪಡೆಯಲಿದ್ದಾರೆ. ಅರ್ಜಿ ಸಲ್ಲಿಸುವ ವಿಧಾನ:ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ ://../.?= ಗೆ ಭೇಟಿ ನೀಡಿ. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಮಾರ್ಚ್ 12 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.