2022: ಮ್ಯಾನೇಜ್​ಮೆಂಟ್ ಟ್ರೇನಿ ಸೇರಿ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. ಕಂಪನಿಯು ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಸೇರಿ ಒಟ್ಟು 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮಾರ್ಚ್ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರು(ಫೆ.10):ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. ( -) ಕಂಪನಿಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜ್​ಮೆಂಟ್ ಟ್ರೇನಿ ( ) ಮತ್ತು ಡಿಸೈನ್ ಟ್ರೇನಿ ( ) ಸೇರಿ ಒಟ್ಟು 85 ಹುದ್ದೆಗಳು ಖಾಲಿ ಇದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 2ರೊಳಗೆ ಅರ್ಜಿ ಸಲ್ಲಿಸಬೇಕು. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ ://-../ ಭೇಟಿ ನೀಡಬಹುದು. ಒಟ್ಟು 85 ಹುದ್ದೆಗಳ ಮಾಹಿತಿ ವಿವರ:ಮ್ಯಾನೇಜ್​​ಮೆಂಟ್ ಟ್ರೇನಿ-47ಡಿಸೈನ್ ಟ್ರೇನಿ-38 ಶೈಕ್ಷಣಿಕ ವಿದ್ಯಾರ್ಹತೆ:ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದಿರಬೇಕು. ವಯೋಮಿತಿ:ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಾನ 28 ವರ್ಷ. ವರ್ಗಾನುಸಾರ ವಯೋಮಿತಿಯನ್ನು ಸಡಿಲಿಕೆಯನ್ನು ನೀಡಲಾಗಿರುತ್ತದೆ. /STಗೆ 5 ವರ್ಷ, ಒಬಿಸಿಗೆ 3 ವರ್ಷ ಮತ್ತು 10 ವರ್ಷಗಳ ಸಡಿಲಿಕೆ ನೀಡಲಾಗಿದೆ. 2022: 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ ವೇತನ ವಿವರ:ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ಆಯ್ಕೆ ಪ್ರಕ್ರಿಯೆ:ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ನಮೂದಿಸಲಾಗಿದೆ. ಅರ್ಜಿ ಶುಲ್ಕ:ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. : ಮಾ.12ಕ್ಕೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸ್ಪರ್ಧಾತ್ಮಕ ಪರೀಕ್ಷೆ ಅರ್ಜಿ ಸಲ್ಲಿಕೆ :ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ://.-../ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್​​ 2,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಉದ್ಯೋಗ ಸ್ಥಳ:ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕರ್ತವ್ಯ ನಿರ್ವಹಿಸಲು ತಯಾರಿರಬೇಕು. 2022: ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಡಿಎ