2022: ಶಿವಮೊಗ್ಗದಲ್ಲಿ 88 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 7 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು(ಜ.13):ಶಿವಮೊಗ್ಗ ಜಿಲ್ಲೆಯ ( ) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ ( ) ಕಾರ್ಯ ನಿರ್ವಹಿಸುತ್ತಿರುವ 7 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ ( ) ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 20 ಅಂಗನವಾಡಿ ಕಾರ್ಯಕರ್ತೆ ( ) ಮತ್ತು 68 ಅಂಗನವಾಡಿ ಸಹಾಯಕಿ ( ) ಹುದ್ದೆಗಳು ಖಾಲಿ ಇದ್ದು, ಒಟ್ಟು 88 ಹುದ್ದೆಗಳು ಇದ್ದು, ಆಸಕ್ತರು ಜನವರಿ13 ರಿಂದ ಫೆಬ್ರವರಿ 13ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಶೈಕ್ಷಣಿಕ ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10ನೇ ತರಗತಿ (ಅಂಗನವಾಡಿ ಕಾರ್ಯಕರ್ತೆ), ಕನಿಷ್ಟ 4ನೇ ತರಗತಿ (ಅಂಗನವಾಡಿ ಸಹಾಯಕಿ) ಗರಿಷ್ಟ 9ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ವಿಧಾನ:ಆನ್​ಲೈನ್ () ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ ... ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. 2022: ಬೀದರ್‌ನಲ್ಲಿ 94 ಅಂಗನವಾಡಿ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ ವಯೋಮಿತಿ:ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷದೊಳಗಿನವರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯ ಆದ್ಯತೆ:ಅರ್ಜಿ ಸಲ್ಲಿದಬೇಕಾದ ಅಭ್ಯರ್ಥಿಗಳಿಗೆ ಈ ಕೆಳಕಂಡಂತೆ ಆದ್ಯತೆ ನೀಡಲಾಗಿದೆ. ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯವಾಗಿದೆ. ಆಸಿಡ್ ದಾಳಿಗೊಳಗಾದವರ ಆಯ್ಕೆಗೆ ಆದ್ಯತೆ:ಆಸಿಡ್ ದಾಳಿಗೆ ಒಳಗಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರ ಎಲ್ಲಾ ಸ್ವೀಕೃತ ಅರ್ಜಿಗಳನ್ನು ಪರಿಗಣಿಸದೆ ಮೊದಲ ಅದ್ಯತೆ ಮೇರೆಗೆ ನೇರವಾಗಿ ಅವರನ್ನೇ ಆಯ್ಕೆ ಮಾಡಲಾಗುತ್ತದೆ. ವಿಧವೆಯರ ಆದ್ಯತೆ:ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ ನೀಡಲಾಗುವುದು. ನಂತರ ಇತರೆ ವಿಧವೆಯರನ್ನು ಪರಿಗಣಿಸಲಾಗುವುದು. ಅರ್ಜಿ ಸಲ್ಲಿಸಿದ ನಂತರ ವಿಧವೆಯರಾದಲ್ಲಿ ಪರಿಗಣಿಸಲಾಗುವುದಿಲ್ಲ. ವಿಧವೆಯರು ತಾವು ಎಲ್ಲಿ ವಾಸವಾಗಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ವಿಧವೆಯರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು. 2022: ಪ್ಯಾರಾ ಮೆಡಿಕಲ್‌ನ ವಿವಿಧ ಹುದ್ದೆಗಳಿಗೆ ಆಗ್ನೇಯ ಮಧ್ಯ ರೈಲ್ವೆ ಸಂದರ್ಶನ ಅಂಗವಿಕಲ ಅಭ್ಯರ್ಥಿಗಳಿಗೆ ಆದ್ಯತೆ:ಅಂಗನವಾಡಿ ಕಾರ್ಯಕರ್ತೆಯು 3 ರಿಂದ 6 ವರ್ಷದ ಮಕ್ಕಳಿಗೆ ಆಟ ಮತ್ತು ಅಭಿನಯ ಗೀತೆಗಳ ಮೂಲಕ ಶಾಲಾ ಪೂರ್ವ ಶಿಕ್ಷಣವನ್ನು ನೀಡಲಾಗುತ್ತಿದ್ದು, ಚಟುವಟಿಕೆ ವೇಳೆಯಲ್ಲಿ ಮಕ್ಕಳನ್ನು ಹಿಡಿದೆತ್ತಿ ನಿಲ್ಲಿಸಲು ಹಾಗೂ ಅಭಿನಯ ಮಾಡಿ ತೋರಿಸಬೇಕಾಗುತ್ತದೆ. ವೃತ್ತ ಸಭೆ, ತಾಯಂದಿರ ಸಭೆ ಮತ್ತು ಮನೆ ಭೇಟಿ ನಿರ್ವಹಿಸಬೇಕಾಗುತ್ತದೆ. ಆದ ಕಾರಣ ಕಿವುಡರು, ಮೂಕರು, ಬುದ್ಧಿಮಾಂದ್ಯರು, ಮಾನಸಿಕ ಅಸ್ವಸ್ಥರು, ಕಾರ್ಯಕರ್ತೆ ಹುದ್ದೆಗೆ ಅರ್ಹರಿರುವುದಿಲ್ಲ. ಇತರೆ ದೈಹಿಕ ಅಂಗವಿಕಲ್ ಶೇ.60% ಮೀರದಂತೆ ಇರುವವರು ಮತ್ತು ಶಾಲಾಪೂರ್ವ ಶಿಕ್ಷಣ ನಡೆಸಲು ಸಮರ್ಥವಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು. ಈ ಕುರಿತು ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಲಗತ್ತಿಸಬೇಕು. ಅಂಗವಿಕಲರು ಪ್ರಸ್ತುತ ತಾವು ಎಲ್ಲಿ ವಾಸವಿರುವುದಾಗಿ ವಾಸಸ್ಥಳ ಧೃಡೀಕರಣ ಸಲ್ಲಿಸುತ್ತಾರೋ ಆ ಸ್ಥಳವನ್ನೇ ಅವರ ವಾಸಸ್ಥಳ ಎಂದು ಪರಿಗಣಿಸಲಾಗುವುದು. ಅಂಗವಿಕಲ ಅಭ್ಯರ್ಥಿಗಳ ಅಂಗವಿಕಲತೆ ಪ್ರಮಾಣದ ಬಗ್ಗೆ ಸಂಶಯ ಉಂಟಾದಲ್ಲಿ ಪುನರ್ ಪರಿಶೀಲಿಸುವ ಅಧಿಕಾರವನ್ನು ಆಯ್ಕೆ ಸಮಿತಿ ಹೊಂದಿರುತ್ತದೆ. ಒಂದೇ ಹುದ್ದೆಗೆ ಒಂದಕ್ಕಿಂತ ಹೆಚ್ಚು ಅಂಗವಿಕಲರು ಅರ್ಜಿ ಸಲ್ಲಿಸಿದ್ದಲ್ಲಿ ಗರಿಷ್ಟ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುವುದು.