2022: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಕ್ಕೆ ಅರ್ಜಿ ಆಹ್ವಾನ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸಕಾಲ ಮಿಷನ್‌ ನಲ್ಲಿ ಅಗತ್ಯ ಇರುವ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆ ದಿನ ಫೆಬ್ರವರಿ 1 ಆಗಿದೆ. ಬೆಂಗಳೂರು(ಜ.22):ಸಕಾಲ ಮಿಷನ್‌ ಮತ್ತು ಕರ್ನಾಟಕ ಸರ್ಕಾರದ ಇ-ಆಡಳಿತ ಉಪಕ್ರಮಗಳನ್ನು ನಿರ್ವಹಿಸಲು ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ( ) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಫೆಬ್ರವರಿ 1 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ://..../ ಗೆ ಭೇಟಿ ನೀಡಬಹುದು. ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿದವರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಶೈಕ್ಷಣಿಕ ವಿದ್ಯಾಭ್ಯಾಸ:ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ ಇನ್ ಕಂಪ್ಯೂಟರ್ ಸೈನ್ಸ್‌ (ಎಂಟೆಕ್ ಐಚ್ಛಿಕ) ನಲ್ಲಿ ಪಾಸಾಗಿರಬೇಕು. ವಯೋಮಿತಿ:ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ. 2022: ಬರೋಬ್ಬರಿ 1419 ಹುದ್ದೆಗಳಿಗೆ ಅರ್ಜಿ ಆಹ್ವಾನ ಅನುಭವ ಮತ್ತು ಕೌಶಲ್ಯಗಳು:ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಪ್ರಾಜೆಕ್ಟ್‌ ಮ್ಯಾನೇಜ್ಮೆಂಟ್‌ ಟೂಲ್ಸ್‌ ಮತ್ತು ಪ್ರಾಜೆಕ್ಟ್‌ಗಳ ನಿರ್ವಹಣೆ ಬಗ್ಗೆ ಅನುಭವವಿರಬೇಕು. 5 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ವೇತನ ವಿವರ:ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,40,937 ರೂ ವೇತನ ದೊರೆಯಲಿದೆ. ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01-02-2022.ಸಂದರ್ಶನ ನಡೆಯುವ ದಿನಾಂಕ 7-02-2022 ರ ಬೆಳಿಗ್ಗೆ 11-00 ಗಂಟೆಗೆ. ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ @.. ಗೆ ಇ-ಮೇಲ್‌ ಮೂಲಕ ಕಳುಹಿಸುವುದು. ಇತರೆ ಹೆಚ್ಚಿನ ಮಾಹಿತಿಗಳಿಗೆ ಸಂಪೂರ್ಣ ಅಧಿಸೂಚನೆಗೆ ವೆಬ್‌ಸೈಟ್‌ .... ಗೆ ಭೇಟಿ ನೀಡಬಹುದು. 2022: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ:ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ( ) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. 2 ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 25,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಆಸಕ್ತರು ://../.// ಗೆ ಭೇಟಿ ನೀಡಿ. ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ, ಪಿಹೆಚ್‌ಡಿ ಪಡೆದಿರಬೇಕು. ಅರ್ಜಿ ಸಲ್ಲಿಸಬೇಕಾದ ವಿಧಾನ:ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ://../.// ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 25,2022 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನ ನಡೆಯುವ ಸ್ಥಳ: & , , - 584104