2022: ಸ್ಪೆಷಲಿಸ್ಟ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ತಜ್ಞ ಅಧಿಕಾರಿಗಳು ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗದಲ್ಲಿ ಒಟ್ಟು 19 ಹುದ್ದೆಗಳು ಖಾಲಿ ಇದ್ದು, ಮಾರ್ಚ್ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಫೆ.11):ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ( ) ಖಾಲಿ ಇರುವ ತಜ್ಞ ಅಧಿಕಾರಿಗಳು ( ) ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ತಜ್ಞ ಅಧಿಕಾರಿಗಳು ಹುದ್ದೆಯ ವಿಭಾಗದಲ್ಲಿ ಹಿರಿಯ ವ್ಯವಸ್ಥಾಪಕ ( ), ಮಾಹಿತಿ ತಂತ್ರಜ್ಞಾನ ಮುಖ್ಯಸ್ಥ ( ) ಸೇರಿ ಒಟ್ಟು 19 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ()​ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 2 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಅಧಿಕೃತ ವೆಬ್​ಸೈಟ್​ ... ಗೆ ಭೇಟಿ ನೀಡಬಹುದು. ಒಟ್ಟು 19 ಹುದ್ದೆಗಳ ವರ್ಗಾನುಸಾರ ಮಾಹಿತಿ ಇಂತಿದೆ:-2ST-1OBC-5EWS-1ಸಾಮಾನ್ಯ-10 ಶೈಕ್ಷಣಿಕ ವಿದ್ಯಾರ್ಹತೆ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ, ಎಂಎಸ್ಸಿ, ಎಂಸಿಎ, ಇಸಿಇ, ಐಟಿ, ಕಂಪ್ಯೂಟರ್‌ ಸೈನ್ಸ್‌, ಓದಿರಬೇಕು. 2022: ಮ್ಯಾನೇಜ್​ಮೆಂಟ್ ಟ್ರೇನಿ ಸೇರಿ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಅರ್ಜಿ ಶುಲ್ಕ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ // ಅಭ್ಯರ್ಥಿಗಳು 175 ರೂ. ಮತ್ತು ಉಳಿದ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕ ಪಾವತಿಸಬೇಕು. ವಯೋಮಿತಿ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ. ಆಯ್ಕೆ ಪ್ರಕ್ರಿಯೆ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ವೇತನ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 63,840 ರಿಂದ 78,230 ವೇತನ ನೀಡಲಾಗುತ್ತದೆ. ಉದ್ಯೋಗದ ಸ್ಥಳ:ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ಮಾಡಲು ತಯಾರಿರಬೇಕು. 2022: 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಡಿಎ:ಬೆಂಗಳೂರು ಅಭಿವೃಧ್ಧಿ ಪ್ರಾಧಿಕಾರವು ( - ) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಕಾನೂನು ಅಧಿಕಾರಿ ( ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ ://../ ಗೆ ಭೇಟಿ ನೀಡಿ. ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಮಾನದಂಡಗಳು ಇಂತಿದೆ.-ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಜಿಲ್ಲಾ ನ್ಯಾಧೀಶರಾಗಿರಬೇಕು.-ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆ ಇಲ್ಲದ ನಿವೃತ್ತ ಅಧಿಕಾರಿಗಳಾಗಿರಬೇಕು. ವೇತನ:ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,00,000 ರೂ ವೇತನ ದೊರೆಯಲಿದೆ. ಅರ್ಜಿಗಾಗಿ ಮತ್ತು ಇತರೆ ಮಾಹಿತಿಗೆ ಭೇಟಿ ನೀಡಬೇಕಾದ ವಿಳಾಸ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್‌ ಪಶ್ಚಿಮ, ಬೆಂಗಳೂರು-560020. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಧಾರ್‌ ಕಾರ್ಡ್‌, ಕಾರ್ಯಾನುಭವ, ನಿವೃತ್ತಿ ಪ್ರಮಾಣ ಪತ್ರ, ಇತರೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು.