2022: ವಿಭಾಗದಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಅರ್ಜಿ ಆಹ್ವಾನಿಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಯುದ್ಧ ವಾಹನಗಳ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆ ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಜನವರಿ 27ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಚೆನ್ನೈ(ಜ.5):ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ( -) - ಯುದ್ಧ ವಾಹನಗಳ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆ ( & -) ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಈ ಜಾಹೀರಾತನ್ನು ಪ್ರಕಟಿಸಿದ ದಿನಾಂಕದಿಂದ 30 ದಿನಗಳ ಒಳಗೆ (ಜನವರಿ 27, 2022) ಒಳಗೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ನಿಗದಿತ ನಮೂನೆಯ ಮೂಲಕ ಕಳುಹಿಸಬಹುದು. ಹೆಚ್ಚಿನ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್..inಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಡಿಆರ್‌ಡಿಒ ಜೂನಿಯರ್ ರಿಸರ್ಚ್ ಫೆಲೋ ( ) ಹುದ್ದೆಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್​ ಪೂರ್ಣಗೊಳಿಸಿರಬೇಕು. ಪದವಿ ಮತ್ತು ಸ್ನಾತಕೋತ್ತರ ಮಟ್ಟದಲ್ಲಿ ಮೊದಲ ವಿಭಾಗದಲ್ಲಿ ಎಂಇ/ಎಂಟೆಕ್​ ಅಥವಾ ಗೇಟ್​ ಸ್ಕೋರ್ ಪೂರ್ಣಗೊಳಿಸಿರಬೇಕು. ವಯೋಮಿತಿ:ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಕೆಟಗರಿಯ ಅಭ್ಯರ್ಥಿಗಳ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳ ವಯಸ್ಸು ಗರಿಷ್ಠ 31 ವರ್ಷ ಮೀರಿರಬಾರದು. / ಅಭ್ಯರ್ಥಿಗಳ ವಯಸ್ಸು ಗರಿಷ್ಠ 33 ವರ್ಷ ಮೀರಿರಬಾರದು. ಅಧಿಸೂಚನೆಯನ್ನು ಓದಲುಇಲ್ಲಿ ಕ್ಲಿಕ್ ಮಾಡಿ ಆಯ್ಕೆ ಪ್ರಕ್ರಿಯೆ:ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ಪರೀಕ್ಷೆ ಮತ್ತು /ಲಿಖಿತ ಪರೀಕ್ಷೆಯ ಒಟ್ಟು ಅಂಕಗಳ ಶಿಸ್ತುವಾರು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂತಿಮ ಫಲಿತಾಂಶವನ್ನು ವೆಬ್‌ಸೈಟ್ .. ನಲ್ಲಿ ಪ್ರಕಟಿಸಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 31,000 ಮಾಸಿಕ ವೇತನ ಸಿಗಲಿದೆ. ಮತ್ತು ಚೆನ್ನೈನಲ್ಲಿ ಉದ್ಯೋಗ ಮಾಡಬೇಕಾಗುತ್ತದೆ. 2022: ನೋಟು ಮುದ್ರಣಾಲಯದಲ್ಲಿ 1 ಲಕ್ಷದವರೆಗೆ ವೇತನದ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತಾಪಮಾನ ತಡೆಯಬಲ್ಲ ಸೇನಾ ಉಡುಪು ಭಾರತದಲ್ಲೇ ಅಭಿವೃದ್ಧಿ!:ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು () ಐದು ಭಾರತೀಯ ಕಂಪನಿಗಳಿಗೆ ಮಿಲಿಟರಿ ದರ್ಜೆಯ ಬಟ್ಟೆಗಳನ್ನು ತಯಾರಿಸುವ ತಂತ್ರಜ್ಞಾನವನ್ನು ಹಸ್ತಾಂತರಿಸಿದೆ. ಇದು ಹಿಮಾಲಯದ ಶಿಖರಗಳಲ್ಲಿ ಸೇನೆ ತನ್ನ ಕಾರ್ಯಾಚರಣೆಯನ್ನು ನಡೆಸಲು ವಿದೇಶಿಗಳಿಂದ ತೀವ್ರವಾದ ಶೀತ ಹವಾಮಾನದ ಉಡುಪುಗಳನ್ನು ( ) ಆಮದು ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಲಿದೆ. ಈ ತಂತ್ರಜ್ಞಾನವನ್ನು ದೇಶೀಯ ಕಂಪನಿಗಳಿಗೆ ವರ್ಗಾಯಿಸಲಾಗಿದ್ದೂ ಇದರಿಂದ ಅವರು ಮಿಲಿಟರಿ ದರ್ಜೆಯ ( ) ಬಟ್ಟೆಗಳನ್ನು ಭಾರತೀಯ ಸೇನೆಗೆ ನೀಡುವುದಲ್ಲದೇ ಇತರ ದೇಶಗಳಿಗೆ ರಫ್ತು ಕೂಡ ಮಾಡಬಹುದಾಗಿದೆ. : 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭ 50 ಡಿಗ್ರಿ ಸೆಲ್ಸಿಯಸ್ ತಾಪಮಾನ ತಡೆಯಬಲ್ಲ ಉಡುಪು!:ಡಿಆರ್‌ಡಿಓದ ದೆಹಲಿ ಮೂಲದ ಲ್ಯಾಬ್ ಡಿಫೆನ್ಸ್ ಇನ್‌ಸ್ಟಿಟ್ಯೂಟ್ ಆಫ್ ಫಿಸಿಯಾಲಜಿ ಅಂಡ್ ಅಲೈಡ್ ಸೈನ್ಸಸ್ () ವಿನ್ಯಾಸ ಮತ್ತು ಅಭಿವೃದ್ಧಿಪಡಿಸಿದೆ. ಈ ತೀವ್ರವಾದ ಶೀತ ಹವಾಮಾನದ ಉಡುಪು ಮೂರು-ಪದರದ ವ್ಯವಸ್ಥೆಯಾಗಿದ್ದು, ಇದು +15 ಡಿಗ್ರಿ ಸೆಲ್ಸಿಯಸ್‌ನಿಂದ -50 ಡಿಗ್ರಿ ಸೆಲ್ಸಿಯಸ್ ನಡುವೆ ಉಷ್ಣ ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾಗಿದೆ. ವಿವಿಧ ಹಂತದ ದೈಹಿಕ ಚಟುವಟಿಕೆಯ ಸಮಯದಲ್ಲಿ ಹಿಮಾಲಯ ಪ್ರದೇಶಗಳಲ್ಲಿನ ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ಹೊಸ ತೀವ್ರವಾದ ಶೀತ ಹವಾಮಾನದ ಉಡುಪುಗಳನ್ನು ಐದು ವಿವಧ ದೈಹಿಕ ಚಟುವಟಿಕೆಗಳಿಗೆ ವಿನ್ಯಾಸಗೊಳಿಸಲಾಗಿದೆ.