2022: ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರಾಮುವಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಖಾಲಿ ಇರುವ ವಿವಿಧ ಫ್ಯಾಕಲ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. 32 ಹುದ್ದೆಗಳು ಖಾಲಿ ಇದೆ. ಬೆಂಗಳೂರು(ಜ.22):ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ( - ) ಖಾಲಿ ಇರುವ ವಿವಿಧ ಫ್ಯಾಕಲ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 32 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ://../ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು. ಆಯ್ಕೆ ಪ್ರಕ್ರಿಯೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ. 2022: ಜನರಲ್ ಸರ್ಜನ್ ಹುದ್ದೆಗಳಿಗೆ ಅರ್ಜಿ ಆಹ್ವಾನ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಕ್ಕೆ ಅರ್ಜಿ ಆಹ್ವಾನ:ಸಕಾಲ ಮಿಷನ್‌ ಮತ್ತು ಕರ್ನಾಟಕ ಸರ್ಕಾರದ ಇ-ಆಡಳಿತ ಉಪಕ್ರಮಗಳನ್ನು ನಿರ್ವಹಿಸಲು ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ( ) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಫೆಬ್ರವರಿ 1 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ://..../ ಗೆ ಭೇಟಿ ನೀಡಬಹುದು. ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿದವರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಶೈಕ್ಷಣಿಕ ವಿದ್ಯಾಭ್ಯಾಸ:ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ ಇನ್ ಕಂಪ್ಯೂಟರ್ ಸೈನ್ಸ್‌ (ಎಂಟೆಕ್ ಐಚ್ಛಿಕ) ನಲ್ಲಿ ಪಾಸಾಗಿರಬೇಕು. ವಯೋಮಿತಿ:ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ. 2022: ಪ್ರಸಾರ ಭಾರತಿಯಲ್ಲಿನ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ ಅನುಭವ ಮತ್ತು ಕೌಶಲ್ಯಗಳು:ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಪ್ರಾಜೆಕ್ಟ್‌ ಮ್ಯಾನೇಜ್ಮೆಂಟ್‌ ಟೂಲ್ಸ್‌ ಮತ್ತು ಪ್ರಾಜೆಕ್ಟ್‌ಗಳ ನಿರ್ವಹಣೆ ಬಗ್ಗೆ ಅನುಭವವಿರಬೇಕು. 5 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ವೇತನ ವಿವರ:ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,40,937 ರೂ ವೇತನ ದೊರೆಯಲಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01-02-2022.ಸಂದರ್ಶನ ನಡೆಯುವ ದಿನಾಂಕ 7-02-2022 ರ ಬೆಳಿಗ್ಗೆ 11-00 ಗಂಟೆಗೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ @.. ಗೆ ಇ-ಮೇಲ್‌ ಮೂಲಕ ಕಳುಹಿಸುವುದು. ಇತರೆ ಹೆಚ್ಚಿನ ಮಾಹಿತಿಗಳಿಗೆ ಸಂಪೂರ್ಣ ಅಧಿಸೂಚನೆಗೆ ವೆಬ್‌ಸೈಟ್‌ .... ಗೆ ಭೇಟಿ ನೀಡಬಹುದು.