2022: ನ್ಯಾಯವಾದಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ನ್ಯಾಯವಾದಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 25 ಕೊನೆಯ ದಿನವಾಗಿದೆ. ಬೆಂಗಳೂರು(ಫೆ.11):ಮಂಗಳೂರು ವಿಶ್ವವಿದ್ಯಾಲಯದಲ್ಲಿ ( ) ಖಾಲಿ ಇರುವ ನ್ಯಾಯವಾದಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತರು ಫೆಬ್ರವರಿ 25ರೊಳಗೆ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಸಕ್ತರು .. ಗೆ ಭೇಟಿ ನೀಡಬಹುದು. ನೋಟಿಫಿಕೇಶನ್ ಬಗ್ಗೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ://..////--------. ಶೈಕ್ಷಣಿಕ ವಿದ್ಯಾರ್ಹತೆ:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ನ್ಯಾಯವಾದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ವೃತ್ತಿ ಅನುಭವವನ್ನು ಹೊಂದಿರಬೇಕು. 2022: ಭಾಭಾ ಪರಮಾಣು ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಇತರ ಅರ್ಹತೆಗಳು:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ನ್ಯಾಯವಾದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನ ಮಾನದಂಡಗಳನ್ನು ಹೊಂದಿರಬೇಕು-ಬಾರ್ ಕೌನ್ಸಿಲ್ ಆಫ್ ಇಂಡಿಯಾ / ಸ್ಟೇಟ್ ಬಾರ್ ಕೌನ್ಸಿಲ್‌ಗಳಲ್ಲಿ ನೋಂದಣಿ ಹೊಂದಿರಬೇಕು.-ಕನಿಷ್ಠ ವೃತ್ತಿಪರ/ಕೋರ್ಟ್ ಅಭ್ಯಾಸ ಅನುಭವವನ್ನು ಹೊಂದಿರಬೇಕು-ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಅಡ್ವೊಕೇಟ್ಸ್ ಆನ್ ರೆಕಾರ್ಡ್ ()/ ಹಿರಿಯ ವಕೀಲರು / ಎಂಪನೆಲ್‌ಮೆಂಟ್‌ಗಾಗಿ ವಕೀಲರಾಗಿ ಕನಿಷ್ಠ ಹತ್ತು ವರ್ಷಗಳ ಅನುಭವ ಇರಬೇಕು.-ಕರ್ನಾಟಕ ಹೈಕೋರ್ಟ್‌ನಲ್ಲಿ ಎಂಪನೆಲ್‌ಮೆಂಟ್‌ಗಾಗಿ ವಕೀಲಾತಿ ಅಭ್ಯಾಸ ಮಾಡಿ ಕನಿಷ್ಠ ಮೂರು ವರ್ಷಗಳ ಅನುಭವ ಇರಬೇಕು. 2022: ಬರೋಬ್ಬರಿ 756 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ವಯೋಮಿತಿ:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ನ್ಯಾಯವಾದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಯಮಾನುಸಾರ ವಯೋಮಿತಿ ಹೊಂದಿರಬೇಕು. ಆಯ್ಕೆ ಪ್ರಕ್ರಿಯೆ:ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಧಿಕಾರಾವಧಿ ಮತ್ತು ನಿಯಮಗಳು:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ನ್ಯಾಯವಾದಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಐದು ವರ್ಷಗಳ ಅವಧಿ ವರೆಗೆ ನೇಮಕ ಮಾಡಲಾಗುತ್ತದೆ. ಮಾತ್ರವಲ್ಲ ಅಭ್ಯರ್ಥಿಯ ಸೇವಾವಧಿ ಇಷ್ಟವಾದರೆ, ದೋಷಪೂರಿತವಾಗಿ ಇರದಿದ್ದರೆ . ಸೇವಾ ಅವಧಿಯನ್ನು ವಿಶ್ವವಿದ್ಯಾಲಯ ನವೀಕರಿಸಬಹುದು. ವಕೀಲ ಹುದ್ದೆಗೆ ಆಯ್ಕೆಯಾದವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮೀಸಲಾದ ನೋಟಿಸ್ ಸ್ವೀಕರಿಸಬೇಕು ಮತ್ತು ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಬೇಕು ಮತ್ತು ನ್ಯಾಯಾಲಯಗಳಲ್ಲಿ ಇರುವ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿ ದಾವೆಗಳಿಗೆ ಹಾಜರಾಗಬೇಕು. : 2020ರ ಲಾಕ್‌ಡೌನ್ ಮೊದಲ 3 ತಿಂಗಳಲ್ಲಿ ಉದ್ಯೋಗ ಕಳೆದುಕೊಂಡವರು 23 ಲಕ್ಷ ಮಂದಿ! ಅರ್ಜಿ ಸಲ್ಲಿಸುವ ವಿಧಾನ:ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ನ್ಯಾಯವಾದಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ://../ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಫೆಬ್ರವರಿ 25,2022ರೊಳಗೆ ಅರ್ಜಿಯನ್ನು ತಲುಪಿಸಬೇಕು. ಅಭ್ಯರ್ಥಿಗಳು ಅರ್ಜಿಯನ್ನು @., dhnaik63@., @. ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು. ಕಚೇರಿ ವಿಳಾಸ : - 574199Karnataka 2022: ಮ್ಯಾನೇಜ್​ಮೆಂಟ್ ಟ್ರೇನಿ ಸೇರಿ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ