2022: ಸ್ಪೋರ್ಟ್ಸ್​ ಕೋಟಾದಡಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾದ ಆಗ್ನೇಯ ರೈಲ್ವೆ ಆಗ್ನೇಯ ರೈಲ್ವೆ ಯಲ್ಲಿ ಖಾಲಿ ಇರುವ 21 ಹುದ್ದೆಗಳನ್ನು ಭರ್ತಿ ಮಾಡಲು ಸ್ಪೋರ್ಟ್ಸ್​ ಕೋಟಾದಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 2ರೊಳಗೆ ಅರ್ಜಿ ಸಲ್ಲಿಸಬಹುದು ಬೆಂಗಳೂರು(ಜ.3):ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಆಗ್ನೇಯ ರೈಲ್ವೆ( ) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೋರ್ಟ್ಸ್​ ಕೋಟಾ ( ) ಆಧಾರದಲ್ಲಿ ಒಟ್ಟು 21 ಸ್ಪೋರ್ಟ್ಸ್​ ಪರ್ಸನ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ () ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 3ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 2, 2022. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣhttps://.../ಗೆ ಭೇಟಿ ನೀಡಬಹುದು. ಶೈಕ್ಷಣಿಕ ವಿದ್ಯಾರ್ಹತೆ:ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು. ಮತ್ತು ರಾಜ್ಯ ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಪ್ರಮಾಣ ಪತ್ರ ಹೊಂದಿರಬೇಕು. ವಯೋಮಿತಿ:ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್​ ಕೋಟಾ ಸ್ಪೋರ್ಟ್ಸ್​ ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 18-25 ವರ್ಷದೊಳಗಿರಬೇಕು. ವರ್ಗಗಳ ಆಧಾರದಲ್ಲಿ ವಯೋಮಿತಿ ಸಡಿಲಿಕೆ ಇದೆ. 2022: ಮಾಸಿಕ 87,000 ರೂ ವೇತನ , ಆಯುಷ್ ವಿಭಾಗದಲ್ಲಿ ಮ್ಯಾನೇಜರ್ ಅರ್ಜಿ ಶುಲ್ಕ:ಆಗ್ನೇಯ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ //ಮಹಿಳೆ/ಅಲ್ಪಸಂಖ್ಯಾತ/ ಅಭ್ಯರ್ಥಿಗಳ ಕುಟುಂಬದ ಆದಾಯವು ವಾರ್ಷಿಕ 50000/- ಕ್ಕಿಂತ ಕಡಿಮೆ ಇದ್ದರೆ 250 ರೂ. ಅರ್ಜಿ ಶುಲ್ಕ. ಇತರ ಎಲ್ಲಾ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಆನ್​ಲೈನ್​ ಪೇಮೆಂಟ್​​ ಮೂಲಕ ಅರ್ಜಿ ಶುಲ್ಕ ಪಾವತಿಸಲು ಅಧಿಸೂಚನೆಯಲ್ಲಿ ಹೇಳಲಾಗಿದೆ. ಆಯ್ಕೆ ಪ್ರಕ್ರಿಯೆ:ಆಗ್ನೇಯ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ವೀಕೃತ ಅರ್ಜಿಯ ಆಧಾರದಲ್ಲಿ ಶಾರ್ಟ್​​ಲಿಸ್ಟಿಂಗ್ ಮಾಡಿ, ಕ್ರೀಡಾ ಪ್ರಯೋಗಗಳು, ಕ್ರೀಡಾ ಸಾಧನೆ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಉದ್ಯೋಗ ದೊರೆಯಲಿದೆ. ವೇತನ:ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ. ರೈಲ್ವೇ ಇಲಾಖೆಯ ಅಧಿಸೂಚನೆಯನ್ನು ಓದಲುಇಲ್ಲಿ ಕ್ಲಿಕ್ ಮಾಡಿ 2022: ಜಲ ವಿದ್ಯುತ್ ಶಕ್ತಿ ನಿಗಮದಲ್ಲಿ 1.6ಲಕ್ಷ ವೇತನದ ಟ್ರೈನಿ ಇಂಜಿನಿಯರ್ ಖಾಲಿ ಇರುವ 21 ಹುದ್ದೆಗಳಿಗೆ ಸ್ಪೋರ್ಟ್ಸ್​ ಕೋಟಾದಡಿ ಅರ್ಜಿ ಆಹ್ವಾನಿಸಿದ ಪಶ್ಚಿಮ ಮಧ್ಯ ರೈಲ್ವೆ:ಪಶ್ಚಿಮ ಮಧ್ಯ ರೈಲ್ವೇ ( )ನೇಮಕಾತಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 21 ಸ್ಪೋರ್ಟ್ಸ್​ ಪರ್ಸನ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ಪೋರ್ಟ್ಸ್​ ಕೋಟಾ, 10ನೇ ತರಗತಿ ಹಾಗೂ 12ನೇ ತರಗತಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು ಆನ್​ಲೈನ್​() ಮೂಲಕ ಅರ್ಜಿ ಸಲ್ಲಿಸಲು ಜನವರಿ 22 ಕೊನೆ ದಿನವಾಗಿದೆ. ಅಭ್ಯರ್ಥಿಗಳು ಪಶ್ಚಿಮ ಮಧ್ಯ ರೈಲ್ವೆಯ ಅಧಿಕೃತ ವೆಬ್​​ ತಾಣ ​...inಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ. ವಿದ್ಯಾರ್ಹತೆ ಮತ್ತು ವಯೋಮಿತಿ:ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ಸ್ಪೋರ್ಟ್ಸ್​ ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು. ಜೊತೆಗೆ ಟೆಕ್ನಿಕಲ್​ ಹುದ್ದೆಗಳಿಗೆ ಐಟಿಐ ಪಾಸಾಗಿರಬೇಕು. ಅಭ್ಯರ್ಥಿಗಳ ವಯಸ್ಸು 18-25 ವರ್ಷದೊಳಗಿರಬೇಕು. ಅಭ್ಯರ್ಥಿಗಳಿಗೆ 10 ವರ್ಷ, ಎಸ್​​ಸಿ/ಎಸ್​ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.